ಮಂಡ್ಯ/ರಾಮನಗರ, (ಜನವರಿ 19): ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನರೇಗಾ ಮಹಿಳಾ ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಸಾಪುರ ಗೇಟ್ ಬಳಿ ನಡೆದಿದೆ. ಶರಣ್ಯ ಗೌಡ (25) ಮೃತ ಮಹಿಳಾ ಇಂಜಿನಿಯರ್. ಮೂಲತಃ ಮಂಡ್ಯದ ಮಳವಳ್ಳಿ ತಾಲೂಕಿನ ಬಳೆಹೊನ್ನಿಗನ ಗ್ರಾಮದ ಶರಣ್ಯ ಅವರು ನರೇಗಾ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಆದ್ರೆ, ಕೆಲಸ ಮುಗಿಸಿ ಸ್ವಗ್ರಾಮ ಬಳೆಹೊನ್ನಿಗನದಿಂದ ಹಲಗೂರಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇನ್ನೊಂದು ನೋವಿನ ವಿಚಾರ ಅಂದ್ರೆ ಶರಣ್ಯ ಗೌಡಗೆ ಮುಂದಿನ ತಿಂಗಳು ಫೆಬ್ರವರಿ 16ರಂದು ಮದುವೆ ನಿಶ್ಚಿಯವಾಗಿತ್ತು. ಆದ್ರೆ, ದಾಂಪತ್ಯ ಜೀವನಕ್ಕೆ ಕಾಲಿಡುವ ಮೊದಲೇ ದುರಂತ ಅಂತ್ಯಕಂಡಿದ್ದಾರೆ.
ಕಳೆದ ಒಂದು ವರ್ಷದಿಂದ ಕನಕಪುರ ತಾಲೂಕಿನ ಸಾತನೂರು ಪಂಚಾಯತಿಯಲ್ಲಿ ನರೇಗಾ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆ ಸ್ವಗ್ರಾಮದಿಂದ ಹಲಗೂರಿಗೆ ಹೋಗ್ತಿದ್ದಾಗ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ದುರ್ಘಟನೆಯಲ್ಲಿ ತೀವ್ರ ರಸ್ತಸ್ರಾವದಿಂದ ಶರಣ್ಯ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ. ಈ ಬಗ್ಗೆ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶರಣ್ಯ ಗೌಡಗೆ ಫೆಬ್ರವರಿ 16ರಂದು ಮದುವೆ ಫಿಕ್ಸ್ ಆಗಿದ್ದು, ಮನೆಯಲ್ಲಿ ಮದುವೆಯ ಸಿದ್ಧತೆಗಳು ನಡೆದಿದ್ದವು. ಆದ್ರೆ, ಸಪ್ತಪದಿ ತುಳಿಯುವ ಮುನ್ನವೇ ವಧು ಶರಣ್ಯಗೌಡ ಸಾವು ದುರಂತವೇ ಸರಿ.
Published On - 3:41 pm, Sun, 19 January 25