AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಕ್ಕಲಿಗರ ಬಗ್ಗೆ ಸಾಹಿತಿ ಪ್ರೊ. ಭಗವಾನ್ ಅವಹೇಳನಕಾರಿ ಹೇಳಿಕೆ: ಮಂಡ್ಯ ಬಿಜೆಪಿ ಕಾರ್ಯಕರ್ತರಿಂದ ಎಸ್​ಪಿಗೆ ದೂರು

ಮೈಸೂರಿನಲ್ಲಿ ನಡೆದ ಮಹಿಷ ಉತ್ಸವದಲ್ಲಿ ಮಾತನಾಡಿದ್ದ ಪ್ರೊ.ಕೆ.ಎಸ್.ಭಗವಾನ್ (Pro.K.S.Bhagawan) ಅವರು ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಮೂಳಕ ಚರ್ಚೆಗೆ ಗ್ರಾಸವಾಗಿದ್ದರು. ಎಲ್ಲೆಡೆ ತೀವ್ರ ವಿರೋಧ ಕೂಡ ವ್ಯಕ್ತವಾಗಿತ್ತು. ಇದೀಗ ಮಂಡ್ಯ ಬಿಜೆಪಿ ಕಾರ್ಯಕರ್ತರು ಮಂಡ್ಯ ಅಡಿಷನಲ್​ ಎಸ್​ಪಿಗೆ ಈ ಕುರಿತು ದೂರು ಕೊಟ್ಟಿದ್ದಾರೆ.

ಒಕ್ಕಲಿಗರ ಬಗ್ಗೆ ಸಾಹಿತಿ ಪ್ರೊ. ಭಗವಾನ್ ಅವಹೇಳನಕಾರಿ ಹೇಳಿಕೆ: ಮಂಡ್ಯ ಬಿಜೆಪಿ ಕಾರ್ಯಕರ್ತರಿಂದ ಎಸ್​ಪಿಗೆ ದೂರು
ಸಾಹಿತಿ ಪ್ರೊ. ಭಗವಾನ್ ವಿರುದ್ಧ ಎಸ್​ಪಿಗೆ ದೂರು ನೀಡಿದ ಬಿಜೆಪಿ ಕಾರ್ಯಕರ್ತರು
ಪ್ರಶಾಂತ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 18, 2023 | 4:27 PM

Share

ಮಂಡ್ಯ, ಅ.18: ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಮಹಿಷ ಉತ್ಸವದಲ್ಲಿ ಮಾತನಾಡಿದ್ದ ಪ್ರೊ.ಕೆ.ಎಸ್.ಭಗವಾನ್ (Pro.K.S.Bhagawan) ಅವರು ಒಕ್ಕಲಿಗರು ಸಂಸ್ಕೃತಿ ಹೀನರು‌ ಎನ್ನುವುದರ ಮೂಲಕ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನಲೆ  ಸಾಹಿತಿ ಪ್ರೊ. ಭಗವಾನ್ ವಿರುದ್ಧ ಮಂಡ್ಯ(Mandya) ಬಿಜೆಪಿ ಕಾರ್ಯಕರ್ತರು ಸೇರಿ ಮಂಡ್ಯ ಅಡಿಷನಲ್​ ಎಸ್​ಪಿ ತಿಮ್ಮಯ್ಯ ಎಂಬುವವರಿಗೆ ದೂರು ನೀಡಿದ್ದಾರೆ.

ಪ್ರೊ.ಭಗವಾನ್  ಏನು ಹೇಳಿದ್ದರು?

