ಮುಸ್ಲಿಂ ಯುವಕರ ಗುಂಪಿನಿಂದ ಹಿಂದೂಗಳ ಮೇಲೆ ಹಲ್ಲೆ: ರೊಚ್ಚಿಗೆದ್ದ ಗ್ರಾಮಸ್ಥರು, ಬೆಳ್ಳೂರು ಪ್ರಕ್ಷುಬ್ಧ

ಬೈಕ್ ಟಚ್ ಮಾಡಿ ಓವರ್ ಟೇಕ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮುಸ್ಲಿಂ ಸಮಯದಾಯದ ಯುವಕರ ಗುಂಪೊಂದು ಹಿಂದು ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದ್ದಿದ್ದು, ಸ್ಥಳದಲ್ಲಿ ಇದೀಗ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ.

ಮುಸ್ಲಿಂ ಯುವಕರ ಗುಂಪಿನಿಂದ ಹಿಂದೂಗಳ ಮೇಲೆ ಹಲ್ಲೆ: ರೊಚ್ಚಿಗೆದ್ದ ಗ್ರಾಮಸ್ಥರು, ಬೆಳ್ಳೂರು ಪ್ರಕ್ಷುಬ್ಧ
Follow us
ಪ್ರಶಾಂತ್​ ಬಿ.
| Updated By: ರಮೇಶ್ ಬಿ. ಜವಳಗೇರಾ

Updated on: May 27, 2024 | 11:15 PM

ಮಂಡ್ಯ, (ಮೇ 27) : ಓವರ್ ಟೇಕ್ ಮಾಡಲು ಹೋಗಿ ಬೈಕ್​ಗೆ ಟಚ್​ ಮಾಡಿರುವುದನ್ನು ಪ್ರಶ್ನಿಸಿದ್ದ ಅಭಿಲಾಷ್​ ಎಂಬುವರ ಇಬ್ಬರು ಮುಸ್ಲಿಂ (Muslim) ಯುವಕರನ್ನು ಪ್ರಶ್ನಿಸಿದ್ದಾರೆ. ಇದೇ ದ್ವೇಷ ಇಟ್ಟುಕೊಂಡು ಮುಸ್ಲಿಂ ಯುವಕರ ಗುಂಪೊಂದು ಇಂದು (ಮೇ 27) ಸಂಜೆ ಅಭಿಲಾಷ್​ ಮೇಲೆ ಹಲ್ಲೆ ಮಾಡಿರುವ ಘಟನೆ ಮಂಡ್ಯ (Mandya) ಜಿಲ್ಲೆಯ  ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಅಭಿಲಾಷ್ ನನ್ನು ಸದ್ಯ ಆದಿಚುಂಚನಗಿರಿ  ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಂದೆಡೆ ಸ್ಥಳೀಯ ಮುಸ್ಲಿಮ ಯುವಕರ ವಿರುದ್ಧ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬೆಳ್ಳೂರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಉಟಾಗಿದ್ದು, ಸ್ಥಳಕ್ಕೆ DYSP ಆಗಮಿಸಿ ಪ್ರತಿಭಟನೆಕಾರರ ಮನವೊಲಿಸುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಿಸಲು ಶ್ರಮ ವಹಿಸುತ್ತಿದ್ದಾರೆ.

ಶನಿವಾರ ಮುಸ್ಲಿಂ ಯುವಕರ ಗುಂಪು ಬೆಳ್ಳೂರಿನ ಸಂತೆ ಬೀದಿಯಲ್ಲಿ ಅತಿ ವೇಗದಲ್ಲಿ ಪಟ್ಟಣದೊಳಗೆ ಕಾರು ಓಡಿಸಿಕೊಂಡು ಹೋಗಿದೆ. ಅಲ್ಲದೇ ಓವರ್​ ಟೇಕ್​ ಮಾಡುವಾಗ ಬೈಕ್​ಗೆ ಟಚ್​ ಆಗಿದೆ. ಇದನ್ನು ಹಲ್ಲೆಗೆ ಒಳಗಾಗಿರುವ ಅಭಿಲಾಷ್ ಹಾಗೂ ಅವರ ಜತೆಗಾರ ನಾಗೇಶ್​ ಎಂಬುವರು ಪ್ರಶ್ನಿಸಿದ್ದರು. ಈ ವೇಳೆ ಸಣ್ಣ ಮಟ್ಟಿನ ಮಾತಿನ ಚಕಮಕಿ ನಡೆದಿತ್ತು. ಅದೇ ದ್ವೇಷವನ್ನು ಇಟ್ಟುಕೊಂಡಿದ್ದ ಮುಸ್ಲಿಂ ಯುವಕರು, ಇಂದು ಇನ್ನಷ್ಟು ದೊಡ್ಡ ಗುಂಪನ್ನು ಕಟ್ಟಿಕೊಂಡು ಬಂದು ಅಭಿಲಾಷ್ ಹಲ್ಲೆ ಮಾಡಿದ್ದಾರೆ.

ಹತ್ತಾರು ಜನರ ತಂಡ ಕಟ್ಟಿಕೊಂಡು ಬಂದು ಹಲ್ಲೆ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೇ ಕೆಲ ಹಿಂದೂಗಳ ಮನೆಗಳಿಗೆ ನುಗ್ಗಿ ಬೆದರಿಕೆ ಹಾಕಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕೆಂದು ಗ್ರಾಮಸ್ಥರ ಆಗ್ರಹಿಸಿದ್ದಾರೆ. ಮಹಿಳೆಯರು ಸೇರಿದಂತೆ ಪೊಲೀಸ್ ಠಾಣೆ ಎದುರು ನೂರಾರು ಗ್ರಾಮಸ್ಥರ ಜಮಾವಣೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