AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಬಾಗಿಲು ತೆರೆಯಲು ನಿರಾಕರಣೆ! ನಮ್ಮ ಮಗಳು ಯಾವುದೇ ಪ್ರತಿಕ್ರಿಯೆ ನೀಡಲ್ಲ; ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ತಂದೆ ಹೇಳಿಕೆ

ವಿದ್ಯಾರ್ಥಿನಿ ಮುಸ್ಕಾನ್ ಮನೆ ಮಂಡ್ಯದ ಗುತ್ತಲು ರಸ್ತೆಯಲ್ಲಿದೆ. ತೀರ್ಪು ಬಂದ ಬಳಿಕ ಮಾಧ್ಯಮದವರು ಪ್ರತಿಕ್ರಿಯೆ ಕೇಳಲು ತೆರಳಿದ್ದಾಗ ಮಾತನಾಡಲು ನಿರಾಕರಿಸಿದ್ದಾರೆ. ತೀರ್ಪು ಬರುವ ಮುನ್ನ ಇಂದು ಬೆಳಗ್ಗೆ ಸಂವಿಧಾನ ಹಾಗೂ ನಮ್ಮ ದೇವರ ಮೇಲೆ ವಿಶ್ವಾಸವಿದೆ ಅಂತ ಮುಸ್ಕಾನ್ ಎಂದಿದ್ದರು.

ಮನೆ ಬಾಗಿಲು ತೆರೆಯಲು ನಿರಾಕರಣೆ! ನಮ್ಮ ಮಗಳು ಯಾವುದೇ ಪ್ರತಿಕ್ರಿಯೆ ನೀಡಲ್ಲ; ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ತಂದೆ ಹೇಳಿಕೆ
ವಿದ್ಯಾರ್ಥಿನಿ ಮುಸ್ಕಾನ್
TV9 Web
| Edited By: |

Updated on:Mar 15, 2022 | 12:14 PM

Share

ಮಂಡ್ಯ: ಹಿಜಾಬ್ ವಿವಾದಕ್ಕೆ (Hijab Controversy) ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ. ಶಾಲೆ- ಕಾಲೇಜುಗಳಲ್ಲಿ ಹಿಜಾಬ್ ಧರಿಸುವಂತಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಈ ಮಹತ್ವದ ತೀರ್ಪಿಗೆ ಮಂಡ್ಯದ ವಿದ್ಯಾರ್ಥಿ ಮುಸ್ಕಾನ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಈ ಹಿಂದೆ ವಿದ್ಯಾರ್ಥಿ ಮುಸ್ಕಾನ್ ಕಾಲೇಜಿನ ಆವರಣದೊಳಗೆ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದರು. ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಬೆನ್ನಲ್ಲೆ ವಿಶ್ವ ಮಟ್ಟದಲ್ಲಿ ಬಾರಿ ಚರ್ಚೆಗೆ ಕಾರಣವಾಗಿತ್ತು.

ವಿದ್ಯಾರ್ಥಿನಿ ಮುಸ್ಕಾನ್ ಮನೆ ಮಂಡ್ಯದ ಗುತ್ತಲು ರಸ್ತೆಯಲ್ಲಿದೆ. ತೀರ್ಪು ಬಂದ ಬಳಿಕ ಮಾಧ್ಯಮದವರು ಪ್ರತಿಕ್ರಿಯೆ ಕೇಳಲು ತೆರಳಿದ್ದಾಗ ಮಾತನಾಡಲು ನಿರಾಕರಿಸಿದ್ದಾರೆ. ತೀರ್ಪು ಬರುವ ಮುನ್ನ ಇಂದು ಬೆಳಗ್ಗೆ ಸಂವಿಧಾನ ಹಾಗೂ ನಮ್ಮ ದೇವರ ಮೇಲೆ ವಿಶ್ವಾಸವಿದೆ ಅಂತ ಮುಸ್ಕಾನ್ ಎಂದಿದ್ದರು. ಆದರೆ ತೀರ್ಪು ಬಂದಾಗಿದೆ. ಹಿಜಾಬ್ ಧರಿಸುವಂತಿಲ್ಲ ಅಂತ ಹೈಕೋರ್ಟ್ ತಿಳಿಸಿದೆ.

