AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೇನು ಮದ್ವೆಗೆ ಸಿದ್ಧತೆಗಳು ನಡೆಯುತ್ತಿರುವಾಗಲೇ ಇಂಜಿನಿಯರ್ ದುರಂತ ಸಾವು!

ಭೀಕರ ರಸ್ತೆ ಅಪಘಾತದಲ್ಲಿ ಇಂಜಿಯರ್​ ಸಾವನ್ನಪ್ಪಿದ್ದಾರೆ. ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವತಿ ಸ್ವಗ್ರಾಮಕ್ಕೆ ಹೋತ್ತಿದ್ದಾಗ ದುರಂತ ಸಾವು ಕಂಡಿದ್ದಾಳೆ. ಇನ್ನೊಂದು ನೋವಿನ ಸಂಗತಿ ಎಂದರೆ ಮುಂದಿನ ತಿಂಗಳು ಅಂದರೆ ಫೆಬ್ರುವರಿ 16ಕ್ಕೆ ಶರಣ್ಯ ಮದುವೆ ನಿಶ್ಚಯ ಆಗಿತ್ತು. ಆದ್ರೆ, ಸಪ್ತಪದಿ ತಿಳಿಯುವ ಮುನ್ನವೇ ಮಸಣ ಸೇರಿದ್ದಾಳೆ.

ಇನ್ನೇನು ಮದ್ವೆಗೆ ಸಿದ್ಧತೆಗಳು ನಡೆಯುತ್ತಿರುವಾಗಲೇ ಇಂಜಿನಿಯರ್ ದುರಂತ ಸಾವು!
Sharanya Gowda
ಪ್ರಶಾಂತ್​ ಬಿ.
| Edited By: |

Updated on:Jan 19, 2025 | 3:41 PM

Share

ಮಂಡ್ಯ/ರಾಮನಗರ, (ಜನವರಿ 19): ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನರೇಗಾ ಮಹಿಳಾ ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಸಾಪುರ ಗೇಟ್ ಬಳಿ ನಡೆದಿದೆ. ಶರಣ್ಯ ಗೌಡ (25) ಮೃತ ಮಹಿಳಾ ಇಂಜಿನಿಯರ್. ಮೂಲತಃ ಮಂಡ್ಯದ ಮಳವಳ್ಳಿ ತಾಲೂಕಿನ ಬಳೆಹೊನ್ನಿಗನ ಗ್ರಾಮದ ಶರಣ್ಯ ಅವರು ನರೇಗಾ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಆದ್ರೆ, ಕೆಲಸ ಮುಗಿಸಿ ಸ್ವಗ್ರಾಮ ಬಳೆಹೊನ್ನಿಗನದಿಂದ ಹಲಗೂರಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇನ್ನೊಂದು ನೋವಿನ ವಿಚಾರ ಅಂದ್ರೆ ಶರಣ್ಯ ಗೌಡಗೆ ಮುಂದಿನ ತಿಂಗಳು ಫೆಬ್ರವರಿ 16ರಂದು ಮದುವೆ ನಿಶ್ಚಿಯವಾಗಿತ್ತು. ಆದ್ರೆ, ದಾಂಪತ್ಯ ಜೀವನಕ್ಕೆ ಕಾಲಿಡುವ ಮೊದಲೇ ದುರಂತ ಅಂತ್ಯಕಂಡಿದ್ದಾರೆ.

ಕಳೆದ ಒಂದು ವರ್ಷದಿಂದ ಕನಕಪುರ ತಾಲೂಕಿನ ಸಾತನೂರು ಪಂಚಾಯತಿಯಲ್ಲಿ ನರೇಗಾ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.  ನಿನ್ನೆ ಸ್ವಗ್ರಾಮದಿಂದ ಹಲಗೂರಿಗೆ ಹೋಗ್ತಿದ್ದಾಗ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ದುರ್ಘಟನೆಯಲ್ಲಿ ತೀವ್ರ ರಸ್ತಸ್ರಾವದಿಂದ ಶರಣ್ಯ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ. ಈ ಬಗ್ಗೆ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶರಣ್ಯ ಗೌಡಗೆ ಫೆಬ್ರವರಿ 16ರಂದು ಮದುವೆ ಫಿಕ್ಸ್ ಆಗಿದ್ದು, ಮನೆಯಲ್ಲಿ ಮದುವೆಯ ಸಿದ್ಧತೆಗಳು ನಡೆದಿದ್ದವು. ಆದ್ರೆ, ಸಪ್ತಪದಿ ತುಳಿಯುವ ಮುನ್ನವೇ ವಧು ಶರಣ್ಯಗೌಡ ಸಾವು ದುರಂತವೇ ಸರಿ.

Published On - 3:41 pm, Sun, 19 January 25

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More