AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯೂಟಿ ಅವರ್ಸ್​ನಲ್ಲಿ ಮಹಿಳಾ ಸಿಬ್ಬಂದಿ, ವಿದ್ಯಾರ್ಥಿನಿಯರ ಜೊತೆ ಬಿಂದಾಸ್ ಸ್ಟೆಪ್ಸ್ ಹಾಕಿದ ಮಿಮ್ಸ್ ಫಾರ್ಮಸಿ ಇಂಚಾರ್ಚ್, ವಿಡಿಯೋ ವೈರಲ್

ಮಂಡ್ಯದ ಮಿಮ್ಸ್ ಮೆಡಿಕಲ್ ಕಾಲೇಜ್​ನ ಫಾರ್ಮಸಿ ಇಂಚಾರ್ಜ್ ಕೃಷ್ಣೇಗೌಡ ಕೇಕ್ ಕತ್ತರಿಸಿ ವೈರಲ್ ರೀಲ್ಸ್​ಗೆ ಸೊಂಟ ಬಳುಕಿಸಿದ್ದಾರೆ.

ಡ್ಯೂಟಿ ಅವರ್ಸ್​ನಲ್ಲಿ ಮಹಿಳಾ ಸಿಬ್ಬಂದಿ, ವಿದ್ಯಾರ್ಥಿನಿಯರ ಜೊತೆ ಬಿಂದಾಸ್ ಸ್ಟೆಪ್ಸ್ ಹಾಕಿದ ಮಿಮ್ಸ್ ಫಾರ್ಮಸಿ ಇಂಚಾರ್ಚ್, ವಿಡಿಯೋ ವೈರಲ್
ಬಿಂದಾಸ್ ಸ್ಟೆಪ್ಸ್ ಹಾಕಿದ ಮಿಮ್ಸ್ ಫಾರ್ಮಸಿ ಇಂಚಾರ್ಚ್
TV9 Web
| Edited By: ಆಯೇಷಾ ಬಾನು|

Updated on:Feb 19, 2023 | 9:34 AM

Share

ಮಂಡ್ಯ: ಪದೇ ಪದೇ ಒಂದಲ್ಲ ಒಂದು ವಿವಾದದಿಂದಲೇ ಮಿಮ್ಸ್ ಕುಖ್ಯಾತಿ ಪಡೆಯುತ್ತಿದೆ. ಮಂಡ್ಯ ಮಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಈಗ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಡ್ಯೂಟಿ ಅವರ್ಸ್​ನಲ್ಲಿ ಮಹಿಳಾ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರ ಜೊತೆ ಫಾರ್ಮಸಿಸ್ ಬಿಂದಾಸ್ ಸ್ಟೆಪ್ಸ್ ಹಾಕಿದ್ದಾರೆ.

ಮಂಡ್ಯದ ಮಿಮ್ಸ್ ಮೆಡಿಕಲ್ ಕಾಲೇಜ್​ನ ಫಾರ್ಮಸಿ ಇಂಚಾರ್ಜ್ ಕೃಷ್ಣೇಗೌಡ ಕೇಕ್ ಕತ್ತರಿಸಿ ವೈರಲ್ ರೀಲ್ಸ್​ಗೆ ಸೊಂಟ ಬಳುಕಿಸಿದ್ದಾರೆ. ತಮ್ಮ ಕಚೇರಿಯಲ್ಲೇ ಕೇಕ್ ಕತ್ತರಿಸಿ ಮಹಿಳಾ ಸಿಬ್ಬಂದಿ ಜೊತೆ ಸ್ಟೆಪ್ಸ್ ಹಾಕಿದ್ದು ಕೆಲಸ ಬಿಟ್ಟು ರೀಲ್ಸ್ ಮಾಡೋದ್ರಲ್ಲಿ ಬ್ಯುಸಿಯಾಗಿದ್ದಾರೆ ಎಂದು ಕೆಲವರು ಆಕ್ರೋಶ ಹೊರ ಹಾಕಿದ್ದಾರೆ.

