AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದದ ಮಧ್ಯೆ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್​ಗೆ ಸಿದ್ದತೆ; ವಿರೋಧಿಸಿ ರೈತ ಸಂಘಟನೆ ಕಾರ್ಯಕರ್ತರ ಪ್ರತಿಭಟನೆ

ಕೆಆರ್​ಎಸ್​ ಜಲಾಶಯ, ಮಂಡ್ಯ ಜಿಲ್ಲೆಯ ರೈತರ ಜೀವನಾಡಿ. ಇದೀಗ ಸಾಕಷ್ಟು ವಿರೋಧದ ನಡುವೆ ವಿವಾದಿತ ಬೇಬಿ ಬೆಟ್ಟದಲ್ಲಿ ಕುಳಿಗಳನ್ನ ಕೊರೆದು ಟ್ರಯಲ್ ಬ್ಲಾಸ್ಟ್ ಗೆ ಮಂಡ್ಯ ಜಿಲ್ಲಾಡಳಿತ ಮುಂದಾಗಿದೆ.  ಇದು ರೈತ ಸಂಘಟನೆಗಳ ಆಕ್ರೋಶಕ್ಕೂ ಕೂಡ ಕಾರಣವಾಗಿದೆ.

ವಿವಾದದ ಮಧ್ಯೆ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್​ಗೆ ಸಿದ್ದತೆ; ವಿರೋಧಿಸಿ ರೈತ ಸಂಘಟನೆ ಕಾರ್ಯಕರ್ತರ ಪ್ರತಿಭಟನೆ
ವಿವಾದದ ಮಧ್ಯೆ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್​ಗೆ ಸಿದ್ದತೆ; ವಿರೋಧಿಸಿ ರೈತ ಸಂಘಟನೆಗಳು ಪ್ರತಿಭಟನೆ
ಪ್ರಶಾಂತ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 03, 2024 | 7:55 PM

Share

ಮಂಡ್ಯ, ಜು.03: ಸಾಕಷ್ಟು ವಿರೋಧದ ನಡುವೆ ಮಂಡ್ಯ ಜಿಲ್ಲೆಯ ಪಾಂಡವಪುರ(Pandavapura) ತಾಲೂಕಿನ ವಿವಾದಿತ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್​ಗೆ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ. ಅಂದಹಾಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್(KRS) ಜಲಾಶಯ, ಹಳೇ ಮೈಸೂರು ಭಾಗದ ರೈತರ ಜೀವನಾಡಿ. ಅಷ್ಟೇ ಅಲ್ಲದೆ ಮಂಡ್ಯ, ಮೈಸೂರು, ಬೆಂಗಳೂರು ನಗರದ ಜನರ ನೀರಿನ ದಾಹವನ್ನ ತಣಿಸುವ ಜೀವನದಿ. ಇದೇ ಜಲಾಶಯಕ್ಕೆ ಅಪಾಯ ಎದುರಾಗುತ್ತದೆ ಎಂದು ಬೇಬಿ ಬೆಟ್ಟದಲ್ಲಿ ಗಣಿಗಾರಿಯನ್ನ ಈ ಹಿಂದೆ ಹೈಕೋರ್ಟ್ ಸೂಚನೆ ಮೇರೆಗೆ ಸ್ಥಗಿತ ಮಾಡಲಾಗಿದೆ.

ಕಳೆದ ಎರಡು ವರ್ಷಗಳಿಂದ ವಿವಾದಿತ ಸ್ಥಳದಲ್ಲಿ ಗಣಿಗಾರಿಕೆ ನಡೆಯುತ್ತಿಲ್ಲ. ಈ ಮಧ್ಯೆ ಕೆಲ ಗಣಿ ಮಾಲೀಕರು ಹೈಕೋರ್ಟ್ ಮೊರೆ ಹೋಗಿ, ರಿಟ್ ಪಿಟಿಶನ್ ಸಲ್ಲಿಸಿದ್ದರು. ಹೀಗಾಗಿ ಟ್ರಯಲ್ ಬ್ಲಾಸ್ಟ್ ನಡೆಸಿ, ಜಲಾಶಯಕ್ಕೆ ಅಪಾಯ ಎದುರಾಗುತ್ತಾ ಅಥವಾ ಇಲ್ಲವಾ, ಅದರ ಸಾಧಕ-ಬಾಧಕಗಳ ಬಗ್ಗೆ ವರದಿ ನೀಡುವಂತೆ ಹೈಕೋರ್ಟ್, ಮಂಡ್ಯ ಜಿಲ್ಲಾಡಳಿತಕ್ಕೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಸಾಕಷ್ಟು ವಿರೋಧದ ನಡುವೆ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲು ಮಂಡ್ಯ ಜಿಲ್ಲಾಡಳಿತ ಮುಂದಾಗಿದೆ. ಕಾವೇರಿ ನೀರಾವರಿ ನಿಗಮ ಹಾಗೂ ಮಂಡ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಬೇಬಿ ಬೆಟ್ಟದಲ್ಲಿ ಮಷಿನ್​ಗಳ ಮೂಲಕ ಆಯ್ದ ಐದು ಸ್ಥಳಗಳಲ್ಲಿ ಕುಳಿಗಳನ್ನ ಸಹ ಕೊರಿಸಲಾಗುತ್ತಿದೆ. ಎರಡು ಮೂರು ದಿನಗಳಲ್ಲಿ ಜಾರ್ಖಂಡ್ ಮೂಲದ ತಜ್ಞರನ್ನ ಕರೆಯಿಸಿ ಟ್ರಯಲ್ ಬ್ಲಾಸ್ಟ್ ಕೂಡ ನಡೆಸಲಾಗುತ್ತದೆ.

