ಕಾಂಗ್ರೆಸ್​ಗೆ ಮತ್ತಷ್ಟು ಬಲ; NDA ಒಕ್ಕೂಟದ ಬಿಜೆಪಿ-ಜೆಡಿಎಸ್ ಸೋಲಿಸಲು ಪಣ ತೊಟ್ಟ ಕರ್ನಾಟಕ ರಾಜ್ಯ ರೈತ ಸಂಘ

ಕರ್ನಾಟಕ ರಾಜ್ಯ ರೈತ ಸಂಘ ಕಾಂಗ್ರೆಸ್​ಗೆ ಸಪೂರ್ಟ್ ಮಾಡಲು ಮುಂದಾಗಿದೆ. ಮಂಡ್ಯದಲ್ಲಿ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಸುದ್ದಿಗೋಷ್ಠಿ ನಡೆಸಿ ಲೋಕಸಭಾ ಚುನಾವಣೆಯಲ್ಲಿ NDA ಒಕ್ಕೂಟದ ಬಿಜೆಪಿ-ಜೆಡಿಎಸ್ ಸೋಲಿಸಲು ಬಿಜೆಪಿ ಮತ್ತು ಮಿತ್ರ ಪಕ್ಷಗಳ ಸೋಲಿಸಿ ರೈತ ಸಮುದಾಯ ಉಳಿಸಿ ಎಂಬ ಘೋಷಣೆ ಪ್ರಚಾರ ನಡೆಸಲು ತೀರ್ಮಾನಿಸಿರುವುದಾಗಿ ತಿಳಿಸಿದ್ದಾರೆ.

ಕಾಂಗ್ರೆಸ್​ಗೆ ಮತ್ತಷ್ಟು ಬಲ; NDA ಒಕ್ಕೂಟದ ಬಿಜೆಪಿ-ಜೆಡಿಎಸ್ ಸೋಲಿಸಲು ಪಣ ತೊಟ್ಟ ಕರ್ನಾಟಕ ರಾಜ್ಯ ರೈತ ಸಂಘ
ಕರ್ನಾಟಕ ರಾಜ್ಯ ರೈತ ಸಂಘ
Follow us
ಪ್ರಶಾಂತ್​ ಬಿ.
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 26, 2024 | 3:14 PM

ಮಂಡ್ಯ, ಮಾರ್ಚ್​.26: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಗೆದ್ದುಬೀಗಲು ಕಾಂಗ್ರೆಸ್ (Congress) ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದೆ. ಇದರ ನಡುವೆ ಈಗ ಕಾಂಗ್ರೆಸ್​ಗೆ ಮತ್ತಷ್ಟು ಬಲ ತುಂಬಲ ಕರ್ನಾಟಕ ರಾಜ್ಯ ರೈತ ಸಂಘ ಮುಂದಾಗಿದೆ. NDA ಒಕ್ಕೂಟವನ್ನು ಸೋಲಿಸಲು ರೈತ ಸಂಘ ನಿರ್ಧಾರ ಮಾಡಿದ್ದು ಕಾಂಗ್ರೆಸ್ ಜೊತೆ ಕೈ ಜೋಡಿಸಿದೆ. ಲೋಕಸಭಾ ಚುನಾವಣೆಯಲ್ಲಿ NDA ಒಕ್ಕೂಟದ ಬಿಜೆಪಿ-ಜೆಡಿಎಸ್ ಸೋಲಿಸಲು ರೈತ ಸಂಘ ಪ್ಲಾನ್ ಮಾಡಿದ್ದು ಬಿಜೆಪಿ ಮತ್ತು ಮಿತ್ರ ಪಕ್ಷಗಳ ಸೋಲಿಸಿ ರೈತ ಸಮುದಾಯ ಉಳಿಸಿ ಎಂಬ ಘೋಷಣೆ ಪ್ರಚಾರ ನಡೆಸಲು ತೀರ್ಮಾನ ಮಾಡಿದೆ.

ರಾಜ್ಯಾದ್ಯಂತ ಶೀಘ್ರದಲ್ಲೇ ಕರ್ನಾಟಕ ರಾಜ್ಯ ರೈತ ಸಂಘ ಪ್ರಚಾರ ಆಂದೋಲನ ಆರಂಭಿಸಲಿದೆ. ಘೋಷವಾಕ್ಯದೊಂದಿಗೆ ಆಂದೋಲನ ನಡೆಸಲು ನಿರ್ಧಾರ ಮಾಡಿದ್ದಾರೆ. ಮಂಡ್ಯದಲ್ಲಿ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಸುದ್ದಿಗೋಷ್ಠಿ ನಡೆಸಿ ಆಂದೋಲನ ನಡೆಸುವ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಕಳೆದ 10 ವರ್ಷದಿಂದ ನರೇಂದ್ರ ಮೋದಿ ರೈತರಿಗೆ ಅನ್ಯಾಯ ಮಾಡಿದ್ದಾರೆ. NDA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತ ಕುಲ ಸಂಪೂರ್ಣ ನಾಶವಾಗುತ್ತದೆ. ಕೃಷಿ ತಿದ್ದುಪಡಿ ಕಾಯ್ದೆಗಳನ್ನ ಜಾರಿ ಮಾಡಿ ರೈತರಿಗೆ ಅನ್ಯಾಯ ಮಾಡಿದ್ದರು. ದೆಹಲಿಯಲ್ಲಿ ನಡೆದ ರೈತರ ಸಭೆಯಲ್ಲಿ ಸರ್ವಾನುಮತದಿಂದ NDA ಕಿತ್ತೊಗೆಯಲು ತೀರ್ಮಾನ ಮಾಡಲಾಗಿದೆ. ಬಿಜೆಪಿ ಸರ್ಕಾರ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಬಾರದು. ಶೀಘ್ರವಾಗಿ ರೈತರ ಉಳಿವಿಗಾಗಿ ಆಂದೋಲನ ನಡೆಸಲಾಗುತ್ತೆ ಎಂದು ತಿಳಿಸಿದರು.

