AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದ ಬಾಲಾಜಿ ರೈಸ್ ಮಿಲ್ ಮೇಲೆ ಅಧಿಕಾರಿಗಳು ದಾಳಿ! 3 ಲಾರಿ ಪಡಿತರ ಅಕ್ಕಿ ವಶಕ್ಕೆ

ಬಾಲಾಜಿ ರೈಸ್ ಮಿಲ್ ದಾಳಿ ನಡೆಸಿದಾಗ ನಕಲಿ ಬ್ರಾಂಡ್ ಸೃಷ್ಟಿಸಿ ಪಾಲಿಶ್ ಅಕ್ಕಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಆಫ್ರಿಕಾ, ಮಲೇಷ್ಯಾ, ಸೌದಿ ಹೆಸರಿನ ಬ್ರಾಂಡ್​ನಲ್ಲಿ ಮಾರಾಟ ಮಾಡುತ್ತಿದ್ದರಂತೆ.

ಮಂಡ್ಯದ ಬಾಲಾಜಿ ರೈಸ್ ಮಿಲ್ ಮೇಲೆ ಅಧಿಕಾರಿಗಳು ದಾಳಿ! 3 ಲಾರಿ ಪಡಿತರ ಅಕ್ಕಿ ವಶಕ್ಕೆ
3 ಲಾರಿ ಪಡಿತರ ಅಕ್ಕಿ ವಶಕ್ಕೆ ಪಡೆಯಲಾಗಿದೆ
TV9 Web
| Edited By: |

Updated on: Nov 21, 2021 | 3:15 PM

Share

ಮಂಡ್ಯ: ಜಿಲ್ಲೆಯ ಬಾಲಾಜಿ ರೈಸ್ ಮಿಲ್ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಸುಮಾರು ಮೂರು ಲಾರಿ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಮಂಡ್ಯ ತಹಶೀಲ್ದಾರ್ ಚಂದ್ರಶೇಖರ್ ನೇತೃತ್ವದಲ್ಲಿ ಅಕ್ಕಿ ಜಪ್ತಿ ಮಾಡಲಾಗಿದೆ. ಆಂಧ್ರದಿಂದ ಪಡಿತರ ಅಕ್ಕಿ ತಂದು ಪಾಲಿಶ್ ಮಾಡಿ ರಫ್ತು ಮಾಡುತ್ತಿದ್ದರು. ಪಾಲಿಶ್ ಅಕ್ಕಿ ಸಣ್ಣ ಅಕ್ಕಿ ರೀತಿ ಪ್ಯಾಕ್ ಮಾಡಿ ಮಾರಾಟ ಮಾಡುತ್ತಿದ್ದರು. 10ಕ್ಕೂ ಹೆಚ್ಚು ಬ್ರಾಂಡ್ ಮೂಲಕ ದೇಶ ವಿದೇಶಗಳಿಗೆ ರಫ್ತು ಮಾಡುತ್ತಿದ್ದರು.

ಬಾಲಾಜಿ ರೈಸ್ ಮಿಲ್ ದಾಳಿ ನಡೆಸಿದಾಗ ನಕಲಿ ಬ್ರಾಂಡ್ ಸೃಷ್ಟಿಸಿ ಪಾಲಿಶ್ ಅಕ್ಕಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಆಫ್ರಿಕಾ, ಮಲೇಷ್ಯಾ, ಸೌದಿ ಹೆಸರಿನ ಬ್ರಾಂಡ್​ನಲ್ಲಿ ಮಾರಾಟ ಮಾಡುತ್ತಿದ್ದರಂತೆ. ಸದ್ಯ ಆಂಧ್ರಪ್ರದೇಶದಿಂದ ತಂದಿದ್ದ 3 ಲಾರಿ ಪಡಿತರ ಅಕ್ಕಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಈ ಹಿಂದೆ ಬಾಗಲಕೋಟೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸುಮಾರು 200 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಕಂದಾಯ ಇಲಾಖೆ ಮತ್ತು ಆಹಾರ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದರು. ಬಾಗಲಕೋಟೆ ಜಿಲ್ಲೆಯ ರಬಕವಿ ನಗರದ ಬಾರಪೇಟ ಗಲ್ಲಿಯ ಗೋಡೌನ್ನಲ್ಲಿ ಅಕ್ರಮವಾಗಿ ಅಕ್ಕಿಯನ್ನು ಸಂಗ್ರಹಿಸಿಟ್ಟಿದ್ದರು. ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಸುಲೇಮಾನ್ ಎಂಬುವರ ಗೋಡೌನ್​ನಲ್ಲಿ ಸಂಗ್ರಹಿಸಿದ್ದ ಅಕ್ಕಿಯನ್ನು ವಶಕ್ಕೆ ಪಡೆದಿದ್ದರು.

ಪಡಿತರ ಅಕ್ಕಿ ಸೇರಿ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಅಕ್ಕಿಯನ್ನು ಸುಲೇಮಾನ್ ಎಂಬುವವರು ಗೋಡೌನ್ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದರು. ಗೋದಾಮಿನಲ್ಲಿ ಅಕ್ರಮವಾಗಿ ಅಕ್ಕಿ ಸಂಗ್ರಹಿಸಿರುವ ಬಗ್ಗೆ ನಿನ್ನೆ ರಾತ್ರಿ ಅನಾಮಿಕರಿಂದ ಆಹಾರ ಇಲಾಖೆಗೆ ಮಾಹಿತಿ ನೀಡಿದ್ದರು. ತಕ್ಷಣವೇ ಆಹಾರ ಇಲಾಖೆ ಡಿಡಿ ಶ್ರೀಶೈಲ್ ಕಂಕಣವಾಡಿ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿದ್ದರು. ಸದ್ಯ ಅಧಿಕಾರಿಗಳು ಗೋಡೌನ್​ನ ಸೀಜ್ ಮಾಡಿದ್ದರು.

ಇದನ್ನೂ ಓದಿ

ಮೋದಿ ಜೀ-ಯೋಗಿ ಜೀ: ಅಪರೂಪದ ಫೋಟೋ ಶೇರ್​ ಮಾಡಿಕೊಂಡು ಸಣ್ಣ ಕವನವನ್ನೇ ಬರೆದ ಉತ್ತರಪ್ರದೇಶ ಸಿಎಂ

ಕ್ರಿಸ್‌ಮಸ್, ಹೊಸ ವರ್ಷದ ಪ್ರಯುಕ್ತ ವಿಶೇಷ ರೈಲುಗಳನ್ನು ಪ್ರಾರಂಭಿಸಲಿರುವ ಭಾರತೀಯ ರೈಲ್ವೆ; ಮಾಹಿತಿ ಇಲ್ಲಿದೆ

ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?