ತೀವ್ರ ವಿರೋಧದ ನಡುವೆ ಮಹಿಷ ಉತ್ಸವ ನೆರವೇರಿದ್ದು, ಈ ವೇಳೆ ಮಾತನಾಡುತ್ತಾ ಪ್ರೊ.ಕೆಎಸ್​ ಭಗವಾನ್ ಅವರು ‘ಅಗ್ನಿ ಪೂಜೆಯನ್ನು ಯಾಕೆ ಮಾಡುತ್ತಾರೆ. ಅದರಲ್ಲಿ ಏನು ಪ್ರಯೋಜನ ಇಲ್ಲ ಎಂದು ಬುದ್ಧ ತಿಳಿಸಿದ್ದರು. ಹೀಗಾಗಿ ರಾಜ ಮಹಾರಾಜರು ಅಗ್ನಿ ಪೂಜೆಯನ್ನು‌ ನಿಲ್ಲಿಸಿದರು. ಇದಕ್ಕಾಗಿ‌ ಬುದ್ಧರನ್ನು ಕಂಡರೆ ಬ್ರಾಹ್ಮಣರಿಗೆ ಕೋಪ. ಈಗಲೂ ಬ್ರಾಹ್ಮಣರು ಬುದ್ಧರ ಮೇಲೆ ಕೋಪವಿದೆ. ಬುದ್ಧರಿಗೆ ಜ್ಞಾನೋದಯವಾಗಿದ್ದು ಅರಳಿ ಮರದ ಕೆಳಗೆ, ಹೀಗಾಗಿ ಅವರು ಹೋಮ ಮಾಡುವಾಗ ಬೆಂಕಿಗೆ ಅರಳಿ ಮರದ ಚಕ್ಕೆ ಹಾಕುತ್ತಾರೆ. ಬುದ್ಧರ ಮೇಲಿನ ಕೋಪಕ್ಕೆ ಅರಳಿ ಮರದ ಚಕ್ಕೆಯನ್ನು ಬೆಂಕಿಗೆ ಹಾಕುತ್ತಾರೆ. ಬ್ರಾಹ್ಮಣರ ಸಂಪ್ರದಾಯಗಳು ಗೊಡ್ಡು ಸಂಪ್ರದಾಯಗಳು. ಅವರ ಸಂಪ್ರದಾಯಕ್ಕೆ ಅರ್ಥ ಇಲ್ಲ ಎಂದು ಹರಿಹಾಯ್ದಿದ್ದರು.

ಇದನ್ನೂ ಓದಿ:ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಪ್ರೊ ಕೆಎಸ್​​ ಭಗವಾನ್​ರನ್ನು ಬಂಧಿಸುವಂತೆ ಒಕ್ಕಲಿಗರ ಸಂಘದಿಂದ ಆಗ್ರಹ

ಇನ್ನು 2 ಸಾವಿರ ವರ್ಷದಿಂದ ಇವರು ಬೇರೆ ಅವರಿಗೆ ಸಂಸ್ಕೃತ ಕಲಿಸಲಿಲ್ಲ. ಎಲ್ಲಾ ಶೂದ್ರರು ಬ್ರಾಹ್ಮಣರ ಗುಲಾಮರು. ಶೂದ್ರನನ್ನು ದೇವರು ಸೃಷ್ಠಿ ಮಾಡಿರುವುದೆ ಬ್ರಾಹ್ಮಣರ ಸೇವೆ ಮಾಡಲು ಎಂದು‌ ತಿಳಿಸಿದಿದ್ದಾರೆ. ಇಂತಹ ಧರ್ಮ ನಮಗೇಕೆ ಬೇಕು, ನಮಗೆ ಬೇಡ ಎಂದಿದ್ದರು. ಜೊತೆಗೆ ಇದೇ ವೇಳೆ ಒಕ್ಕಲಿಗರು ಸಂಸ್ಕೃತಿ ಹೀನರು‌. ಈ ಮಾತು ನನ್ನದು ಅಲ್ಲ‌ ಕುವೆಂಪು ಅವರದ್ದು. ನಾನು ಹೇಳಿದ್ರೆ ನನ್ನ ಹೊಡೆಯುವುದಕ್ಕೆ ಬರುತ್ತಾರೆ. ನಿಜ ಹೇಳಿದವರನ್ನು ಯಾರು ಬಿಡಲ್ಲ. ಆದರೇ ನಿಜ ಹೇಳಿಯೇ ಸಾಯಬೇಕು ಎಂದು ಹೇಳಿದ್ದರು. ಈ ಮಾತಿನಿಂದಲೇ ಭಗವಾನ್​ ಅವರನ್ನು ದಸರಾ ಕವಿಗೋಷ್ಠಿಯಿಂದ ಕೈ ಬಿಡಲಾಗಿತ್ತು. ಇದೀಗ ಮಂಡ್ಯ ಅಡಿಷನಲ್​ ಎಸ್​ಪಿ ಗೂ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