ಮಂಡ್ಯ: ಟಿಪ್ಪು ಎಕ್ಸ್‌ಪ್ರೆಸ್ (Tippu Express) ರೈಲಿನ ಹೆಸರು ಬದಲಾಯಿಸುವ ಅಗತ್ಯವಿರಲಿಲ್ಲ. ಇದರ ಬದಲಾಗಿ ಹೊಸ ರೈಲಿಗೆ ಒಡೆಯರ್ ಹೆಸರು ಇಟ್ಟಿದ್ದರೆ ಚೆನ್ನಾಗಿರುತ್ತಿತ್ತು ಎಂದು ಆದಿಚುಂಚನಗಿರಿ ಮಠದಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಹಿನ್ನೆಲೆ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಬಿಜೆಪಿಯವರು ಬರಿ ಧರ್ಮ ರಾಜಕೀಯ ಮಾಡುತ್ತಾರೆ. ಒಡೆಯರ್ ಹೆಸರು ಇಡಲಿ ಪರ್ವಾಗಿಲ್ಲ ಆದರೆ ಬೇರೆ ರೈಲುಗಳು ಇರ್ಲೇ ಇಲ್ವ? ಯಾವಾಗ್ಲು ಜಾತಿ ಜಾತಿಗಳ ನಡುವೆ ಧರ್ಮಗಳ ನಡುವೆ ಬೆಂಕಿ ಹಚ್ಚೊ ಕೆಲಸ ಮಾಡುತ್ತಾರೆ. ಬಿಜೆಪಿ ಬರಿ ದ್ವೇಷ ಹುಟ್ಟಾಕುವ ಕೆಲಸ ಮಾಡುತ್ತಾರೆ ಎಂದು ಕಿಡಿಕಾರಿದರು.
ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಕುರಿತು ಮಾತನಾಡಿದ ಅವರು 2020ರ ಜುಲೈನಲ್ಲಿ ನ್ಯಾ.ನಾಗಮೋಹನ ದಾಸ್ ಮೀಸಲಾತಿ ಹೆಚ್ಚಳ ಕುರಿತು ವರದಿ ನೀಡಿದ್ದರು. ಈ ವರದಿಯನ್ನು ಜಾರಿಗೆ ಮಡುವಂತೆ ಒತ್ತಾಯಿಸಿದ್ದೆವು. ರಾಜ್ಯ ಸರ್ಕಾರ ಇದುವರೆಗೆ ವರದಿ ಜಾರಿಗೆ ಮುಂದಾಗಿರಲಿಲ್ಲ. ಹೀಗಾಗಿ ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಸದನದ ಬಾವಿಗಿಳಿದು ಕಾಂಗ್ರೆಸ್ ಶಾಸಕರು ಪ್ರತಿಭಟನೆ ಮಾಡಿದ್ದರು ಎಂದು ತಿಳಿಸಿದರು.
ಸದನದಲ್ಲಿ ಒತ್ತಾಯಿಸಿದ ನಂತರ ಸರ್ವಪಕ್ಷ ಸಭೆ ಕರೆದಿದ್ದರು. ಎಸ್ಸಿ ಮೀಸಲಾತಿ ಪ್ರಮಾಣ ಶೇ.15ರಿಂದ 17ಕ್ಕೆ ಹೆಚ್ಚಳವಾಗಲಿದೆ. ಎಸ್ಟಿ ಮೀಸಲಾತಿ ಪ್ರಮಾಣ ಶೇ.3ರಿಂದ 7ಕ್ಕೆ ಹೆಚ್ಚಳವಾಗಲಿದೆ ಎಂದು ಹೇಳಿದ್ದಾರೆ.
ಟಿಪ್ಪು ಎಕ್ಸ್‌ಪ್ರೆಸ್ ರೈಲಿಗೆ ಒಡೆಯರ್ ಎಕ್ಸ್‌ಪ್ರೆಸ್ ಎಂದು ಮರುನಾಮಕರಣ : ಬಿಜೆಪಿ ಸ್ವಾಗತ
ಬೆಂಗಳೂರು-ಮೈಸೂರು ಟಿಪ್ಪು ಎಕ್ಸ್‌ಪ್ರೆಸ್ ರೈಲಿಗೆ, ರೈಲ್ವೆ ಇಲಾಖೆ ಒಡೆಯರ್ ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಿದ್ದನ್ನು ಮಂಡ್ಯ ಜಿಲ್ಲಾ ಬಿಜೆಪಿ ಘಟಕ ಸ್ವಾಗತಿಸಿದೆ. ಮೈಸೂರು ರಾಜವಂಶಸ್ಥರಿಂದ ನಮ್ಮ ನಾಡಿಗೆ ಅಪಾರ ಕೊಡುಗೆ ಕೊಟ್ಟಿದ್ದಾರೆ. ರಾಜವಂಶಸ್ಥರಿಗೆ ಗೌರವ ಸೂಚಿಸುವ ಮೂಲಕ ಮರುನಾಮಕರಣ ಮಾಡಲಾಗಿದೆ.
