
ಮಂಡ್ಯ: ಪದೇ ಪದೇ ಒಂದಲ್ಲ ಒಂದು ವಿವಾದದಿಂದಲೇ ಮಿಮ್ಸ್ ಕುಖ್ಯಾತಿ ಪಡೆಯುತ್ತಿದೆ. ಮಂಡ್ಯ ಮಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಈಗ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಡ್ಯೂಟಿ ಅವರ್ಸ್ನಲ್ಲಿ ಮಹಿಳಾ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರ ಜೊತೆ ಫಾರ್ಮಸಿಸ್ ಬಿಂದಾಸ್ ಸ್ಟೆಪ್ಸ್ ಹಾಕಿದ್ದಾರೆ.
ಮಂಡ್ಯದ ಮಿಮ್ಸ್ ಮೆಡಿಕಲ್ ಕಾಲೇಜ್ನ ಫಾರ್ಮಸಿ ಇಂಚಾರ್ಜ್ ಕೃಷ್ಣೇಗೌಡ ಕೇಕ್ ಕತ್ತರಿಸಿ ವೈರಲ್ ರೀಲ್ಸ್ಗೆ ಸೊಂಟ ಬಳುಕಿಸಿದ್ದಾರೆ. ತಮ್ಮ ಕಚೇರಿಯಲ್ಲೇ ಕೇಕ್ ಕತ್ತರಿಸಿ ಮಹಿಳಾ ಸಿಬ್ಬಂದಿ ಜೊತೆ ಸ್ಟೆಪ್ಸ್ ಹಾಕಿದ್ದು ಕೆಲಸ ಬಿಟ್ಟು ರೀಲ್ಸ್ ಮಾಡೋದ್ರಲ್ಲಿ ಬ್ಯುಸಿಯಾಗಿದ್ದಾರೆ ಎಂದು ಕೆಲವರು ಆಕ್ರೋಶ ಹೊರ ಹಾಕಿದ್ದಾರೆ.
ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಮಾದಪಟ್ಟಣದಲ್ಲಿ ಆನ್ಲೈನ್ ಜೂಜಿಗೆ ವ್ಯಕ್ತಿ ಬಲಿಯಾಗಿದ್ದಾರೆ ಎನ್ನಲಾಗುತ್ತಿದೆ. ಮಂಜುನಾಥ್(34) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆನ್ಲೈನ್ ಜೂಜು ಆಡಲು ಮಂಜುನಾಥ್ ಸ್ನೇಹಿತರಿಂದ ಸಾಲ ಪಡೆದಿದ್ದರು. ಸಾಲ ತೀರಿಸಲಾಗದೆ ದನದ ಕೊಟ್ಟಿಗೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಡಿನಶಿವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ದೊಡ್ಡಬಳ್ಳಾಪುರ: ಕೊಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್
ಹಾವೇರಿ: ಎರಡು ಗುಂಪುಗಳ ನಡುವೆ ಗಲಾಟೆ ನಡೆದು 8 ಜನ ಯುವಕರಿಗೆ ಚಾಕು ಇರಿದ ಘಟನೆ ಜಿಲ್ಲೆಯ ಶಿಗ್ಗಾಂವಿ (Shiggaon) ತಾಲೂಕಿನ ಕಮಲಾ ನಗರ (ತಡಸ ತಾಂಡಾ)ದಲ್ಲಿ ನಡೆದಿದೆ. ಗಲಾಟೆಯಲ್ಲಿ ರವಿ ಲಮಾಣಿ, ಶಂಕರ್ ಲಮಾಣಿ, ರಾಜು ಲಮಾಣಿ, ಮಹೇಶ್ ಲಮಾಣಿ, ಲಾಲಪ್ಪ ಲಮಾಣಿ, ಹನುಮಂತ ಪೂಜಾರಿ, ಅಕ್ಷಯ್ ಲಮಾಣಿ ಎಂಬುವವರಿಗೆ ಚಾಕು ಇರಿಯಲಾಗಿದೆ. ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿ ಹನುಮಂತ ಸೇರಿ 8 ಜನರ ವಿರುದ್ಧ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
ಇನ್ನು ಘರ್ಷಣೆ ಗ್ರಾಮದ ಬಸ್ ನಿಲ್ದಾಣದ ಜಾಗ ವಿಚಾರವಾಗಿ ನಡೆದ ಎಂದು ಹೇಳಲಾಗುತ್ತಿದೆ. ದುಷ್ಕರ್ಮಿಗಳು ಖಾರದಪುಡಿ ಎರಚಿ ಚಾಕು, ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆಯಲ್ಲಿ 8 ಜನರಿಗೆ ತಲೆ, ಕೈ, ಬೆನ್ನು ಸೇರಿ ದೇಹದ ಇತರ ಭಾಗಗಳಲ್ಲಿ ಗಾಯಗಳಾಗಿದ್ದು, ಓರ್ವನ ಕೈ ಬೆರಳು ಕತ್ತರಿಸಿದ್ದು, ಮತ್ತೊಬ್ಬ ಯುವಕನ ಸ್ಥಿತಿ ಗಂಭೀರವಾಗಿದೆ. ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 9:34 am, Sun, 19 February 23