KRS ಡ್ಯಾಂ ಬಳಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಶ್ರೀರಂಗಪಟ್ಟಣ-ಜೇವರ್ಗಿ ಹೆದ್ದಾರಿ ತಡೆದು ಪ್ರತಿಭಟನೆ; ಸರ್ಕಾರದ ವಿರುದ್ಧ ಆಕ್ರೋಶ

KRS ಡ್ಯಾಂ ಬಳಿ ವಿಜ್ಞಾನಿಗಳು ಟ್ರಯಲ್ ಬ್ಲಾಸ್ಟ್ ನಡೆಸಲು ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ವಿಜ್ಞಾನಿಗಳ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಪಾಂಡವಪುರದಲ್ಲಿ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ.

KRS ಡ್ಯಾಂ ಬಳಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಶ್ರೀರಂಗಪಟ್ಟಣ-ಜೇವರ್ಗಿ ಹೆದ್ದಾರಿ ತಡೆದು ಪ್ರತಿಭಟನೆ; ಸರ್ಕಾರದ ವಿರುದ್ಧ ಆಕ್ರೋಶ
KRS ಡ್ಯಾಂ
Edited By:

Updated on: Jul 24, 2022 | 2:50 PM

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್ ಡ್ಯಾಂ(KRS Dam) ಬಳಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಪಾಂಡವಪುರದಲ್ಲಿ ಶ್ರೀರಂಗಪಟ್ಟಣ-ಜೇವರ್ಗಿ ಹೆದ್ದಾರಿ ತಡೆದು ಧರಣಿ(Protest) ನಡೆಸುತ್ತಿದ್ದಾರೆ.

KRS ಡ್ಯಾಂ ಬಳಿ ವಿಜ್ಞಾನಿಗಳು ಟ್ರಯಲ್ ಬ್ಲಾಸ್ಟ್ ನಡೆಸಲು ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ವಿಜ್ಞಾನಿಗಳ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಪಾಂಡವಪುರದಲ್ಲಿ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಪಾಂಡವಪುರ ತಾಲೂಕು ಬೇಬಿ ಬೆಟ್ಟ ರಕ್ಷಣಾ ಸಮಿತಿ ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಟ್ರಯಲ್ ಬ್ಲಾಸ್ ಮಾಡದಂತೆ ಒತ್ತಾಯಿಸಿದ್ದಾರೆ. ಹಾಗೂ ಕೆಆರ್ಎಸ್ ಬಳಿ ಟ್ರಯಲ್ ಬ್ಲಾಸ್ಟ್ಗೆ ಅನುಮತಿ ನೀಡಿರುವ ಸರ್ಕಾರ, ಮಂಡ್ಯ ಜಿಲ್ಲಾಡಳಿತದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.

ಕೆಆರ್​ಎಸ್, ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ

ಮಂಡ್ಯ: ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್(KRS) ಜಲಾಶಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai), ಪತ್ನಿ ಚೆನ್ನಮ್ಮ ಜೊತೆ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋಪಾಲಯ್ಯ, ಎಸ್.ಟಿ.ಸೋಮಶೇಖರ್, ಕಾರಜೋಳ, ನಾರಾಯಣಗೌಡ, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ಡಾ.ಕೆ.ಅನ್ನದಾನಿ, ಎಂ.ಶ್ರೀನಿವಾಸ್ ಉಪಸ್ಥಿತರಿದ್ದರು. ಎಂಎಲ್ಸಿಗಳಾದ ಮಧು ಮಾದೇಗೌಡ, ದಿನೇಶ್ ಗೂಳಿಗೌಡ ಭಾಗಿಯಾಗಿದ್ದರು. ಬಾಗಿನ ಅರ್ಪಿಸಿದ ನಂತರ ಕೆಆರ್ಎಸ್ ಅಣೆಕಟ್ಟು ಕೆಳಭಾಗದಲ್ಲಿರುವ ಕಾವೇರಿ ಮಾತೆ ವಿಗ್ರಹಕ್ಕೆ ಸಿಎಂ ಬೊಮ್ಮಾಯಿ ಪೂಜೆ ಸಲ್ಲಿಸಿದರು.

Published On - 2:47 pm, Sun, 24 July 22