AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿಗಾರಿಕೆ ಸ್ಥಗಿತದಿಂದ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗಿದೆ: ಶಾಸಕ ರವೀಂದ್ರ ಶ್ರೀಕಂಠಯ್ಯ ಅಸಮಾಧಾನ

ಜನ ಆಕ್ರೋಶಗೊಂಡು ಜನಪ್ರತಿನಿಧಿಗಳನ್ನು ಪ್ರಶ್ನಿಸುತ್ತಿದ್ದಾರೆ. ಅಧಿಕಾರಿಗಳು ಅಕ್ರಮ ಗಣಿಗಾರಿಕೆಯನ್ನ ಸಕ್ರಮ ಮಾಡಲಿ. ಸಕ್ರಮ ಇರುವುದನ್ನು ಆರಂಭಿಸಲು ಅನುಮತಿ ನೀಡಲಿ. ಇಲ್ಲದಿದ್ರೆ ಮಂಡ್ಯ ಜಿಲ್ಲೆಗೆ ದೊಡ್ಡ ಅನಾಹುತ ಎದುರಾಗಲಿದೆ.

ಗಣಿಗಾರಿಕೆ ಸ್ಥಗಿತದಿಂದ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗಿದೆ: ಶಾಸಕ ರವೀಂದ್ರ ಶ್ರೀಕಂಠಯ್ಯ ಅಸಮಾಧಾನ
ಶಾಸಕ ರವೀಂದ್ರ ಶ್ರೀಕಂಠಯ್ಯ
TV9 Web
| Updated By: sandhya thejappa|

Updated on:Aug 11, 2021 | 12:27 PM

Share

ಮಂಡ್ಯ: ಗಣಿಗಾರಿಕೆ ಸ್ಥಗಿತದಿಂದ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಅಸಮಾಧಾನ ಹೊರಹಾಕಿದ್ದಾರೆ. ರಾಜ್ಯದಲ್ಲೇ ಇಲ್ಲದ ಕಾನೂನು ಮಂಡ್ಯ ಜಿಲ್ಲೆಯಲ್ಲಿದೆ. ದುಪ್ಪಟ್ಟು ಹಣ ನೀಡಿ ಸಾಮಗ್ರಿ ತರಿಸಿಕೊಳ್ಳುವ ಪರಿಸ್ಥಿತಿ ಬಂದಿದೆ. ಬಿಎಸ್ವೈ ಸಿಎಂ ಆಗಿದ್ದ ವೇಳೆ ಅಕ್ರಮ ಗಣಿಗಾರಿಕೆಯನ್ನ ಸಕ್ರಮ ಮಾಡಬೇಕು ಅಂತ ಹೇಳಿದ್ದರು. ಜನಸಾಮಾನ್ಯರಿಗೆ ತೊಂದರೆ ಕೊಡಬಾರದು ಎಂದು ತಿಳಿಸಿದ್ದರು. ಆದರೆ ಮಂಡ್ಯ ಜಿಲ್ಲೆ ಅಧಿಕಾರಿಗಳ ನಡವಳಿಕೆ ನನಗೆ ಆಶ್ಚರ್ಯ ತಂದಿದೆ ಅಂತ ಶಾಸಕ ರವೀಂದ್ರ ಶ್ರೀಕಂಠಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಜನ ಆಕ್ರೋಶಗೊಂಡು ಜನಪ್ರತಿನಿಧಿಗಳನ್ನು ಪ್ರಶ್ನಿಸುತ್ತಿದ್ದಾರೆ. ಅಧಿಕಾರಿಗಳು ಅಕ್ರಮ ಗಣಿಗಾರಿಕೆಯನ್ನ ಸಕ್ರಮ ಮಾಡಲಿ. ಸಕ್ರಮ ಇರುವುದನ್ನು ಆರಂಭಿಸಲು ಅನುಮತಿ ನೀಡಲಿ. ಇಲ್ಲದಿದ್ರೆ ಮಂಡ್ಯ ಜಿಲ್ಲೆಗೆ ದೊಡ್ಡ ಅನಾಹುತ ಎದುರಾಗಲಿದೆ. ಜಿಲ್ಲೆಯಲ್ಲಿ ಸರ್ಕಾರಿ ಕೆಲಸ ನಿಂತಿವೆ, ಅಭಿವೃದ್ಧಿ ಕುಂಠಿತವಾಗಿದೆ ಅಂತ ರವೀಂದ್ರ ಶ್ರೀಕಂಠಯ್ಯ ತಿಳಿಸಿದರು.

