ತಮಿಳುನಾಡಿಗೆ ಮತ್ತೆ ನೀರು ಹರಿಸಲು ಆದೇಶ; ಸಂಸದೆ ಸುಮಲತಾ ಅಂಬರೀಶ್​ ಹೇಳಿದ್ದಿಷ್ಟು

ಎರಡು ರಾಜ್ಯಗಳು ಮಾತುಕತೆ ಮೂಲಕ ಈ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ತಮಿಳುನಾಡಿನವರು ಅಷ್ಟೊಂದು ಅಗ್ರೆಸಿವ್ ಆಗಿ ವಾದ ಮಾಡುತ್ತಾರೆ. ಆದ್ರೆ, ನಾವು ಆ ರೀತಿ ವಾದ ಮಾಡಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಸರಿಯಾದ ರೀತಿಯಲ್ಲಿ ವಾದ ಮಾಡುತ್ತಿಲ್ಲ ಎಂದು ಹೇಳುತ್ತಿಲ್ಲ. ಆದ್ರೆ, ನೂರಕ್ಕೆ ನೂರರಷ್ಟು ತಯಾರಾಗಿ ವಾದ ಮಾಡಬೇಕು ಎಂದು ಸಂಸದೆ ಸುಮಲತಾ ಹೇಳಿದರು.

ತಮಿಳುನಾಡಿಗೆ ಮತ್ತೆ ನೀರು ಹರಿಸಲು ಆದೇಶ; ಸಂಸದೆ ಸುಮಲತಾ ಅಂಬರೀಶ್​ ಹೇಳಿದ್ದಿಷ್ಟು
ಸಂಸದೆ ಸುಮಲತಾ
Follow us
ಪ್ರಶಾಂತ್​ ಬಿ.
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 11, 2023 | 5:31 PM

ಮಂಡ್ಯ, ಅ.11: ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ (Cauvery Water Regulation Committee) ಸಭೆ ನಡೆದಿದ್ದು, ತಮಿಳುನಾಡಿಗೆ ಮತ್ತೆ ನೀರು ಹರಿಸಲು ಆದೇಶ ಹೊರಡಿಸಿದೆ. ಹೌದು, ತಮಿಳುನಾಡು ಪ್ರತಿನಿತ್ಯ ಬರೊಬ್ಬರಿ 16 ಸಾವಿರ ಕ್ಯೂಸೆಕ್​ ನೀರು ಹರಿಸುವಂತೆ ಬೇಡಿಕೆ ಇಟ್ಟಿತ್ತು. ಆದರೆ, 3 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಆದೇಶಿಸಿದೆ. ಅದರಂತೆ ಅಕ್ಟೋಬರ್​ 16 ರಿಂದ ಅ.31 ರವರೆಗೆ ನೀರು ಹರಿಸುವಂತೆ ಸೂಚಿಸಲಾಗಿದೆ. ಈ ಕುರಿತು ಮಂಡ್ಯ(Mandya) ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಮಾತನಾಡಿದ ಸಂಸದೆ ಸುಮಲತಾ(Sumalatha) ಅವರು ‘ ಇದು ನಾವು ನಿರೀಕ್ಷೆ ಮಾಡಿದ್ದೇವು. ಇವರು ಏನ್ ಅಂಕಿ ಅಂಶ ಇಟ್ಕೊಂಡು ವಾದ ಮಾಡ್ತಾರೋ? ಸದ್ಯ ಮಳೆ ಬಂದಿದ್ದರಿಂದ ಡ್ಯಾಮ್ ಮತ್ತೆ 100 ಅಡಿ ದಾಟಿದೆ. ಸರ್ಕಾರ ಇದಕ್ಕೆ ಶಾಶ್ವತವಾದ ಪರಿಹಾರ ಕಂಡುಕೊಳ್ಳಬೇಕು ಎಂದರು.

