ಕ್ಷುಲ್ಲಕ ಕಾರಣಕ್ಕೆ ಮಂಡ್ಯದ ಕೆ.ಆರ್.ಪೇಟೆ ಆಸ್ಪತ್ರೆ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿತ! ನಾಲ್ವರು ಅರೆಸ್ಟ್
ಸಿಸಿಟಿವಿ ದೃಶ್ಯ ಆಧಾರಿಸಿ ಆರೋಪಿಗಳಾದ ಪರಮೇಶ್, ವಾಸು, ವಿನೋದ್, ದರ್ಶನ್ನ ಬಂಧಿಸಲಾಗಿದೆ. ಕೆ.ಆರ್.ಪೇಟೆ ಪಟ್ಟಣ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಆಸ್ಪತ್ರೆ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಯುವಕರು ಯುವತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದಿದ್ದರು. ಈ ವೇಳೆ ಆಸ್ಪತ್ರೆ ಸಿಬ್ಬಂದಿ ರಂಗನಾಥ್ ಮೇಲೆ ಹಲ್ಲೆ ನಡೆಸಿದ್ದಾರೆ. ಮದ್ಯದ ಅಮಲಿನಲ್ಲಿ ಯುವಕರು ಹಲ್ಲೆಗೈದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಲ್ಲೆ ತಡೆಯಲು ಬಂದ ವೈದ್ಯ ಶ್ರೀಕಾಂತ್ ಮೇಲೂ ಹಲ್ಲೆ ಮಾಡಿದ್ದಾರೆ. ಆಸ್ಪತ್ರೆಗೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಸಿಸಿಟಿವಿ ದೃಶ್ಯ ಆಧಾರಿಸಿ ಆರೋಪಿಗಳಾದ ಪರಮೇಶ್, ವಾಸು, ವಿನೋದ್, ದರ್ಶನ್ನ ಬಂಧಿಸಲಾಗಿದೆ. ಕೆ.ಆರ್.ಪೇಟೆ ಪಟ್ಟಣ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಆಸ್ಪತ್ರೆಗೆ ಬಾರದ ವೈದ್ಯರು ಹಾಗೂ ಸಿಬ್ಬಂದಿ ದಾವಣಗೆರೆ: ತಾಲೂಕಿನ ಹೆಬ್ಬಾಳ್ ಗ್ರಾಮದ ಸಮೂದಾಯ ಆರೋಗ್ಯ ಕೇಂದ್ರಕ್ಕೆ ವೈದ್ಯರು ಮತ್ತು ಸಿಬ್ಬಂದಿ ಬರುತಿಲ್ಲ ಎಂಬ ಆರೋಪ ಕೇಳಿಬಂದಿದೆ. ಆಕ್ರೋಶಗೊಂಡ ಗ್ರಾಮಸ್ಥರು ಆಸ್ಪತ್ರೆಗೆ ಬೀಗ ಹಾಕಿದ್ದರು. ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಇನ್ನೊಮ್ಮೆ ತಪ್ಪಾಗದಂತೆ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ. ನಂತರ ಗ್ರಾಮಸ್ಥರು ಬೀಗ ತೆಗೆದು ಸಿಬ್ಬಂದಿಗೆ ಕೆಲಸ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ.
ಇದನ್ನೂ ಓದಿ
ಸ್ಪರ್ಧಾತ್ಮಕ ಜಗತ್ತಿನಲ್ಲೀಗ ತಂತ್ರಜ್ಞಾನವೇ ಪ್ರಮುಖ ಅಸ್ತ್ರ: ಸಿಡ್ನಿ ಡೈಲಾಗ್ ಉದ್ದೇಶಿ ಪ್ರಧಾನಿ ಮೋದಿ ಮಾತು
ತಡ ರಾತ್ರಿ ಬೈಕ್ ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ರೈತರಿಂದ ಲಕ್ಷಾಂತರ ರೂಪಾಯಿ ದೋಚಿದ ದುಷ್ಕರ್ಮಿಗಳು