ಮೈಸೂರು-ತಾಳಗುಪ್ಪ ಎಕ್ಸ್ಪ್ರೆಸ್ಗೆ ಕುವೆಂಪು ಹೆಸರಿಟ್ಟಿದ್ದು ಖುಷಿ ತಂದಿದೆ. ಮೈಸೂರು ಭಾಗದ ಜನರಿಗೆ ಇದೊಂದು ಅವಿಸ್ಮರಣೀಯ ದಿನವಾಗಿದೆ. ಜನರ ಭಾವನೆಗಳಿಗೆ ಸ್ಪಂದಿಸಿದ ಪ್ರಧಾನಿ, ರೈಲ್ವೆ ಸಚಿವರಿಗೆ ಧನ್ಯವಾದಗಳು ಎಂದು ಧನ್ಯವಾದ ತಿಳಿಸಿದೆ.
ಟಿಪ್ಪು ಎಕ್ಸ್‌ಪ್ರೆಸ್ ರೈಲಿಗೆ ಒಡೆಯರ್ ಎಕ್ಸ್‌ಪ್ರೆಸ್ ಎಂದು ನಾಮಕರಣ: ಶುಕ್ರವಾರದ ಶುಭ ಸುದ್ದಿ ಎಂದ ಪ್ರತಾಪ್ ಸಿಂಹ
ಮೈಸೂರು: ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ಟಿಪ್ಪು ಎಕ್ಸ್‌ಪ್ರೆಸ್ ರೈಲಿನ ಹೆಸರನ್ನು ಬದಲಾಯಿಸಿ ಒಡೆಯರ್ ಎಕ್ಸ್‌ಪ್ರೆಸ್ ಎಂದು ರೈಲ್ವೆ ಇಲಾಖೆ ಮರುನಾಮಕರಣ ಮಾಡಿದೆ. ತಾಳಗುಪ್ಪ-ಮೈಸೂರು ನಡುವೆ ಸಂಚರಿಸುವ ತಾಳಗುಪ್ಪ ಎಕ್ಸ್‌ಪ್ರೆಸ್ ರೈಲಿನ ಹೆಸರನ್ನು ಬದಲಾಯಿಸಿ ಕುವೆಂಪು ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಲಾಗಿದೆ.
ಹಿನ್ನೆಲೆ
ಟಿಪ್ಪು ಎಕ್ಸ್‌ಪ್ರೆಸ್ ಬದಲಾಗಿ ಒಡೆಯರ್ ಎಕ್ಸ್‌ಪ್ರೆಸ್ ರೈಲು ಎಂದು ಹೆಸರಿಡುವಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿ ಮನವಿ ಮಾಡಿದ್ದರು. ಈ ಸಂಬಂಧ ಫೆಬ್ರವರಿ ತಿಂಗಳಲ್ಲಿ ದೆಹಲಿಯಲ್ಲಿ ಸಚಿವ ಅಶ್ವಿನಿ ವೈಷ್ಣವ್‌ಗೆ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿ ಲಿಖಿತ ಮನವಿ ಸಲ್ಲಿಸಿದ್ದರು. ಮೈಸೂರಿಗೆ ರೈಲು ಸೇವೆ ಕಲ್ಪಿಸುವಲ್ಲಿ ಮಹಾರಾಜರ ಕೊಡುಗೆ ಬಹಳಷ್ಟು ಇದೆ. ಹೀಗಾಗಿ ಒಡೆಯರ್ ಎಕ್ಸ್‌ಪ್ರೆಸ್ ಎಂದು ಹೆಸರಿಡಲು ಒತ್ತಾಯ ಮಾಡಿದ್ದಾರೆ. ಸಂಸದರ ಮನವಿ ಮೇರೆ ಹೆಸರು ಬದಲಾಯಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕಲ್ಲಿಕ್ ಮಾಡಿ
Published On - 9:08 pm, Fri, 7 October 22