ಕಾವೇರಿ ವಿವಾದ: ನ್ಯಾಯಾಲಯದ ಆದೇಶ ಪಾಲನೆ ಮಾಡಿದರೆ ಜನರ ಬದುಕು ನಶಿಸಿ ಹೋಗುತ್ತದೆ; ನಿರ್ಮಲಾನಂದನಾಥ ಶ್ರೀ

| Updated By: ವಿವೇಕ ಬಿರಾದಾರ

Updated on: Sep 22, 2023 | 1:34 PM

ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಮಂತ್ರಿಗಳ ಜೊತೆ ಮಾತನಾಡುತ್ತೇವೆ. ಮೇಕೆದಾಟು ಯೋಜನೆ ಆದರೇ ಇಂತಹ ಸಂದರ್ಭದಲ್ಲಿ ನೀರು ಬಿಡಬಹುದು. ರಾಜ್ಯ ಸರ್ಕಾರ ಆದಷ್ಟು ಬೇಗ ಮೇಕೆದಾಟು ಯೋಜನೆ ಕೈಗೆ ಎತ್ತಿಕೊಳ್ಳಬೇಕು ಎಂದು ನಿರ್ಮಲಾನಂದನಾಥ ಸ್ವಾಮೀಜಿ ಒತ್ತಾಯಿಸಿದರು.

ಕಾವೇರಿ ವಿವಾದ: ನ್ಯಾಯಾಲಯದ ಆದೇಶ ಪಾಲನೆ ಮಾಡಿದರೆ ಜನರ ಬದುಕು ನಶಿಸಿ ಹೋಗುತ್ತದೆ; ನಿರ್ಮಲಾನಂದನಾಥ ಶ್ರೀ
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ
Follow us on

ಮಂಡ್ಯ ಸೆ.22: ತಮಿಳುನಾಡಿಗೆ ಮತ್ತೆ ಕಾವೇರಿ ನೀರು (Cauvery) ಹರಿಸುವಂತೆ ಸುಪ್ರೀಂಕೋರ್ಟ್ (Supreme Court) ಆದೇಶ ಹೊರಡಿಸಿದ ಬೆನ್ನಲ್ಲೇ ಮಂಡ್ಯ (Mandya) ರೈತರ ಸರಣಿ ಪ್ರತಿಭಟನೆಗಳು ಮುಂದುವರೆದಿದ್ದು, ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಧರಣಿ ನಡೆಸುತ್ತಿದ್ದಾರೆ. ಈ ಧರಣಿಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanath Swamiji), ಸಂಸದೆ ಸುಮಲತಾ ಅಂಬರೀಶ್​​ (Sumalata Ambareesh) ಪುತ್ರ, ನಟ ಅಭಿಷೇಕ್​ ಅಂಬರೀಶ್, ಕನ್ನಡ ಸಾಹಿತ್ಯ ಪರಿಷತ್​​ನ ಅಧ್ಯಕ್ಷ ಡಾ. ಮಹೇಶ್ ಜೋಶಿ ಸಾಥ್​​ ನೀಡಿದ್ದಾರೆ.

ನಮ್ಮ ಮುಂದೆ ಬಳಹ ವರ್ಷದಿಂದ ಕಾವೇರಿ ನೀರಿನ ಹಂಚಿಕೆ ಸಮಸ್ಯೆ ಇದೆ. ಕುಡಿಯುವ ನೀರಿಗೆ ಮೊದಲ ಆದ್ಯತೆ ಕೊಡಬೇಕು. 1990ರಲ್ಲಿ ಬಂದ ಕಾವೇರಿ ಟ್ರಿಬ್ಯುನಲ್​ನಲ್ಲಿ ನೀರಿನ ಹಂಚಿಕೆ ಆಗಿದೆ. ತಮಿಳುನಾಡಿಗೆ ನೀರು ಬಿಟ್ಟರೇ ಕುಡಿಯುವ ನೀರಿಗೆ ಸಮಸ್ಯೆ ಆಗಲಿದೆ. ಮನುಷ್ಯನ ಅಸ್ವಿತ್ವ ಇಲ್ಲದಂತೆ ಆಗಲಿದೆ. ಕೋರ್ಟ್​​ನ ಆದೇಶ ಪಾಲನೆ‌ ಮಾಡಬೇಕು. ನ್ಯಾಯಧೀಶರು ಕೂಡ ನಮ್ಮ ನೋವನ್ನು ನೋಡಿ ಆದೇಶ ನೀಡಬೇಕು. ನ್ಯಾಯಾಲಯದ ಆದೇಶ  ಪಾಲನೆ ಮಾಡಿದರೇ ಜನರ ಬದುಕು ನಶಿಸಿ ಹೋಗುತ್ತದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು.

