ಬೀರವಳ್ಳಿ ಬಳಿ ಭೀಕರ ಅಪಘಾತ; ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸಾವು, ಐವರಿಗೆ ಗಾಯ
ಶ್ರೀ ಚಂದಗೋಳಮ್ಮ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿ ವಾಪಸ್ಸು ತೆರಳುವಾಗ ಅಪಘಾತ ಸಂಭವಿಸಿದೆ. ಮೃತರು ಮೈಸೂರು ಜಿಲ್ಲೆ ಕೆ.ಆರ್. ನಗರ ತಾಲೂಕಿನ ತಂದ್ರೆ ಕೊಪ್ಪಲು ಗ್ರಾಮದವರು. ಕೆ.ಆರ್. ಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಂಡ್ಯ: ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಬೀರವಳ್ಳಿ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ರಮೇಶ್(44), ಧ್ರುವ(11) ಸ್ಥಳದಲ್ಲೇ ಮೃತಪಟ್ಟಿದ್ದು ಐವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಶ್ರೀ ಚಂದಗೋಳಮ್ಮ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿ ವಾಪಸ್ಸು ತೆರಳುವಾಗ ಅಪಘಾತ ಸಂಭವಿಸಿದೆ. ಮೃತರು ಮೈಸೂರು ಜಿಲ್ಲೆ ಕೆ.ಆರ್. ನಗರ ತಾಲೂಕಿನ ತಂದ್ರೆ ಕೊಪ್ಪಲು ಗ್ರಾಮದವರು. ಕೆ.ಆರ್. ಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇನ್ನು ಮತ್ತೊಂದು ಕಡೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗಂಗೂರು ಗ್ರಾಮದ ಬಳಿ ಮತ್ತೊಂದು ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸಲೀಂ ಟಕ್ಕಳಕಿ(20), ಸೈಫನ್ ತಾಂಬೋಳೆ(17) ಮೃತರು. ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಯುವಕರು ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಿಂದ ದೇವರಹಿಪ್ಪರಗಿ ಪಟ್ಟಣಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಮೃತರು ಹಾಗೂ ಗಾಯಾಳು ದೇವರಹಿಪ್ಪರಗಿ ಪಟ್ಟಣದ ವಾಸಿಗಳು.
ಇದನ್ನೂ ಓದಿ: Upcoming smartphones of 2022: 2022 ರಲ್ಲಿ ಧೂಳೆಬ್ಬಿಸಲು ತಯಾರಾಗಿದೆ ಬಹುನಿರೀಕ್ಷೆಯ ಈ ಸ್ಮಾರ್ಟ್ಫೋನ್ಗಳು