ಮೋದಿಯಿಂದಾಗಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಸಿಕ್ಕಿದ್ದು: ಪ್ರಭಾಕರ್‌ ಭಟ್

ಮುಸ್ಲಿಂ ಯುವಕರು ಮಾತ್ರ ಅಲ್ಲ. ಮುಸ್ಲಿಂ ಯುವತಿಯರು ಮೋಸ ಮಾಡುತ್ತಿದ್ದಾರೆ. ಹಿಂದೂ ಯುವಕ ಯುವತಿಯರನ್ನ ಲವ್ ಜಿಹಾದ್ ಮಾಡುತ್ತಿದ್ದಾರೆ. ನಿಮ್ಮಲ್ಲಿ ಯುವತಿ ಯುವಕರು ಇಲ್ಲವೇ. ನಮ್ಮನ್ನ ಯಾಕೆ ಟಾರ್ಗೆಟ್ ಮಾಡುತ್ತಿರಾ? ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಪ್ರಶ್ನಿಸಿದ್ದಾರೆ.

ಮೋದಿಯಿಂದಾಗಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಸಿಕ್ಕಿದ್ದು: ಪ್ರಭಾಕರ್‌ ಭಟ್
ಕಲ್ಲಡ್ಕ ಪ್ರಭಾಕರ್‌ ಭಟ್‌
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 24, 2023 | 2:21 PM

ಮಂಡ್ಯ, ಡಿಸೆಂಬರ್ 24): ಮುಸ್ಲಿಂ ಸಮುದಾಯದಲ್ಲಿ ಮಹಿಳೆಯರಿಗೆ ತ್ರಿವಳಿ ತಲಾಕ್ (Triple Talaq) ಹೇಳುವ ಅವಕಾಶ ಇತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ( Narendra Modi) ಅವರ ಸರ್ಕಾರದಿಂದಾಗಿ ತ್ರಿವಳಿ ತಲಾಕ್ ರದ್ದಾಗಿದೆ. ಬಹು ಪತ್ನಿತ್ವ ಪಿಡುಗು ಮತ್ತು ತ್ರಿವಳಿ ತಲಾಕ್‌ ಕಾಟದಿಂದಾಗಿ ಈ ಹಿಂದೆ ಮುಸಲ್ಮಾನ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ತ್ರಿವಳಿ ತಲಾಕ್‌ ರದ್ದುಪಡಿಸುವ ಮೂಲಕ ಅವರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರವ ಎಂದು ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ (Kalladka Prabhakar Bhat) ಹೇಳಿದ್ದಾರೆ.

ಇಂದು (ಡಿಸೆಂಬರ್ 24) ಮಂಡ್ಯ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್‌ ಭಟ್‌, ಮುಸ್ಲಿಂ ಯುವಕರು ಮಾತ್ರ ಅಲ್ಲ. ಮುಸ್ಲಿಂ ಯುವತಿಯರು ಮೋಸ ಮಾಡುತ್ತಿದ್ದಾರೆ. ಹಿಂದೂ ಯುವಕ ಯುವತಿಯರನ್ನ ಲವ್ ಜಿಹಾದ್ ಮಾಡುತ್ತಿದ್ದಾರೆ. ನಿಮ್ಮಲ್ಲಿ ಯುವತಿ ಯುವಕರು ಇಲ್ಲವೇ. ನಮ್ಮನ್ನ ಯಾಕೆ ಟಾರ್ಗೆಟ್ ಮಾಡುತ್ತಿರಾ? ಮೋದಿ ಸರ್ಕಾರ ಬಂದ ಮೇಲೆ ತಲಾಖ್ ಬಂತು. ಅವರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ ಎಂದರು.

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ತಾರಕಕ್ಕೇರಿದ ಹಿಜಾಬ್‌ ಸಂಘರ್ಷ: ಹಿಜಾಬ್‌ ಧರಿಸಿದ್ರೆ ಕೇಸರಿ ಶಾಲು ಎಚ್ಚರಿಕೆ

ಅಂಬೇಡ್ಕರ್ ದೇಶ ವಿಭಜನೆ ಮಾಡಬೇಡಿ ಅಂದಿದ್ದರು. ದೇಶವನ್ನ ಉಳಿಸಿಕೊಳ್ಳುವ ಮಹತ್ ಕಾರ್ಯ ಹಿಂದೂಗಳಿಂದ ಮಾತ್ರ ಸಾಧ್ಯ. ಮುಸ್ಲಿಂಮರಿಗೆ ಹಲವು ದೇಶಗಳು ಇವೆ. ಆದರೆ ಹಿಂದೂಗಳಿಗೆ ಭಾರತ ಮಾತ್ರ ಇರೋದು. ಹಿಂದೂಗಳಿಗೆ ಬೇರೆ ಕಡೆ ಜಾಗ ಇಲ್ಲ, ಅದಕ್ಕಾಗಿ ನಾವು ಹೋರಾಟ ಮಾಡಬೇಕು ಎಂದು ಕರೆ ನೀಡಿದರು.

ದೇಶದಲ್ಲಿ ನಾವು ಹಿಂದೂಗಳು ಉಳಿಯುವುದು ಹೇಗೆ? ಹಿಂದೂಗಳು ಕಡಿಮೆ ಆದರೇ ಪಾಕಿಸ್ತಾನ ಜಿಂದಾಬಾದ್ ಅನ್ನುತ್ತಾರೆ. ನಮ್ಮ ಕೋರ್ಟ್ ವ್ಯವಸ್ಥೆ ಹೇಗಿದೆ? ಕಸಾಬ್ ಗಾಗಿ ರಾತ್ರಿ ಕೋರ್ಟ್ ತೆರೆಯಿತು. ದೇವರ ಧಯೆ ಅವನಿಗೆ ಶಿಕ್ಷೆ ಆಯಿತು. ಅವನಿಗೂ ಬೆಂಬಲ ವ್ಯಕ್ತಪಡಿಸಿದ್ರು. ಆದರೂ ನಾವು ಸುಮ್ಮನೇ ಇರಬೇಕಾ ಎಂದು ಪ್ರಶ್ನಿಸಿದರು.

ಕ್ಯಾಪ್ಟನ್ .ಪ್ರಾಂಜಲ್ ಬಲಿದಾನಕ್ಕೆ ಕಾರಣರಾದವರು ಕಾಂಗ್ರೆಸ್. ಆ ವಿಷಬೀಜ ಬಿತ್ತಿ, ಬೆಳದವರು ಕಾಂಗ್ರೆಸ್. ದೇಶದ ಆದಾಯದ ಮೊದಲ ಭಾಗ ಮುಸಲ್ಮಾನರಿಗೆ ಎಂದು ಮನಮೋಹನ್ ಸಿಂಗ್ ಹೇಳಿದ್ರು. 10 ಸಾವಿರ ಕೋಟಿ ಮುಸ್ಲಿಮರಿಗೆ ಮೀಸಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಯಾರಪ್ಪನ ದುಡ್ಡು ಅವರಿಗೆ ನೀವು ಮೀಸಲಿಡಲು. ಸರ್ಕಾರಕ್ಕೆ ತೆರಿಗೆ ಕಟ್ಟುವುದು ಹಿಂದೂಗಳು ಎಂದು ಗುಡುಗಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