ಮಂಡ್ಯದಲ್ಲಿ ವಿಚಾರಣೆ ನೆಪದಲ್ಲಿ ಮಹಿಳೆ ಮೇಲೆ PSI ಹಲ್ಲೆ; ಮಹಿಳೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

| Updated By: ಆಯೇಷಾ ಬಾನು

Updated on: Feb 14, 2024 | 7:25 AM

ವಿಚಾರಣೆ ನೆಪದಲ್ಲಿ ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆಸಿ ಆಕೆಯ ಮೇಲೆ ಹಲ್ಲೆ ನಡೆಸಲಾಗಿದೆ. ಮಂಡ್ಯ ಪೂರ್ವ ಠಾಣೆ PSI ಅಯ್ಯನಗೌಡ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಪೊಲೀಸ್ ಹಲ್ಲೆಗೊಳಗಾದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳೀಯರು ಪೊಲೀಸರ ನಡೆಗೆ ಆಕ್ರೋಶ ಹೊರ ಹಾಕಿದ್ದಾರೆ.

ಮಂಡ್ಯದಲ್ಲಿ ವಿಚಾರಣೆ ನೆಪದಲ್ಲಿ ಮಹಿಳೆ ಮೇಲೆ PSI ಹಲ್ಲೆ; ಮಹಿಳೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
ಮಂಡ್ಯ ಪೂರ್ವ ಠಾಣೆ
Follow us on

ಮಂಡ್ಯ, ಫೆ.14: ವಿಚಾರಣೆ ನೆಪದಲ್ಲಿ ಮಹಿಳೆ ಮೇಲೆ ಪೊಲೀಸರು ಹಲ್ಲೆ (Assault) ನಡೆಸಿ ದರ್ಪ ಮೆರೆದಿರುವ ಅಮಾನವೀಯ ಘಟನೆ ಮಂಡ್ಯದಲ್ಲಿ (Mandya) ನಡೆದಿದ್ದು ಮಹಿಳೆಗೆ (Woman) ಗಂಭೀರ ಗಾಯಗಳಾಗಿವೆ. ಗಾಯಾಳು ಮಹಿಳೆ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡ್ಯ ಪೂರ್ವ ಠಾಣೆ PSI ಅಯ್ಯನಗೌಡ ಎಂಬುವವರು ಮಂಡ್ಯ ನಗರದ ರೂಪಾದೇವಿ ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ರೂಪಾ ಅವರಿಗೆ ಸೇರಿದ್ದ ಹಸು ಮಹಿಳಾ ಪೇದೆ ಸ್ಕೂಟರ್​ಗೆ ಅಡ್ಡ ಬಂದಿತ್ತು. ಈ ವೇಳೆ ಮಹಿಳಾ ಪೇದೆ ವನಜಾಕ್ಷಿ ನಿಯಂತ್ರಣ ತಪ್ಪಿ ಗಾಡಿಯಿಂದ ಬಿದ್ದು ಗಾಯಗೊಂಡಿದ್ದರು. ಚಿಕಿತ್ಸೆ ಪಡೆದ ಬಳಿಕ ರೂಪಾ ಅವರು ತಮಗೆ ಪರಿಹಾರ ನೀಡುವಂತೆ ವನಜಾಕ್ಷಿ ಒತ್ತಡ ಹಾಕಿದ್ದರು. ಹಣ ನೀಡದಿದ್ದಕ್ಕೆ ವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಗೆ ಕರೆಸಿ ಹಲ್ಲೆ ನಡೆಸಲಾಗಿದೆ. ಮಂಡ್ಯದ ಪೂರ್ವ ಠಾಣೆ ಪಿಎಸ್​ಐ ಅಯ್ಯನಗೌಡ ವಿರುದ್ಧ ಹಲ್ಲೆ ಮಾಡಿರುವ ಗಂಭೀರ ಆರೋಪ ಕೇಳಿ ಬಂದಿದೆ.

ಇನ್ನು ಪೊಲೀಸರ ಥಳಿತದಿಂದ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಅಧಿಕಾರ ದುರುಪಯೋಗಪಡಿಸಿಕೊಂಡು ಮಹಿಳೆ ಕೈ ಕಾಲಿಗೆ ಹಿಗ್ಗಾಮುಗ್ಗ ಥಳಿಸಿರುವ ಆರೋಪ ಕೇಳಿ ಬಂದಿದೆ. ಗಾಯಾಳು ಮಹಿಳೆಯನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮತ್ತೊಂದೆಡೆ ಹಲ್ಲೆಗೊಳಗಾದ ಮಹಿಳೆಯ ನೆರವಿಗೆ ಧಾವಿಸಿದ ಹೋರಾಟಗಾರರು ಇಂದು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದಾರೆ.

ಇದನ್ನೂ ಓದಿ: ಅನ್ಯಕೋಮಿನ ಯುವತಿಗೆ ಹಲ್ಲೆ ಪ್ರಕರಣ; ಆರೋಪಿ ಹಲವು ದಿನಗಳಿಂದ ಕಿರುಕುಳ ನೀಡುತ್ತಿದ್ದ ಎಂದ ಯುವತಿ

ಕಿಮ್ಸ್ ಹಿಂಭಾಗ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಹುಬ್ಬಳ್ಳಿಯ ಕಿಮ್ಸ್ ಹಿಂಭಾಗ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಆಸ್ಪತ್ರೆಯ ಮಹಿಳಾ ಹಾಸ್ಟೆಲ್ ಹಿಂಭಾಗದ ಚರಂಡಿಯಲ್ಲಿ ವ್ಯಕ್ತಿಯೋರ್ವನ ದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಸಿಕ್ಕಿದೆ. ಚರಂಡಿ ಸ್ವಚ್ಛಗೊಳಿಸುವ ವೇಳೆ ಸಿಬ್ಬಂದಿಗೆ ಅಸ್ಥಿಪಂಜರ ಸಿಕ್ಕಿದೆ. ವ್ಯಕ್ತಿಯ ಮೂಳೆ, ತಲೆ ಬುರುಡೆ ಪತ್ತೆ ಹಿನ್ನೆಲೆಯಲ್ಲಿ ಹಲವು ಅನುಮಾನ ಮೂಡಿದ್ದು, ಕಳೆದ ಐದಾರು ತಿಂಗಳ ಹಿಂದೆ ವ್ಯಕ್ತಿ ಸಾವನ್ನಪ್ಪಿರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ. ಘಟನಾ ಸ್ಥಳಕ್ಕೆ ಎಸಿಪಿ ಹಾಗೂ ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