ಮಂಡ್ಯ: ಜೀವಂತವಿದೆ ಭ್ರೂಣ ಹತ್ಯೆ; ಭ್ರೂಣ ಲಿಂಗ ಪತ್ತೆ, ಹತ್ಯೆಗೆ ಬಂದಿದ್ದ ದಂಪತಿ ಪೊಲೀಸರ ವಶ
ರಾಮನಗರ ಜಿಲ್ಲೆಯ ಚನ್ನಪಟ್ಟಣ ಮೂಲದ ದಂಪತಿಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮೂರನೆಯದು ಹೆಣ್ಣು ಮಗುವಾಗುವ ಶಂಕೆ ಇದೆ. ಹೀಗಾಗಿ ಭ್ರೂಣ ಲಿಂಗ ಪತ್ತೆ, ಹತ್ಯೆಗೆ ದಂಪತಿ ಬಂದಿದ್ದಾರೆ. ಆರೋಗ್ಯಾಧಿಕಾರಿ ಈ ಸಂಬಂಧ ದೂರು ನೀಡಿದ್ದು, ದೂರಿನ ಅನ್ವಯ ದಂಪತಿಯನ್ನು ಮಂಡ್ಯ ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ: ಭ್ರೂಣ ಲಿಂಗ ಪತ್ತೆ, ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಖಚಿತ ಮಾಹಿತಿ ಆಧರಿಸಿ ಮಂಡ್ಯದ ವಿವೇಕಾನಂದ ಜೋಡಿ ರಸ್ತೆಯಲ್ಲಿರುವ ನಮ್ಮ ಮನೆ ಪಾಲಿ ಕ್ಲಿನಿಕ್ ಮೇಲೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಧನಂಜಯ್ ದಾಳಿ ಮಾಡಿದ್ದಾರೆ. ಈ ವೇಳೆ ದಂಪತಿ ಭ್ರೂಣ ಲಿಂಗ ಪತ್ತೆಗೆ ಬಂದಿರುವುದಾಗಿ ತಪ್ಪೊಪ್ಪಿಕ್ಕೊಂಡಿದ್ದಾರೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ಮೂಲದ ದಂಪತಿಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮೂರನೆಯದು ಹೆಣ್ಣು ಮಗುವಾಗುವ ಶಂಕೆ ಇದೆ. ಹೀಗಾಗಿ ಭ್ರೂಣ ಲಿಂಗ ಪತ್ತೆ, ಹತ್ಯೆಗೆ ದಂಪತಿ ಬಂದಿದ್ದಾರೆ. ಆರೋಗ್ಯಾಧಿಕಾರಿ ಈ ಸಂಬಂಧ ದೂರು ನೀಡಿದ್ದು, ದೂರಿನ ಅನ್ವಯ ದಂಪತಿಯನ್ನು ಮಂಡ್ಯ ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದಂಪತಿ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಕ್ಲಿನಿಕ್ನ ಸಿಬ್ಬಂದಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಈ ಹಿಂದೆಯೂ ಹಲವು ಭ್ರೂಣ ಲಿಂಗ ಪತ್ತೆ, ಹತ್ಯೆ ಮಾಡಿರುವ ಶಂಕೆ ಉಂಟಾಗಿದೆ.
ತುಮಕೂರು: ಹೆರಿಗೆಯ ಬಳಿಕ ಬಾಲ್ಯವಿವಾಹ ಪತ್ತೆ ಹೆರಿಗೆಯ ಬಳಿಕ ಬಾಲ್ಯವಿವಾಹ ಪತ್ತೆಯಾದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ನಡೆದಿದೆ. ಅಪ್ರಾಪ್ತೆ ಹೆರಿಗೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾಗ ಬಾಲ್ಯವಿವಾಹವಾಗಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಅಪ್ರಾಪ್ತೆಯ ಪತಿಯನ್ನು ಪೊಲೀಸರು ಬಂಧಿಸಿದ್ದು, ಅಪ್ರಾಪ್ತೆ ಪತಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಅಪ್ರಾಪ್ತೆಗೆ ಹೆಣ್ಣು ಮಗುವಾಗಿದ್ದು, ಈ ವೇಳೆ ಬಾಲ್ಯವಿವಾಹವಾಗಿರುವುದು ಬೆಳಕಿಗೆ ಬಂದಿದೆ. ಅಪ್ರಾಪ್ತೆಯ ಪತಿ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾನೆ. ಸದ್ಯ ಪೊಲೀಸರು ಪತಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಮತ್ತೆ ಕಾಡುತ್ತಿದೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣ; ಕಾನೂನುಬಾಹಿರ ಚಟುವಟಿಕೆಗಳ ತಡೆಗೆ ವಿಜಯಪುರ ಜಿಲ್ಲಾಡಳಿತದಿಂದ ಸಿದ್ಧತೆ
ಭ್ರೂಣಹತ್ಯೆ ತಡೆಗೆ ಚನ್ನೇಶ್ ರೂಪಿಸಿದ ಮಾಸ್ಟರ್ಪ್ಲಾನ್ ಇದು: ಒಂದೇ ನಂಬರ್ನಲ್ಲಿ ಸಮಗ್ರ ಮಾಹಿತಿ
Published On - 11:58 am, Tue, 12 October 21