ಬೆಂಗಳೂರು-ಮೈಸೂರು ಹೆದ್ದಾರಿಯ ಎರಡನೇ ಹಂತದ ಟೋಲ್ ಸಂಗ್ರಹ ವಿರೋಧಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಬೆಂಗಳೂರು-ಮೈಸೂರು ಹೆದ್ದಾರಿಯ ಎರಡನೇ ಹಂತದ ಟೋಲ್ ಸಂಗ್ರಹವನ್ನ ಇಂದು(ಜು.1) 8 ಗಂಟೆಯಿಂದ ಪ್ರಾರಂಭಿಸಲಾಗಿದೆ. ಈ ಹಿನ್ನಲೆ ಮಂಡ್ಯ ಶಾಸಕರು ಸೇರಿದಂತೆ ವಾಹನ ಸವಾರರು ಕಿಡಿಕಾರಿದ್ದು, ವಿವಿಧ ಕನ್ನಡಪರ‌ ಹಾಗೂ ರೈತ ಪರ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯ ಎರಡನೇ ಹಂತದ ಟೋಲ್ ಸಂಗ್ರಹ ವಿರೋಧಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಪ್ರತಿಭಟನೆ ನಿರತ ಸಂಘಟನೆಗಳು
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 01, 2023 | 10:28 AM

ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿ(Bangalore-Mysore Highway)ಯ ಎರಡನೇ ಹಂತದ ಟೋಲ್ ಸಂಗ್ರಹವನ್ನ ಇಂದು(ಜು.1) 8 ಗಂಟೆಯಿಂದ ಪ್ರಾರಂಭಿಸಲಾಗಿದೆ. ಈ ಹಿನ್ನಲೆ ವಿವಿಧ ಕನ್ನಡಪರ‌ ಹಾಗೂ ರೈತ ಪರ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಕೆಲ ತಿಂಗಳ ಹಿಂದೆಯೇ ರಾಮನಗರದ ಕಣಮಿಣಕಿ ಟೋಲ್ ಆರಂಭಿಸಲಾಗಿತ್ತು. ಇದೀಗ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಟೋಲ್​ ಸಂಗ್ರಹಕ್ಕೆ ಮುಂದಾಗಿದ್ದಾರೆ. ಇನ್ನು ದಶಪಥ ಹೆದ್ದಾರಿ ಕಾಮಗಾರಿ ಪೂರ್ಣಗೊಂಡಿಲ್ಲ. ಸರ್ವಿಸ್ ರಸ್ತೆಯು ಸರಿಯಾಗಿ ಇಲ್ಲ. ಈಗಾಗಲೇ ಒಂದು ಟೋಲ್​ಗೆ ಕಟ್ಟುತ್ತಿರುವ ಶುಲ್ಕ ಹೊರೆ ಬೀಳುತ್ತಿದೆ. ಇ ನಡುವೆ ಕಾಮಗಾರಿ ಪೂರ್ಣಗೊಳ್ಳುವ ಮುನ್ನವೇ ಮತ್ತೊಂದು ಟೋಲ್ ನಲ್ಲಿ ಶುಲ್ಕ ವಸೂಲಿ ಮಾಡುತ್ತಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

ವಿರೋಧದ ನಡುವೆಯೂ ಟೋಲ್ ಸಂಗ್ರಹಕ್ಕೆ ಮುಂದಾಗಿರುವ NHAI

ಇನ್ನು ಇಷ್ಟೇಲ್ಲ ವಿರೋಧದ ನಡುವೆಯೂ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್​ ಸಂಗ್ರಹಕ್ಕೆ ಮುಂದಾಗಿದೆ. ಇದನ್ನು ವಿರೋಧಿಸಿ ಇದೀಗ ಕನ್ನಡಪರ‌ ಹಾಗೂ ರೈತ ಪರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿದ್ದು, ಸಂಘಟನೆಯ ಪದಾಧಿಕಾರಿಗಳು ಒಬ್ಬೊಬ್ಬರಾಗಿ ಟೋಲ್ ಪ್ಲಾಜಾದಲ್ಲಿ ಬಳಿ ಜಮಾಯಿಸುತ್ತಿದ್ದಾರೆ. ಈ ಮಧ್ಯೆ ಟೋಲ್ ಪ್ಲಾಜಾದಲ್ಲಿ ಕನ್ನಡಿಗರಿಗೆ ಕೆಲಸ ನೀಡದೆ ಹೊರ ರಾಜ್ಯದವರಿಗೆ ಕೆಲಸ ನೀಡಿದ್ದು, ಮತ್ತಷ್ಟು ಆಕ್ರೋಶ ಕಾರಣವಾಗಿದೆ. ಇದರ ಜೊತೆ ಟೋಲ್ ಶುಲ್ಕ ನೋಡಿ ವಾಹನ ಸವಾರರು ಶಾಕ್ ಆಗುತ್ತಿದ್ದಾರೆ.

ಇದನ್ನೂ ಓದಿ:ಶ್ರೀರಂಗಪಟ್ಟಣದ ಬಳಿ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಲೋಪದೋಷ ಸರಿಪಡಿಸುವ ತನಕ ಟೋಲ್ ಸಂಗ್ರಹಿಸಬಾರದು: ಚಲುವರಾಯಸ್ವಾಮಿ, ಸಚಿವ

ಟೋಲ್ ಶುಲ್ಕದ ವಿವರ ಇಲ್ಲಿದೆ

ಏಕಮುಖ ಸಂಚಾರ

1) ಕಾರು, ಜೀಪು, ವ್ಯಾನು – 155 ರೂ

2) ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 250 ರೂ

3) ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು)- 525 ರೂ

4) ಮೂರು ಆಕ್ಸಲ್ ವಾಣಿಜ್ಯ ವಾಹನ – 575 ರೂ

5) ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಲೆಕ್ಸ್‌ಗಳದ್ದು) – 825 ರೂ

6) ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 1005 ರೂ

ಅದೇ ದಿನ ವಾಪಸ್ಸು

1) ಕಾರು, ಜೀಪು, ವ್ಯಾನು – 235 ರೂ

2) ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 375 ರೂ

3) ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 790 ರೂ

4) ಮೂರು ಆಕ್ಸಲ್ ವಾಣಿಜ್ಯ ವಾಹನ – 860 ರೂ

5) ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಲೆಕ್ಸ್‌ಗಳದ್ದು) – 1240 ರೂ

6) ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 1510 ರೂ

ಮಂಡ್ಯ ಜಿಲ್ಲೆ ಒಳಗೆ

1) ಕಾರು, ಜೀಪು, ವ್ಯಾನು – 80 ರೂ

2) ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 125 ರೂ

3) ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 265 ರೂ

4) ಮೂರು ಆಕ್ಸಲ್ ವಾಣಿಜ್ಯ ವಾಹನ – 285 ರೂ

5) ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಕ್ಸಲ್ ಗಳದ್ದು) – 415 ರೂ

6) ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 505 ರೂ

Published On - 10:27 am, Sat, 1 July 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್