ಮುಸ್ಕಾನ್ ಮನೆಯವರು ತಮ್ಮ ಮನೆಯ ಬಾಗಿಲು ತೆಗೆಯಲು ನಿರಾಕರಣೆ ಮಾಡಿದ್ದಾರೆ. ನಮ್ಮ ಮಗಳು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಅಂತ ಮುಸ್ಕಾನ್ ತಂದೆ ಹುಸೇನ್ ಖಾನ್ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಕ್ಕೆ ಹೇಳಿಕೆ ನೀಡಿದ ಮುಸ್ಕಾನ್ ತಂದೆ ಮಹಮದ್ ಹುಸೇನ್, ಕೋರ್ಟ್ ತೀರ್ಪು ನೀಡಿದೆ.  ಘಟನೆ ನಂತರ ಮುಸ್ಕಾನ್ ಕಾಲೇಜಿಗೆ ಹೋಗಿಲ್ಲ. ಇದೇ 24ಕ್ಕೆ ಆಕೆಗೆ ಪರೀಕ್ಷೆ ಇದೆ. ಇಸ್ಲಾಂ ಧರ್ಮದಲ್ಲಿನ ಹಿರಿಯರು ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ. ಸದ್ಯ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಹೋಗುವ ಬಗ್ಗೆ ಹೇಳಿದ್ದಾರೆ. ನೋಡೋಣ ಮುಂದೆ ಎಲ್ಲವೂ ಒಳ್ಳೆಯದಾಗುತ್ತದೆ ಎನ್ನುವ ವಿಶ್ವಾಸವಿದೆ. ಶಿಕ್ಷಣ ಧರ್ಮ ಎರಡು ಸಹಾ ಎರಡು ಕಣ್ಣುಗಳಿದ್ದಂತೆ. ಎರಡನ್ನು ಕಾಪಾಡಿಕೊಂಡು ಸಾಗಬೇಕಿದೆ. ಮುಂದೆ ನೋಡೋಣ ಯಾವ ರೀತಿ ಆಗುತ್ತದೆ ಎಂದು ಹೇಳಿದರು.

ಬೇರೆ ಧರ್ಮದ ಆಚರಣೆಯನ್ನು ಪ್ರಶ್ನಿಸಲು ಬುನಾದಿ ಮಾಡಿಕೊಟ್ಟಿದೆ; ಮುಸ್ಲಿಂ ಮುಖಂಡ ಅನ್ಸರ್ ಅಹಮದ್ ತೀರ್ಪು ಹಿಜಾಬ್ ಪರವಾಗಿ ಬರುತ್ತೆ ಅಂತಾ ಅಂದುಕೊಂಡಿದ್ದೆವು. ಹೈಕೋರ್ಟ್​ಗೆ ಮೇಲ್ವನವಿ ಸಲ್ಲಿಸುವ ಬಗ್ಗೆ ವಿದ್ಯಾರ್ಥಿನಿಯರ ಜೊತೆ ಚರ್ಚೆ ಮಾಡಲಾಗುವುದು. ಬೇರೆ ಧರ್ಮದವರು ತಮ್ಮ ಆಚರಣೆ ಶಾಲೆಯಲ್ಲಿ ಮಾಡುತ್ತಾರೆ. ಈ ತೀರ್ಪು, ಬೇರೆ ಧರ್ಮದ ಆಚರಣೆಯನ್ನು ಪ್ರಶ್ನಿಸಲು ಬುನಾದಿ ಮಾಡಿಕೊಟ್ಟಿದೆ. ಮುಂದಿನ ದಿನಗಳಲ್ಲಿ ಅದನ್ನು ನಾವು ವಿರೋಧಿಸಬೇಕಾಗುತ್ತದೆ ಅಂತ ಮಂಗಳೂರಿನಲ್ಲಿ ಟಿವಿ9ಗೆ ಮುಸ್ಲಿಂ ಮುಖಂಡ ಅನ್ಸರ್ ಅಹಮದ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಶೀಘ್ರದಲ್ಲೇ ಸುಪ್ರೀಂಕೋರ್ಟ್​ಗೆ ಮೇಲ್ಮನವಿ: ಅರ್ಜಿದಾರರ ಪರ ವಕೀಲರಿಂದ ಮಾಹಿತಿ

ಶಾಲೆ-ಕಾಲೇಜುಗಳಲ್ಲಿ ಹಿಜಾಬ್​ ಧರಿಸಲು ಅವಕಾಶವಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ: ಹೈಕೋರ್ಟ್​

Published On - 11:30 am, Tue, 15 March 22

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್