ರಾಜ್ಯ ಸರ್ಕಾರ ಇದಕ್ಕೆ ಶಾಶ್ವತವಾದ ಪರಿಹಾರ ಕಂಡುಕೊಳ್ಳಬೇಕು

ಹೌದು, ಎರಡು ರಾಜ್ಯಗಳು ಮಾತುಕತೆ ಮೂಲಕ ಈ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ತಮಿಳುನಾಡಿನವರು ಅಷ್ಟೊಂದು ಅಗ್ರೆಸಿವ್ ಆಗಿ ವಾದ ಮಾಡುತ್ತಾರೆ. ಆದ್ರೆ, ನಾವು ಆ ರೀತಿ ವಾದ ಮಾಡಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಸರಿಯಾದ ರೀತಿಯಲ್ಲಿ ವಾದ ಮಾಡುತ್ತಿಲ್ಲ ಎಂದು ಹೇಳುತ್ತಿಲ್ಲ. ಆದ್ರೆ, ನೂರಕ್ಕೆ ನೂರರಷ್ಟು ತಯಾರಾಗಿ ವಾದ ಮಾಡಬೇಕು. ನಾವು ನೀರು ಬಿಡಲ್ಲ ಎಂದು ವಾದ ಮಾಡುವುದಕ್ಕೆ ಆಗಲ್ಲ. ಪ್ರಾಕ್ಟಿಕಲ್ ಆಗಿ ಅದು ಸಾಧ್ಯವಾಗುವುದಿಲ್ಲ. ಆದ್ರೆ, ನಮ್ಮ ಜಿಲ್ಲೆಗೆ, ನಮ್ಮ ರಾಜ್ಯಕ್ಕೆ ಅನ್ಯಾಯವಾಗದ ರೀತಿಯಲ್ಲಿ ಕ್ರಮಕೈಗೊಳ್ಳಬೇಕು ಎಂದರು.

ಇದನ್ನೂ ಓದಿ:ತಮಿಳುನಾಡಿಗೆ ಕಾವೇರಿ ನೀರು: ತಜ್ಞರು ಕೊಟ್ಟ ಸಲಹೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ, ಇಲ್ಲಿದೆ ವಿವರ

ಇನ್ನು ಇದೇ ವೇಳೆ ಜೆಡಿಎಸ್ -ಬಿಜೆಪಿ ಹೊಂದಾಣಿಕೆ ವಿಚಾರ ‘ಅದರ ಬಗೆಗೆ ನನಗೆ ಸರಿಯಾದ ಕಮ್ಯೂನಿಕೇಷನ್ ಇಲ್ಲದೆ ಮಾತನಾಡಲ್ಲ. ಎಲ್ಲರನ್ನೂ ಕರೆದು, ವಿಶ್ವಾಸಕ್ಕೆ ತೆಗೆದುಕೊಂಡು ಮಾತನಾಡಿ ನಿರ್ಧಾರಕ್ಕೆ ಬರಬೇಕು ಅನ್ನೋದು ನನ್ನ ಅಭಿಪ್ರಾಯ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧಾರ ಕೈಗೊಳ್ಳದಿದ್ದರೆ ಕಳೆದ ಚುನಾವಣೆ ನಡೆದ ರೀತಿ ಎಲ್ಲರೂ ನೋಡಿದ್ದೀರಿ. ಕಳೆದ ಬಾರಿಯೂ ಕಾಂಗ್ರೆಸ್ ಜೆಡಿಎಸ್ ಹೊಂದಾಣಿಕೆಯಾಗಿದ್ದವು. ಆದ್ರೆ, ರಿಸಲ್ಟ್ ಏನಾಯಿತು ಎನ್ನುವುದು ಎಲ್ಲರಿಗೂ ಗೊತ್ತಿದೆ. ಎಲ್ಲರ ಆಶೀರ್ವಾದ ಇದ್ರೆ, ಮಂಡ್ಯದಲ್ಲೇ ಸ್ಪರ್ಧೆ ಮಾಡುತ್ತೇನೆ ಎನ್ನುವ ಮೂಲಕ ಮಂಡ್ಯದಿಂದ ಸ್ಪರ್ಧೆ ಮಾಡೋ ಬಗೆಗೆ ಪರೋಕ್ಷವಾಗಿ ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