ಆನ್​​ಲೈನ್ ಜೂಜಿಗೆ ವ್ಯಕ್ತಿ ಬಲಿ?

ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಮಾದಪಟ್ಟಣದಲ್ಲಿ ಆನ್​​ಲೈನ್ ಜೂಜಿಗೆ ವ್ಯಕ್ತಿ ಬಲಿಯಾಗಿದ್ದಾರೆ ಎನ್ನಲಾಗುತ್ತಿದೆ. ಮಂಜುನಾಥ್(34) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆನ್​​ಲೈನ್​​ ಜೂಜು ಆಡಲು ಮಂಜುನಾಥ್ ಸ್ನೇಹಿತರಿಂದ ಸಾಲ ಪಡೆದಿದ್ದರು. ಸಾಲ ತೀರಿಸಲಾಗದೆ ದನದ ಕೊಟ್ಟಿಗೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಡಿನಶಿವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ದೊಡ್ಡಬಳ್ಳಾಪುರ: ಕೊಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳ ಮೇಲೆ ಪೊಲೀಸ್​​ ಫೈರಿಂಗ್​

ಶಿಗ್ಗಾಂವಿ: ಎರಡು ಗುಂಪುಗಳ ನಡುವೆ ಗಲಾಟೆ, 8 ಜನ ಯುವಕರಿಗೆ ಚಾಕು ಇರಿತ

ಹಾವೇರಿ: ಎರಡು ಗುಂಪುಗಳ ನಡುವೆ ಗಲಾಟೆ ನಡೆದು 8 ಜನ ಯುವಕರಿಗೆ ಚಾಕು ಇರಿದ ಘಟನೆ ಜಿಲ್ಲೆಯ ಶಿಗ್ಗಾಂವಿ (Shiggaon) ತಾಲೂಕಿನ ಕಮಲಾ ನಗರ (ತಡಸ ತಾಂಡಾ)ದಲ್ಲಿ ನಡೆದಿದೆ. ಗಲಾಟೆಯಲ್ಲಿ ರವಿ ಲಮಾಣಿ, ಶಂಕರ್ ಲಮಾಣಿ, ರಾಜು ಲಮಾಣಿ, ಮಹೇಶ್‌ ಲಮಾಣಿ, ಲಾಲಪ್ಪ ಲಮಾಣಿ, ಹನುಮಂತ ಪೂಜಾರಿ, ಅಕ್ಷಯ್‌ ಲಮಾಣಿ ಎಂಬುವವರಿಗೆ ಚಾಕು ಇರಿಯಲಾಗಿದೆ. ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿ ಹನುಮಂತ ಸೇರಿ 8 ಜನರ ವಿರುದ್ಧ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಇನ್ನು ಘರ್ಷಣೆ ಗ್ರಾಮದ ಬಸ್ ನಿಲ್ದಾಣದ ಜಾಗ ವಿಚಾರವಾಗಿ ನಡೆದ ಎಂದು ಹೇಳಲಾಗುತ್ತಿದೆ. ದುಷ್ಕರ್ಮಿಗಳು ಖಾರದಪುಡಿ ಎರಚಿ ಚಾಕು, ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆಯಲ್ಲಿ 8 ಜನರಿಗೆ ತಲೆ, ಕೈ, ಬೆನ್ನು ಸೇರಿ ದೇಹದ ಇತರ ಭಾಗಗಳಲ್ಲಿ ಗಾಯಗಳಾಗಿದ್ದು, ಓರ್ವನ ಕೈ ಬೆರಳು ಕತ್ತರಿಸಿದ್ದು, ಮತ್ತೊಬ್ಬ ಯುವಕನ ಸ್ಥಿತಿ ಗಂಭೀರವಾಗಿದೆ. ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 9:34 am, Sun, 19 February 23

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್