AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಷೇಧಾಜ್ಞೆ ಉಲ್ಲಂಘಿಸಿ ಬೈಕ್ ಱಲಿ ನಡೆಸಿದ್ದ ಪ್ರಕರಣ: ಮಂಡ್ಯದ 17 ಬಿಜೆಪಿ ಕಾರ್ಯಕರ್ತರಿಗೆ ಸಮನ್ಸ್

ಒಂದೆಡೆ, ಬಿಜೆಪಿ ಕಾರ್ಯಕರ್ತರ ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ರಿಓಪನ್ ಮಾಡುತ್ತಿದೆ ಎಂಬ ಪ್ರತಿಪಕ್ಷದ ಆರೋಪದ ಬೆನ್ನಲ್ಲೇ ಈ ವಿದ್ಯಮಾನವೂ ನಡೆದಿದೆ.

ನಿಷೇಧಾಜ್ಞೆ ಉಲ್ಲಂಘಿಸಿ ಬೈಕ್ ಱಲಿ ನಡೆಸಿದ್ದ ಪ್ರಕರಣ: ಮಂಡ್ಯದ 17 ಬಿಜೆಪಿ ಕಾರ್ಯಕರ್ತರಿಗೆ ಸಮನ್ಸ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 12, 2024 | 9:03 AM

Share

ಮಂಡ್ಯ, ಜನವರಿ 12: ನಿಷೇಧಾಜ್ಞೆ ಉಲ್ಲಂಘಿಸಿ 2017ರಲ್ಲಿ ಬೈಕ್ ಱಲಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯ (Mandya) ಬಿಜೆಪಿಯ 17 ಮಂದಿ ಕಾರ್ಯಕರ್ತರಿಗೆ (BJP Workers) ಪಾಂಡವಪುರ ಜೆಎಂಎಫ್​ಸಿ ಕೋರ್ಟ್​ ಸಮನ್ಸ್ ಜಾರಿಗೊಳಿಸಿದೆ. ಈ ಕಾರ್ಯಕರ್ತರು ಎಸ್​ಡಿಪಿಐ, ಪಿಎಫ್​ಐ ಸಂಘಟನೆಗಳ ವಿರುದ್ಧದ ಪ್ರತಿಭಟನೆಗೆ ಮಂಗಳೂರಿಗೆ ಹೊರಟಿದ್ದರು. ಪಾಂಡವಪುರದಿಂದ ಮಂಗಳೂರಿಗೆ ಬೈಕ್​ ಱಲಿ ಮೂಲಕ ಹೊರಟಿದ್ದರು. ಇದೇ ವೇಳೆ ಪಾಂಡವಪುರದಲ್ಲಿ ಪ್ರತಿಭಟನಾಕಾರರನ್ನು ತಡೆದಿದ್ದ ಪೊಲೀಸರು, ಎಫ್​ಐಆರ್ ದಾಖಲಿಸಿ ನಂತರ ಚಾರ್ಜ್​ಶೀಟ್ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆಗೆ ಕೋರ್ಟ್​ಗೆ ಹಾಜರಾಗದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಡಿಸೆಂಬರ್​ ತಿಂಗಳಲ್ಲೇ ಕೋರ್ಟ್​ ಸಮನ್ಸ್ ಜಾರಿ ಮಾಡಿದ್ದು, ಇದೀಗ ಮಾಹಿತಿ ಬಹಿರಂಗಗೊಂಡಿದೆ.

ಒಂದೆಡೆ, ಬಿಜೆಪಿ ಕಾರ್ಯಕರ್ತರ ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ರಿಓಪನ್ ಮಾಡುತ್ತಿದೆ ಎಂಬ ಪ್ರತಿಪಕ್ಷದ ಆರೋಪದ ಬೆನ್ನಲ್ಲೇ ಈ ವಿದ್ಯಮಾನವೂ ನಡೆದಿದೆ.

ಪೊಲೀಸರ ವಿರುದ್ಧ ಬಿಜೆಪಿ ಆಕ್ರೋಶ

ಕಾರ್ಯಕರ್ತರಿಗೆ ಸಮನ್ಸ್ ಜಾರಿ ವಿಚಾರವಾಗಿ ಪೊಲೀಸರ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಇಷ್ಟು ವರ್ಷ ಇಲ್ಲದ ಸಮನ್ಸ್ ಈಗ ಯಾಕೆ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಜತೆಗೆ, ರಾಜ್ಯ ‌ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಹಿಂದೂ, ಬಿಜೆಪಿ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ: ಬಿಜೆಪಿಯ ಕ್ಲಸ್ಟರ್‌ ಮಟ್ಟದ ಸಭೆ ಪೂರ್ಣ, ಈಗ ವಿಜಯೇಂದ್ರ ಚಿತ್ತ ದೆಹಲಿಯತ್ತ

ಈ ಮಧ್ಯೆ, ನಾವು ಯಾವುದೇ ನೋಟಿಸ್ ನೀಡಿಲ್ಲ. ಅದು ಕೋರ್ಟ್​​ನಿಂದ ಜಾರಿಯಾಗಿರುವ ಸಮನ್ಸ್ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಕಳೆದ ತಿಂಗಳೇ ಸಮನ್ಸ್ ಜಾರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್