ಇದನ್ನೂ ಓದಿ:ಬೇಬಿ ಬೆಟ್ಟ ಟ್ರಯಲ್ ಬ್ಲಾಸ್ಟ್‌: ಹಲವು ಅನುಮಾನ ಮೂಡಿಸಿದ ಅಧಿಕಾರಗಳ ನಡೆ, ಗಣಿಮಾಲೀಕರ ಲಾಬಿಗೆ ಮಣಿದು ನಕಲಿ ಆದೇಶ ಸೃಷ್ಟಿಸಿತ್ತಾ ಸರ್ಕಾರ?

ಮಾಜಿ ಸಂಸದೆ ಸುಮಲತಾ ಸೇರಿದಂತೆ ರೈತ ಸಂಘಟನೆಗಳು ಇದಕ್ಕೆ ವಿರೋಧಿಸಿ ಪ್ರತಿಭಟನೆ

ಅಂದಹಾಗೆ 2018ರಲ್ಲಿ ಗಣಿಗಾರಿಕೆಯಿಂದಾಗಿ ದೊಡ್ಡಮಟ್ಟಿನ ಸದ್ದು ಬಂದಿತ್ತು. ಇದರಿಂದಾಗಿ ಜಲಾಶಯಕ್ಕೆ ಅಪಾಯ ಎದುರಾಗುತ್ತದೆ ಎಂದು ಮಾಜಿ ಸಂಸದೆ ಸುಮಲತಾ ಸೇರಿದಂತೆ ರೈತ ಸಂಘಟನೆಗಳು ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಯನ್ನ ಸ್ಥಗಿತ ಮಾಡುವಂತೆ ದೊಡ್ಡ ಮಟ್ಟಿನ ಹೋರಾಟವನ್ನು ಕೂಡ ನಡೆಸಿದ್ದರು. ಹೈಕೋರ್ಟ್ ಕೂಡ ಗಣಿಗಾರಿಕೆ ಸ್ಥಗಿತ ಮಾಡುವಂತೆ ಆದೇಶಿಸಿತ್ತು. ಹೀಗಾಗಿ ಎರಡು ವರ್ಷಗಳಿಂದ ಯಾವುದೇ ರೀತಿಯ ಗಣಿಗಾರಿಕೆ ನಡೆಯುತ್ತಿಲ್ಲ. ಆದರೆ, ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈ ಹಿಂದೆ ಟ್ರಯಲ್ ಬ್ಲಾಸ್ಟ್ ನಡೆಸಲು ಮುಂದಾದ ವೇಳೆ ಗೋ ಬ್ಯಾಕ್ ಚಳುವಳಿ ನಡೆಸಲಾಗಿತ್ತು. ಆ ನಂತರ ಲೋಕಸಭಾ ಚುನಾವಣೆಗೂ ಮೊದಲು ಸಹಾ ವಿಜ್ಷಾನಿಗಳು ಬಂದಂತಹ ವೇಳೆ ಕೂಡ ರೈತರು ವಿರೋಧ ವ್ಯಕ್ತಪಡಿಸಿದ್ದರು.

ಹೀಗಾಗಿ ಈ ಸಮಯದಲ್ಲೂ ಕೂಡ ಟ್ರಯಲ್ ಬ್ಲಾಸ್ಟ್ ಸ್ಥಗಿತ ಮಾಡಲಾಗಿತ್ತು. ಆದರೆ, ಇದೀಗ ವಿರೋಧದ ನಡುವೆ ಸಹ ಸಾಕಷ್ಟು ಪೊಲೀಸ್ ಭದ್ರತೆಯಲ್ಲಿ ಟ್ರಯಲ್ ಬ್ಲಾಸ್ಟ್​ಗೆ ಜಿಲ್ಲಾಡಳಿತ ಕೂಡ ಮುಂದಾಗಿದೆ. ಮತ್ತೊಂದು ಕಡೆ ಟ್ರಯಲ್ ಬ್ಲಾಸ್ಟ್ ನಡೆಸುವುದನ್ನ ವಿರೋಧಿಸಿ ಕೆಆರ್​ಎಸ್​ನ ಬೃಂದಾವನ ಗೇಟ್ ಬಳಿ ರೈತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಕೂಡ ನಡೆಸುತ್ತಿದ್ದಾರೆ. ಒಟ್ಟಾರೆ ಸಾಕಷ್ಟು ವಿರೋಧದ ನಡುವೆ ಕೆಆರ್​ಎಸ್ ಜಲಾಶಯದ ಸಮೀಪವೇ ಇರುವ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್​ಗೆ ಮಂಡ್ಯ ಜಿಲ್ಲಾಡಳಿತ ಮುಂದಾಗಿದ್ದು, ಸಾಕಷ್ಟು ಟೀಕೆಗೂ ಕೂಡ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:53 pm, Wed, 3 July 24

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