ಮಂಡ್ಯ, ಅ.18: ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಮಹಿಷ ಉತ್ಸವದಲ್ಲಿ ಮಾತನಾಡಿದ್ದ ಪ್ರೊ.ಕೆ.ಎಸ್.ಭಗವಾನ್ (Pro.K.S.Bhagawan) ಅವರು ಒಕ್ಕಲಿಗರು ಸಂಸ್ಕೃತಿ ಹೀನರು ಎನ್ನುವುದರ ಮೂಲಕ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನಲೆ ಸಾಹಿತಿ ಪ್ರೊ. ಭಗವಾನ್ ವಿರುದ್ಧ ಮಂಡ್ಯ(Mandya) ಬಿಜೆಪಿ ಕಾರ್ಯಕರ್ತರು ಸೇರಿ ಮಂಡ್ಯ ಅಡಿಷನಲ್ ಎಸ್ಪಿ ತಿಮ್ಮಯ್ಯ ಎಂಬುವವರಿಗೆ ದೂರು ನೀಡಿದ್ದಾರೆ.
ತೀವ್ರ ವಿರೋಧದ ನಡುವೆ ಮಹಿಷ ಉತ್ಸವ ನೆರವೇರಿದ್ದು, ಈ ವೇಳೆ ಮಾತನಾಡುತ್ತಾ ಪ್ರೊ.ಕೆಎಸ್ ಭಗವಾನ್ ಅವರು ‘ಅಗ್ನಿ ಪೂಜೆಯನ್ನು ಯಾಕೆ ಮಾಡುತ್ತಾರೆ. ಅದರಲ್ಲಿ ಏನು ಪ್ರಯೋಜನ ಇಲ್ಲ ಎಂದು ಬುದ್ಧ ತಿಳಿಸಿದ್ದರು. ಹೀಗಾಗಿ ರಾಜ ಮಹಾರಾಜರು ಅಗ್ನಿ ಪೂಜೆಯನ್ನು ನಿಲ್ಲಿಸಿದರು. ಇದಕ್ಕಾಗಿ ಬುದ್ಧರನ್ನು ಕಂಡರೆ ಬ್ರಾಹ್ಮಣರಿಗೆ ಕೋಪ. ಈಗಲೂ ಬ್ರಾಹ್ಮಣರು ಬುದ್ಧರ ಮೇಲೆ ಕೋಪವಿದೆ. ಬುದ್ಧರಿಗೆ ಜ್ಞಾನೋದಯವಾಗಿದ್ದು ಅರಳಿ ಮರದ ಕೆಳಗೆ, ಹೀಗಾಗಿ ಅವರು ಹೋಮ ಮಾಡುವಾಗ ಬೆಂಕಿಗೆ ಅರಳಿ ಮರದ ಚಕ್ಕೆ ಹಾಕುತ್ತಾರೆ. ಬುದ್ಧರ ಮೇಲಿನ ಕೋಪಕ್ಕೆ ಅರಳಿ ಮರದ ಚಕ್ಕೆಯನ್ನು ಬೆಂಕಿಗೆ ಹಾಕುತ್ತಾರೆ. ಬ್ರಾಹ್ಮಣರ ಸಂಪ್ರದಾಯಗಳು ಗೊಡ್ಡು ಸಂಪ್ರದಾಯಗಳು. ಅವರ ಸಂಪ್ರದಾಯಕ್ಕೆ ಅರ್ಥ ಇಲ್ಲ ಎಂದು ಹರಿಹಾಯ್ದಿದ್ದರು.
ಇದನ್ನೂ ಓದಿ:ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಪ್ರೊ ಕೆಎಸ್ ಭಗವಾನ್ರನ್ನು ಬಂಧಿಸುವಂತೆ ಒಕ್ಕಲಿಗರ ಸಂಘದಿಂದ ಆಗ್ರಹ
ಇನ್ನು 2 ಸಾವಿರ ವರ್ಷದಿಂದ ಇವರು ಬೇರೆ ಅವರಿಗೆ ಸಂಸ್ಕೃತ ಕಲಿಸಲಿಲ್ಲ. ಎಲ್ಲಾ ಶೂದ್ರರು ಬ್ರಾಹ್ಮಣರ ಗುಲಾಮರು. ಶೂದ್ರನನ್ನು ದೇವರು ಸೃಷ್ಠಿ ಮಾಡಿರುವುದೆ ಬ್ರಾಹ್ಮಣರ ಸೇವೆ ಮಾಡಲು ಎಂದು ತಿಳಿಸಿದಿದ್ದಾರೆ. ಇಂತಹ ಧರ್ಮ ನಮಗೇಕೆ ಬೇಕು, ನಮಗೆ ಬೇಡ ಎಂದಿದ್ದರು. ಜೊತೆಗೆ ಇದೇ ವೇಳೆ ಒಕ್ಕಲಿಗರು ಸಂಸ್ಕೃತಿ ಹೀನರು. ಈ ಮಾತು ನನ್ನದು ಅಲ್ಲ ಕುವೆಂಪು ಅವರದ್ದು. ನಾನು ಹೇಳಿದ್ರೆ ನನ್ನ ಹೊಡೆಯುವುದಕ್ಕೆ ಬರುತ್ತಾರೆ. ನಿಜ ಹೇಳಿದವರನ್ನು ಯಾರು ಬಿಡಲ್ಲ. ಆದರೇ ನಿಜ ಹೇಳಿಯೇ ಸಾಯಬೇಕು ಎಂದು ಹೇಳಿದ್ದರು. ಈ ಮಾತಿನಿಂದಲೇ ಭಗವಾನ್ ಅವರನ್ನು ದಸರಾ ಕವಿಗೋಷ್ಠಿಯಿಂದ ಕೈ ಬಿಡಲಾಗಿತ್ತು. ಇದೀಗ ಮಂಡ್ಯ ಅಡಿಷನಲ್ ಎಸ್ಪಿ ಗೂ ದೂರು ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