ಸಿಎಂ ಗಮನಕ್ಕೆ ತರಲು ಜೆಡಿಎಸ್ ನಿರ್ಧಾರ ಜಿಲ್ಲೆಯ ಅಕ್ರಮ ಗಣಿಗಾರಿಕೆ ಪ್ರಕರಣವನ್ನು ರಾಜ್ಯದ ಮುಖ್ಯಮಂತ್ರಿ ಅಂಗಳಕ್ಕೆ ತೆಗೆದುಕೊಂಡು ಹೋಗಲು ಜೆಡಿಎಸ್ (JDS) ನಿರ್ಧರಿಸಿದೆ. ಗಣಿಗಾರಿಕೆ ವಿಚಾರವನ್ನು ಸಿಎಂ ಬಸವರಾಜ ಬೊಮ್ಮಾಯಿ ಗಮನಕ್ಕೆ ತರಲು ನಿರ್ಧರಿಸಿರುವ ಬಗ್ಗೆ ಮಾಹಿತಿ ನೀಡಿದ ಮೇಲುಕೋಟೆಯ ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು, ಗಣಿಗಾರಿಕೆಯನ್ನೇ ನಂಬಿ ಬದುಕು ಸಾಗಿಸುತ್ತಿದ್ದ ನೂರಾರು ಕುಟುಂಬಗಳು ಸಂಕಷ್ಟದಲ್ಲಿವೆ. ಗಣಿಗಾರಿಕೆ ವಿಚಾರವನ್ನು ಮುಖ್ಯಮಂತ್ರಿ ಬಳಿಗೆ ಕೊಂಡೊಯ್ಯಲು ನಿರ್ಧರಿಸಿದ್ದೇವೆ. ಜಿಲ್ಲೆಯ ಎಲ್ಲಾ ಶಾಸಕರು ಸಿಎಂ ಭೇಟಿ ಮಾಡಿ ಮನವರಿಕೆ ಮಾಡುತ್ತೇವೆ. ರಾಜಕಾರಣಿಗಳದ್ದು ಒಂದಲ್ಲ ಒಂದು ರೀತಿ ನಡೆದು ಹೋಗುತ್ತೆ. ಸಾಮಾನ್ಯ ಜನರಿಗೆ ನ್ಯಾಯ ದೊರಕಿಸಿ ಕೊಡಬೇಕಾಗಿರುವುದು ಎಲ್ಲರ ಜವಾಬ್ದಾರಿ ಅಂತ ತಿಳಿಸಿದ್ದಾರೆ.

ಇದನ್ನೂ ಓದಿ

ಮಂಡ್ಯ ಅಕ್ರಮ ಗಣಿಗಾರಿಕೆ ಪ್ರಕರಣ; ಸಿಎಂ ಗಮನಕ್ಕೆ ತರಲು ಜೆಡಿಎಸ್ ನಿರ್ಧಾರ

ಲೋಕಸಭೆಯಲ್ಲಿ ಅಕ್ರಮ ಗಣಿಗಾರಿಕೆ ಪ್ರಸ್ತಾಪ; ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸಂಸದೆ ಸುಮಲತಾ ಒತ್ತಾಯ

(MLA Ravindra Srikantaiah expresses displeasure over mining halt in Mandya)

Published On - 12:19 pm, Wed, 11 August 21