Dasara 2021: ಅಕ್ಟೋಬರ್ 9ರಿಂದ 11ರವರೆಗೆ ಶ್ರೀರಂಗಪಟ್ಟಣ ದಸರಾ
Srirangapatna Dasara 2021: ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಕ್ರೀಡಾ ಸಚಿವ ನಾರಾಯಣ ಗೌಡ ಆಹ್ವಾನಿಸಿದ್ದಾರೆ. ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟನೆ ನಡೆಯಲಿದೆ.
ಮಂಡ್ಯ: ಅಕ್ಟೋಬರ್ 9ರಿಂದ 11ರವರೆಗೆ 3 ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ ಜರುಗಲಿದೆ. ಶ್ರೀರಂಗಪಟ್ಟಣ ದಸರಾ ಉದ್ಘಾಟಿಸುವಂತೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಕ್ರೀಡಾ ಸಚಿವ ನಾರಾಯಣ ಗೌಡ ಆಹ್ವಾನಿಸಿದ್ದಾರೆ. ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟನೆ ನಡೆಯಲಿದೆ.
ದಸರಾ ಮಹೋತ್ಸವಕ್ಕೆ ಮೈಸೂರು ರಾಜವಂಶಸ್ಥರಿಗೆ ಅಧಿಕೃತ ಆಹ್ವಾನ ನೀಡಿದ ಸಚಿವ ಸೋಮಶೇಖರ್ ದಸರಾ ಉದ್ಘಾಟನೆ ವೇಳೆ 400 ಜನರಿಗೆ ಅವಕಾಶ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದೇನೆ ಎಂದು ಮೈಸೂರಿನಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಜಂಬೂಸವಾರಿ ವೇಳೆಯೂ ಹೆಚ್ಚು ಜನ ಭಾಗಿಯಾಗಬೇಕು. ಇದಕ್ಕೂ ಅನುಮತಿ ನೀಡುವಂತೆ ಸರ್ಕಾರಕ್ಕೆ ಕೇಳಿದ್ದೇನೆ. ನನ್ನ ಮನವಿ ಸಿಎಂ ಆಲಿಸಿ ಹೊಸ ಆದೇಶ ಹೊರಡಿಸಬಹುದು ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.
ದಸರಾಗೆ ಅಡಚಣೆ ಆಗದಂತೆ ಸಹಕಾರ ನೀಡುವಂತೆ ರಾಜವಂಶಸ್ಥರನ್ನು ಭೇಟಿಯಾಗಿ ಮನವಿ ಮಾಡಿದ್ದೇವೆ. ಪ್ರತಿವರ್ಷದಂತೆ ಈ ವರ್ಷವು ಅವರಿಗೆ ಗೌರವಧನ ನೀಡಲಾಗಿದೆ. ಈ ಬಾರಿಯು ಬನ್ನಿಮಂಟಪದಲ್ಲಿ ಪಂಜಿನ ಕವಾಯತು ನಡೆಸಲಾಗುವುದಿಲ್ಲ. ಬುಧವಾರ ಮಧ್ಯಾಹ್ನ 2 ಗಂಟೆಗೆ ದಸರಾ ಉದ್ಘಾಟಕರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಆಗಮಿಸುತ್ತಾರೆ. ಮೈಸೂರು ನಗರದ ಆರಂಭದಲ್ಲೇ ಅವರಿಗೆ ಸ್ವಾಗತ ಕೋರುತ್ತೇವೆ ಎಂದು ಅವರು ತಿಳಿಸಿದರು.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2021ಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಅವರಿಗೆ ದಸರಾಗೆ ಸಚಿವ ಎಸ್.ಟಿ. ಸೋಮಶೇಖರ್ ಅಧಿಕೃತ ಆಹ್ವಾನ ನೀಡಿದರು. ಸಚಿವರಿಗೆ ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್ ನಾಗೇಂದ್ರ, ಮೇಯರ್ ಸುನಂದಪಾಲನೇತ್ರ, ಮುಡಾ ಅಧ್ಯಕ್ಷ ಹೆಚ್ ವಿ ರಾಜೀವ್, ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್, ಪಾಲಿಕೆ ಆಯುಕ್ತ ಲಕ್ಷ್ಮಿಕಾಂತರೆಡ್ಡಿ, ಸೇರಿದಂತೆ ಹಲವರು ಸಹಯೋಗ ನೀಡಿದ್ದರು.
ಇದನ್ನೂ ಓದಿ:
ಮೈಸೂರಲ್ಲಿ ಮಹಿಷ ದಸರಾ ಆಚರಣೆ, ಚಾಮುಂಡಿ ಬೆಟ್ಟದಲ್ಲಿ ಆಚರಿಸಲು ಅನುಮತಿ ನಿರಾಕರಿಸಿದ್ದಕ್ಕೆ ಸ್ವಾಮೀಜಿಗಳಿಗೆ ಬೇಸರ
Published On - 3:38 pm, Wed, 6 October 21