Narendra Modi: ಮಾ. 12ರಂದು ಮಂಡ್ಯಕ್ಕೆ ಮೋದಿ ಆಗಮನ, ಸಕ್ಕರೆ ನಾಡಲ್ಲಿ ಭರ್ಜರಿ ಸಿದ್ಧತೆ
ಸಕ್ಕರೆ ನಗರಿ ಮಂಡ್ಯದಲ್ಲಿ ನಮೋ ಮೇನಿಯಾಗೆ ಕೌಂಟ್ ಡೌನ್ ಶುರುವಾಗಿದೆ. ಮಾರ್ಚ್ 12ರಂದು ಬೆಂಗಳೂರು-ಮೈಸೂರು ಹೈವೇ ಲೋಕಾರ್ಪಣೆಗೆ ನರೇಂದ್ರ ಮೋದಿ ಆಗಮಿಸುತ್ತಿದ್ದು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ನಡೆಯುವ ಸಮಾವೇಶಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ.
ಮಂಡ್ಯ: ಕರ್ನಾಟಕ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯಕ್ಕೆ ಕೇಂದ್ರ ನಾಯಕರು ಆಗಾಗ ಭೇಟಿ ನೀಡುತ್ತಿದ್ದಾರೆ. ಹುಬ್ಬಳ್ಳಿ, ಬೆಳಗಾವಿ, ಶಿವಮೊಗ್ಗ ಬಳಿಕ ಇದೀಗ ನರೆಂದ್ರ ಮೋದಿ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಸಕ್ಕರೆ ನಗರಿ ಮಂಡ್ಯದಲ್ಲಿ ನಮೋ ಮೇನಿಯಾಗೆ ಕೌಂಟ್ ಡೌನ್ ಶುರುವಾಗಿದೆ. ಮಾರ್ಚ್ 12ರಂದು ಬೆಂಗಳೂರು-ಮೈಸೂರು ಹೈವೇ ಲೋಕಾರ್ಪಣೆಗೆ ನರೇಂದ್ರ ಮೋದಿ ಆಗಮಿಸುತ್ತಿದ್ದು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ನಡೆಯುವ ಸಮಾವೇಶಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ.
16 ಎಕರೆ ವಿಸ್ತೀರ್ಣದಲ್ಲಿ ಬೃಹತ್ ಸಮಾವೇಶ ಮಾಡಲಾಗುತ್ತಿದೆ. ಪ್ರಧಾನಿ ಮೋದಿ ಆಗಮನ ಹಿನ್ನಲೆ ಜಿಲ್ಲಾಡಳಿತ ಭಾರಿ ಎಚ್ಚರಿಕೆ ವಹಿಸುತ್ತಿದೆ. ಸಮಾವೇಶ ನಡೆಯುವ ಸ್ಥಳಕ್ಕೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಎಡಿಜಿಪಿ ಅಲೋಕ್ ಕುಮಾರ್ ಕೂಡ ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂದು ಎಸ್ಪಿಜಿ ಟೀಂ ಸಮಾವೇಶದ ಸ್ಥಳ ಪರಿಶೀಲನೆ ಮಾಡಲಿದೆ. ಪಾರ್ಕಿಂಗ್ ವ್ಯವಸ್ಥೆ, ವೇದಿಕೆ ಪ್ರಧಾನಿ ಸಂಚರಿಸುವ ಮಾರ್ಗ ಪರಿಶೀಲನೆ ಮಾಡಿ ಎಸ್ಪಿ, ಡಿಸಿ ಜೊತೆ ಸಭೆ ನಡೆಸಲಿದೆ.
ಮಂಡ್ಯದಲ್ಲಿ ಮೋದಿ ರೋಡ್ ಶೋ
ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ಮೋದಿ ಅವರು ಶಿವಮೊಗ್ಗ, ಬೆಳಗಾವಿಗೆ ಭೇಟಿ ನೀಡಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ್ದರು. ಹಾಗೂ ಫಲಾನುಭವಿಗಳ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು. ಸದ್ಯ ಈಗ ಮಂಡ್ಯದ ಜನರ ಮನ ಸೆಳೆಯಲು ಸಕ್ಕರೆ ನಾಡಿಗೆ ಭೇಟಿ ನೀಡುತ್ತಿದ್ದಾರೆ. ಇದಕ್ಕಾಗಿ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲಾಗುತ್ತಿದೆ.
ಇದನ್ನೂ ಓದಿ: Narendra Modi: ರುಪೇ ಮತ್ತು ಯುಪಿಐ ಜಾಗತಿಕವಾಗಿ ಭಾರತದ ಗುರುತು ಎಂದ ಪ್ರಧಾನಿ ಮೋದಿ
ಇನ್ನು ವೇದಿಕೆ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ವಾಹನ ನಿಲುಗಡೆ, ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯದ ವ್ಯವಸ್ಥೆಗಳಾಗಬೇಕು ಎಂದು ಅಧಿಕಾರಿಗಳಿಗೆ ಈಗಾಗಲೇ ಹೆಚ್.ಎನ್. ಗೋಪಾಲಕೃಷ್ಣ ಸೂಚನೆ ನೀಡಿದ್ದಾರೆ.
ರಸ್ತೆಯಲ್ಲಿ ಬೆಳೆದು ನಿಂತಿದ್ದ ಕೊಂಬೆಗಳ ತೆರವು ಮಾಡಿದ ಅಧಿಕಾರಿಗಳು
ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಹಿನ್ನಲೆ ಭದ್ರತಾ ದೃಷ್ಟಿಯಿಂದ ರಸ್ತೆಯಲ್ಲಿ ಬೆಳೆದು ನಿಂತಿದ್ದ ಕೊಂಬೆಗಳನ್ನು ತೆರವು ಮಾಡಲಾಗುತ್ತಿದೆ. ಎಸ್ಪಿಜಿ ನಿರ್ದೇಶನದಂತೆ ಮರಗಳ ಕೊಂಬೆಗಳ ತೆರವು ಮಾಡಲಾಗುತ್ತಿದ್ದು ಕೊಂಬೆ ತೆರವು ಹಿನ್ನೆಲೆ ಕೈ ಕಾರ್ಯಕರ್ತರು ಹೈ ಡ್ರಾಮ ಮಾಡಿದ್ದಾರೆ. ಮೋದಿಗಾಗಿ ಮರಗಳ ಮಾರಣ ಹೋಮ ಎಂದು ಬಿಂಬಿಸುತ್ತಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 10:22 am, Wed, 8 March 23