ಆದಷ್ಟು ಬೇಗ ಮೇಕೆದಾಟು ಯೋಜನೆಯನ್ನು ಸರ್ಕಾರ ಕೈಗೆತ್ತಿಕೊಳ್ಳಲಿ

ಮಂಡ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಏಳು ಟಿಎಂಸಿ ನೀರು ಬಿಟ್ಟರೇ ಸಾಕಷ್ಟು ಸಮಸ್ಯೆ ಆಗಲಿದೆ. ರಾಜ್ಯ ಸರ್ಕಾರ ಕೋರ್ಟ್​​ನಲ್ಲಿ ಸರಿಯಾಗಿ ವಾದ ಮಂಡನೆ ಮಾಡಬೇಕು. ಬೆಂಗಳೂರಿಗೆ ಪ್ರತಿವರ್ಷ 20 ರಿಂದ 30 ಟಿಎಂಸಿ ನೀರುಬೇಕು. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಮಂತ್ರಿಗಳ ಜೊತೆ ಮಾತನಾಡುತ್ತೇವೆ. ಮೇಕೆದಾಟು ಯೋಜನೆ ಆದರೇ ಇಂತಹ ಸಂದರ್ಭದಲ್ಲಿ ನೀರು ಬಿಡಬಹುದು. ರಾಜ್ಯ ಸರ್ಕಾರ ಆದಷ್ಟು ಬೇಗ ಮೇಕೆದಾಟು ಯೋಜನೆ ಕೈಗೆ ಎತ್ತಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:  ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂ ಆದೇಶ; ಮಂಡ್ಯದಲ್ಲಿ ಬುಗಿಲೆದ್ದ ಆಕ್ರೋಶ

ರೈತರು ಸುಮ್ಮನೆ ರಸ್ತೆಗೆ ಬರುವುದಿಲ್ಲ. ರೈತನಿಗೆ ನೋವಿದೆ. ಇವತ್ತಿನ ಸಂಪುಟ ಸಭೆಯಲ್ಲಿ ರೈತರ ಪರ ಸರ್ಕಾರ ತೀರ್ಮಾನ ಮಾಡಬೇಕು. ಹೆಚ್​ ಡಿ ದೇವೇಗೌಡರು ರಾಜ್ಯಸಭೆಯಲ್ಲಿ ಮಾತನಾಡಿದ್ದಾರೆ. ನೀರನ್ನ ಯಾವುದೇ ಕಾರಣಕ್ಕೂ ಬಿಡಬಾರದು. ಪ್ರಜೆಗಳ ಹಿತವನ್ನು ಕಾಪಾಡುವ ಕೆಲಸ ಯಾವುದೇ ಸರ್ಕಾರ ಮಾಡಲಿ. ಸದ್ಯ ನ್ಯಾಯಾಲಯದ ಆದೇಶದಂತೆ ನಡೆದುಕೊಳ್ಳುವ ಸ್ಥಿತಿ ಬಂದಿದೆ. ವಸ್ತುಸ್ಥಿತಿ ಬಗ್ಗೆ ಸುಪ್ರೀಂಕೋರ್ಟ್​ಗೆ ಸರ್ಕಾರ ಸೂಕ್ತ ಮನವರಿಕೆ ಮಾಡಲಿ. ನಾವು ಕೂಡ ರಾಜ್ಯ ಹಾಗೂ ಕೇಂದ್ರ ಸಚಿವರ ಜೊತೆ ಮಾತನಾಡುತ್ತೇವೆ. ರೈತರ ಪರವಾಗಿ ಆದಿಚುಂಚನಗಿರಿ ಪೀಠ ಸದಾ ನಿಮ್ಮ ಜೊತೆ ಇರುತ್ತೆ. ಸರ್ಕಾರ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿ ಹೋರಾಟ ಮುಂದುವರಿಸಲಿ ಎಂದು ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:32 pm, Fri, 22 September 23