ಮಂಡ್ಯ, (ಮಾರ್ಚ್ 25): ಪಟಾಕಿ (Firecracker)ಸ್ಫೋಟಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಂಡ್ಯ (Mandya) ತಾಲೂಕಿನ ಜಿ ಕೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ತಮಿಳುನಾಡು ಮೂಲದ ರಮೇಶ್ (67) ಮೃತ ದುರ್ದೈವಿ. ನಾಗಲಿಂಗ ಎನ್ನುವಾತನಿಗೆ ಗಂಭೀರ ಗಾಯಗಳಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸಲು ತಮಿಳುನಾಡಿನಿಂದ ನಾಲ್ವರು ಆಗಮಿಸಿದ್ದರು. ನಿನ್ನೆ ರಾತ್ರಿ ಗ್ರಾಮದಲ್ಲಿ ಅದ್ದೂರಿಯಾಗಿ ಹಬ್ಬ ನೆರವೇರಿದೆ. ಬಳಿಕ ಗ್ರಾಮದ ಆಲೆಮನೆಯೊಂದರಲ್ಲಿ ನಾಲ್ವರು ತಂಗಿದ್ದರು. ಆದ್ರೆ, ಇಂದು(ಮಾರ್ಚ್ 25) ಬೇರೊಂದು ಗ್ರಾಮಕ್ಕೆ ಹೋಗಲು ಪಟಾಕಿಗಳ ತುಂಬುವಾಗ ಸ್ಪೋಟ ಸಂಭವಿಸಿದೆ.
ಸ್ಫೋಟದ ರಭಸಕ್ಕೆ ಹೆಂಚುಗಳು ಹಾರಿಹೋಗಿದ್ದು, ಆಲೆಮನೆ ಹೊತ್ತಿ ಉರಿದಿದೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಇನ್ನು ಸ್ಥಳಕ್ಕೆ ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ್, ಎಸ್ ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಊರು ಹಬ್ಬ, ಜಾತ್ರೆ ಸಂದರ್ಭದಲ್ಲಿ ಪಟಾಕಿ ಸಿಡಿಸುವುದು ಕೆಲವು ಕಡೆಗಳಲ್ಲಿ ಸಂಪ್ರದಾಯ ಇದೆ. ಮೊದಲಿನಿಂದಲೂ ನಡೆದುಕೊಂಡು ಬಂದಿರುತ್ತೆ. ಅದರಂತೆ ಮಂಡ್ಯ ತಾಲೂಕಿನ ಜಿ ಕೆಬ್ಬಳ್ಳಿ ಗ್ರಾಮದ ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸಲು ದೂರದ ತಮಿಳುನಾಡಿನಿಂದ ನಾಲ್ವರು ನುರಿತವರನ್ನು ಕರೆಯಿಸಲಾಗಿತ್ತು. ಅದರಂತೆ ಪಟಾಕಿ ಸಿಡಿಸಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯ್ತು.
ಆದ್ರೆ, ವಿಧಿ ಬಿಡಲಿಲ್ಲ. ತಮಿಳುನಾಡಿನಿಂದ ಬಂದಿದ್ದ ಈ ನಾಲ್ವರ ತಂಡವನ್ನು ಬೇರೊಂದು ಗ್ರಾಮಕ್ಕೆ ಪಟಾಕಿ ಸಿಡಿಸಲು ಆಹ್ವಾನಿಸಲಾಗಿತ್ತು. ಅದರಂತೆ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಾಗ ಏಕಾಏಕಿ ಪಟಾಕಿ ಸ್ಫೋಟಗೊಂಡಿವೆ. ಸ್ಫೋಟದ ರಭಸಕ್ಕೆ ಮನೆಯ ಹೆಂಚು ಹಾರಿಹೋಗಿದ್ದು, ಮನೆಯಲ್ಲಿ ಬೆಂಕಿ ಹೊತ್ತಿ ಉರಿದಿದೆ. ಈ ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾನೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:04 pm, Mon, 25 March 24