AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಮಂಗಲ‌ ಕೋಮುಗಲಭೆ ಪ್ರಕರಣ: ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ FIR

ನಾಗಮಂಗಲ ಕೋಮುಗಲಭೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಇದರ ನಡುವೆ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ನಾಗಮಂಗಲ‌ ಕೋಮುಗಲಭೆ ಪ್ರಕರಣ: ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ FIR
ಆರ್ ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಪ್ರಶಾಂತ್​ ಬಿ.
| Edited By: |

Updated on:Sep 18, 2024 | 9:01 PM

Share

ಮಂಡ್ಯ, (ಸೆಪ್ಟೆಂಬರ್ 18): ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್​​ಐಆರ್​​ ದಾಖಲಾಗಿದೆ. ನಾಗಮಂಗಲ‌ ಕೋಮುಗಲಭೆಗೆ ಸಂಬಂಧಿಸಿದ ವಿಡಿಯೋ, ಫೋಟೋ ಪೋಸ್ಟ್ ಮಾಡುವ ಮೂಲಕ ದೊಂಬಿ ಗಲಭೆಗೆ ಪ್ರಚೋದನೆ ಆರೋಪಡಿ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.

ಕಲ್ಲು ತೂರಿ, ಬೆಂಕಿ ಹಚ್ಚಿದವರನ್ನ ರಕ್ಷಿಸಿ, ಗಣೇಶನನ್ನ ಬಂಧಿಸಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಬೆಂಗಳೂರಿನಲ್ಲಿ ನಡೆದ ಘಟನೆಯನ್ನ ನಾಗಮಂಗಲದಲ್ಲಿ ನಡೆದ ಘಟನೆ ಎಂದು ಆರೋಪಿಸಿದ್ದರು.

ಇನ್ನು ನಾಗಮಂಗಲ ಘಟನೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪೋಸ್ಟ್ ಹಾಕಿದ್ದರು. ಬೇರೆಡೆ ನಡೆದ 2 ವಿಡಿಯೋ ಲಗತ್ತಿಸಿಸಿ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಿ ಇದೀಗ ನಾಗಮಂಗಲ ಟೌನ್​ ಠಾಣೆಯಲ್ಲಿ ಅರ್ ಅಶೋಕ್ ಹಾಗೂ ಶೋಭಾ‌ ಕರಂದ್ಲಾಜೆ ವಿರುದ್ಧ ಬಿಎನ್ ಎಸ್ ಸೆಕ್ಷನ್ 192ರ ಅಡಿ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ.

ನಾಗಮಂಗಲ ಗಲಭೆಯಲ್ಲಿ 2.66 ಕೋಟಿ ರೂ. ಮೌಲ್ಯದ ಆಸ್ತಿ ನಾಶ

ನಾಗಮಂಗಲ ಗಲಭೆ ನಡೆದು 8 ದಿನ ಕಳೆದಿದೆ. ಮಂಡ್ಯ ಜಿಲ್ಲಾಡಳಿತ ಇಡೀ ಗಲಭೆ ಪ್ರಕರಣದ ಮೌಲ್ಯಮಾಪನ ಮಾಡಿದೆ. ಪರಿಹಾರಕ್ಕಾಗಿ ಎಲ್ಲಿಲ್ಲಿ ಎಷ್ಟೆಷ್ಟು ನಷ್ಟವಾಯ್ತು ಅನ್ನೋದರ ಬಗ್ಗೆ ಜಿಲ್ಲಾಡಳಿತ ವರದಿ ಸಲ್ಲಿಕೆ ಮಾಡಿದೆ.  ಗಲಭೆಯಿಂದಾಗಿ ನಾಗಮಂಗಲದಲ್ಲಿ ಈವರೆಗೆ 2 ಕೋಟಿ 66 ಲಕ್ಷ ಮೌಲ್ಯದ ಆಸ್ತಿ ನಾಶವಾಗಿದೆ. ಕಿಡಿಗೇಡಿಗಳು ಪಟ್ಟಣದಾದ್ಯಂತ 26 ಅಂಗಡಿಗಳಿಗೆ ಬೆಂಕಿ ಇಟ್ಟಿದ್ದಾರೆ. ಹೊತ್ತಿ ಉರಿದ ಬೆಂಕಿಯಿಂದ 1 ಕೋಟಿ 47 ಲಕ್ಷ ಮೌಲ್ಯದ ಕಟ್ಟಡ ಗಳಿಗೆ ಹಾನಿಯಾಗಿದೆ.

ಇದಿಷ್ಟೆ ಅಲ್ಲದೇ, 1 ಕೋಟಿ 18  ಲಕ್ಷದ ಮೌಲ್ಯದ ವಸ್ತುಗಳಿಗೆ ಬೆಂಕಿ ಆಹುತಿಯಾಗಿವೆ. ಈ ವರದಿ ಸ್ವೀಕಾರ ಮಾಡಿರೋ ಸರ್ಕಾರ ಹಾನಿಗೊಳಗಾದ ಸಂತ್ರಸ್ತರಿಗೆ ಪರಿಹಾರ ನೀಡಲು   ಕ್ರಮ ಕೈಗೊಳ್ಳಲಿದೆ.  ಇನ್ನು ರಾಜಕೀಯ ನಾಯಕರ ವಾಗ್ದಾಳಿ ಮತ್ತೆ ಮುಂದುವರೆದಿದೆ. ಸಿದ್ದರಾಮಯ್ಯ ಆಡಳಿತದಲ್ಲಿ ಪಾಕ್ ಪರ ಘೋಷಣೆ ಕೂಗ್ತಾರೆ ಅಂತಾ ಬಿಜೆಪಿ ಎಂಎಲ್​ಸಿ ರವಿಕುಮಾರ್​ ಬಾಂಬ್ ಸಿಡಿಸಿದ್ದಾರೆ. ಇದಕ್ಕೆ ಪರಮೇಶ್ವರ್ ತಿರುಗೇಟು ಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:23 pm, Wed, 18 September 24

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು