ಕರ್ನಾಟಕದಲ್ಲಿ ಮತ್ತೊಂದು ಪಟಾಕಿ ದುರಂತ: ಓರ್ವ ಕಾರ್ಮಿಕ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ!

ಇತ್ತೀಚೆಗೆ ಅಷ್ಟೇ ಬೆಂಗಳೂರಿನ ಅತ್ತಿಬೆಲೆಯಲ್ಲಿ ಸಂಭವಿಸಿದ್ದ ಪಟಾಕಿ ದುರಂತದಲ್ಲಿ 8 ಜನ ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಇದೀಗ ಮಂಡ್ಯದಲ್ಲೂ ಸಹ ಪಟಾಕಿ ದುರಂತ ಸಂಭವಿಸಿದ್ದು, ಓರ್ವ ಕಾರ್ಮಿಕ ಬಲಿಯಾಗಿದ್ದಾನೆ. ಪಟಾಕಿ ಸಿಡಿಸಲೆಂದೇ ನಾಲ್ವರು ತಮಿಳುನಾಡಿನಿಂದ ಬಂದಿದ್ದರು. ಆದ್ರೆ, ಪಟಾಕಿ ತುಂಬುವಾಗಿ ಈ ದುರಂತ ಸಂಭವಿಸಿದೆ.

ಕರ್ನಾಟಕದಲ್ಲಿ ಮತ್ತೊಂದು ಪಟಾಕಿ ದುರಂತ: ಓರ್ವ ಕಾರ್ಮಿಕ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ!
ಪಟಾಕಿ ದುರಂತ ಸಂಭವಿಸಿದ ಮನೆ ಸ್ಥಿತಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 25, 2024 | 4:33 PM

ಮಂಡ್ಯ, (ಮಾರ್ಚ್ 25): ಪಟಾಕಿ (Firecracker)ಸ್ಫೋಟಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಂಡ್ಯ (Mandya) ತಾಲೂಕಿನ ಜಿ ಕೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ತಮಿಳುನಾಡು ಮೂಲದ ರಮೇಶ್ (67) ಮೃತ ದುರ್ದೈವಿ. ನಾಗಲಿಂಗ ಎನ್ನುವಾತನಿಗೆ ಗಂಭೀರ ಗಾಯಗಳಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸಲು ತಮಿಳುನಾಡಿನಿಂದ ನಾಲ್ವರು ಆಗಮಿಸಿದ್ದರು. ನಿನ್ನೆ ರಾತ್ರಿ ಗ್ರಾಮದಲ್ಲಿ ಅದ್ದೂರಿಯಾಗಿ ಹಬ್ಬ ನೆರವೇರಿದೆ. ಬಳಿಕ ಗ್ರಾಮದ ಆಲೆಮನೆಯೊಂದರಲ್ಲಿ ನಾಲ್ವರು ತಂಗಿದ್ದರು. ಆದ್ರೆ, ಇಂದು(ಮಾರ್ಚ್ 25) ಬೇರೊಂದು ಗ್ರಾಮಕ್ಕೆ ಹೋಗಲು ಪಟಾಕಿಗಳ ತುಂಬುವಾಗ ಸ್ಪೋಟ ಸಂಭವಿಸಿದೆ.

ಸ್ಫೋಟದ ರಭಸಕ್ಕೆ ಹೆಂಚುಗಳು ಹಾರಿಹೋಗಿದ್ದು, ಆಲೆಮನೆ ಹೊತ್ತಿ ಉರಿದಿದೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಇನ್ನು ಸ್ಥಳಕ್ಕೆ ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ್, ಎಸ್ ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಊರು ಹಬ್ಬ, ಜಾತ್ರೆ ಸಂದರ್ಭದಲ್ಲಿ ಪಟಾಕಿ ಸಿಡಿಸುವುದು ಕೆಲವು ಕಡೆಗಳಲ್ಲಿ ಸಂಪ್ರದಾಯ ಇದೆ. ಮೊದಲಿನಿಂದಲೂ ನಡೆದುಕೊಂಡು ಬಂದಿರುತ್ತೆ. ಅದರಂತೆ ಮಂಡ್ಯ ತಾಲೂಕಿನ ಜಿ ಕೆಬ್ಬಳ್ಳಿ ಗ್ರಾಮದ ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸಲು ದೂರದ ತಮಿಳುನಾಡಿನಿಂದ ನಾಲ್ವರು ನುರಿತವರನ್ನು ಕರೆಯಿಸಲಾಗಿತ್ತು. ಅದರಂತೆ ಪಟಾಕಿ ಸಿಡಿಸಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯ್ತು.

ಆದ್ರೆ, ವಿಧಿ ಬಿಡಲಿಲ್ಲ. ತಮಿಳುನಾಡಿನಿಂದ ಬಂದಿದ್ದ ಈ ನಾಲ್ವರ ತಂಡವನ್ನು ಬೇರೊಂದು ಗ್ರಾಮಕ್ಕೆ ಪಟಾಕಿ ಸಿಡಿಸಲು ಆಹ್ವಾನಿಸಲಾಗಿತ್ತು. ಅದರಂತೆ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಾಗ ಏಕಾಏಕಿ ಪಟಾಕಿ ಸ್ಫೋಟಗೊಂಡಿವೆ. ಸ್ಫೋಟದ ರಭಸಕ್ಕೆ ಮನೆಯ ಹೆಂಚು ಹಾರಿಹೋಗಿದ್ದು, ಮನೆಯಲ್ಲಿ ಬೆಂಕಿ ಹೊತ್ತಿ ಉರಿದಿದೆ. ಈ ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:04 pm, Mon, 25 March 24

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