ಇದನ್ನೂ ಓದಿ: ಶೃಂಗೇರಿ: ಬೆಂಗಳೂರು ಗ್ರಾಮಾಂತರದ ಬಗ್ಗೆ ಮಾತನಾಡುವುದಿಲ್ಲವೆಂದ ಡಿಕೆ ಶಿವಕುಮಾರ್, ಕಾರಣವೇನು?

ಮಂಡ್ಯ ಮೈತ್ರಿ ಅಭ್ಯರ್ಥಿ ಯಾರು?

ನಿನ್ನೆ ಬೆಂಗಳೂರಿನ ಜೆ.ಪಿ ನಗರ ನಿವಾಸದ ಬಳಿ ಬಂದಿದ್ದ ಮಂಡ್ಯ ಜಿಲ್ಲೆಯ ಬೆಂಬಲಿಗರು ಮಂಡ್ಯದಿಂದ ಹೆಚ್‌ಡಿ ಕುಮಾರಸ್ವಾಮಿ ಸ್ಪರ್ಧಿಸ್ಪೇಕು ಅಂತಾ ಒತ್ತಾಯಿಸಿದ್ರು. ನೀವು ಮಂಡ್ಯಕ್ಕೆ ಬನ್ನಿ ಅಂತಾ ಪಟ್ಟು ಹಿಡಿದಿದ್ರು. ಮಂಡ್ಯ ಬೆಂಬಲಿಗರನ್ನ ಸಮಾಧಾನ ಪಡಿಸಿದ್ದ ಹೆಚ್‌ಡಿಕೆ, ಚನ್ನಪಟ್ಟಣ ಮುಖಂಡರನ್ನ ಸಂಪರ್ಕಿಸಿ ನಿರ್ಧಾರ ಮಾಡೋದಾಗಿ ಹೇಳಿದ್ರು. ಆದ್ರೆ, ಮಂಡ್ಯದಲ್ಲಿ ಹೆಚ್‌ಡಿಕೆ ಸ್ಪರ್ಧೆಗೆ ಚನ್ನಪಟ್ಟಣ ಕಾರ್ಯಕರ್ತರು, ಮುಖಂಡರು ವಿರೋಧಿಸಿದ್ದಾರೆ.ಹೀಗಾಗಿ ಹೆಚ್‌ಡಿಕೆ ಎಲ್ಲಿಂದ ಸ್ಪರ್ಧಿಸ್ಬೇಕು ಅನ್ನೋ ಬಗ್ಗೆ ಗೊಂದಲ ಶುರುವಾಗಿದೆ.

ನೀವು ಮಾತ್ರ ಚನ್ನಪಟ್ಟಣ ಕ್ಷೇತ್ರ ಬಿಟ್ಟು ಹೋಗೋದು ಬೇಡ, ನೀವು ಚನ್ನಪಟ್ಟಣ ಬಿಟ್ಟು ಲೋಕಸಭೆಗೆ ಸ್ಪರ್ಧೆ ಮಾಡಿದ್ರೆ, ರಾಮನಗರ ಕ್ಷೇತ್ರ ನಮ್ಮ ಕೈತಪ್ಪಿ ಹೋಗುತ್ತೆ ಅಂತಾ ಚನ್ನಪಟ್ಟಣ ಕಾರ್ಯಕರ್ತರ ಹೇಳ್ತಿದ್ದಾರೆ. ಹೆಚ್‌ಡಿಕೆ ಇಲ್ಲದೇ ಚನ್ನಪಟ್ಟಣ ಜೆಡಿಎಸ್ ತೆಕ್ಕೆಗೆ ಪಡೆಯೋದು ಕಷ್ಟ. ರಾಮನಗರ ಜಿಲ್ಲೆಯ ಕಾರ್ಯಕರ್ತರಲ್ಲಿ ಉತ್ಸಾಹ ಕಡಿಮೆಯಾಗುತ್ತೆ. ಹೀಗಾಗಿ ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿಯವರನ್ನ ಕಣಕ್ಕಿಳಿಸಿ ಅಂತಾ ಚನ್ನಪಟ್ಟಣ ಮುಖಂಡರು ಹೆಚ್‌ಡಿಕೆ ಮೇಲೆ ಒತ್ತಡ ಹಾಕ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:02 pm, Tue, 26 March 24

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