Road Rage: ರಸ್ತೆ ವಿಚಾರಕ್ಕೆ ಶುರುವಾದ ಕಿರಿಕ್ ಕೊಲೆಯಲ್ಲಿ ಅಂತ್ಯ, ಮಕ್ಕಳ ಕಲ್ಲೇಟಿಗೆ ಆಯತಪ್ಪಿ ಬಾವಿಗೆ ಬಿದ್ದ ಬೀದಿ ನಾಯಿ ರಕ್ಷಣೆ

ಶಿವಕುಮಾರ್ ಹಾಗೂ ಅಶೋಕ್ ಎಂಬಿಬ್ಬರ ನಡುವೆ ರಸ್ತೆ ವಿಚಾರಕ್ಕೆ ಜಗಳ ಶುರುವಾಗಿತ್ತು. ಮಾತಿಗೆ ಮಾತು ಬೆಳೆದು ಹೊಡೆದಾಟವೂ ನಡೆದಿತ್ತು. ಗಲಾಟೆಯ ವೇಳೆ ಶಿವಕುಮಾರನನ್ನ ಅಶೋಕ್ ರಸ್ತೆ ಮೇಲೆ ನೂಕಿದ್ದ. ಈ ವೇಳೆ ಕೆಳಗೆ ಬಿದ್ದ ಶಿವಕುಮಾರ್ ತಲೆಗೆ ಗಂಭೀರವಾದ ಗಾಯವಾಗಿತ್ತು.

Road  Rage: ರಸ್ತೆ ವಿಚಾರಕ್ಕೆ ಶುರುವಾದ ಕಿರಿಕ್ ಕೊಲೆಯಲ್ಲಿ ಅಂತ್ಯ, ಮಕ್ಕಳ ಕಲ್ಲೇಟಿಗೆ ಆಯತಪ್ಪಿ ಬಾವಿಗೆ ಬಿದ್ದ ಬೀದಿ ನಾಯಿ ರಕ್ಷಣೆ
ರಸ್ತೆ ವಿಚಾರಕ್ಕೆ ಶುರುವಾದ ಕಿರಿಕ್, ಕೊಲೆಯಲ್ಲಿ ಅಂತ್ಯ
Follow us
TV9 Web
| Updated By: ಸಾಧು ಶ್ರೀನಾಥ್​

Updated on:May 12, 2022 | 6:21 PM

ಮಂಡ್ಯ: ಭಾರತದಲ್ಲಿ ಸಾಮಾನ್ಯವಾಗಿರುವ ರೋಡ್​ ರೇಗಣ್ಣ ಪ್ರಕರಣಕ್ಕೆ (road rage) ರಸ್ತೆಯಲ್ಲಿ ಒಂದು ಹೆಣ ಬಿದ್ದಿದೆ. ಹೌದು ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ (ತಾ) (Malavalli) ಬೆಂಡರವಾಡಿಯಲ್ಲಿ ರಸ್ತೆ ವಿಚಾರಕ್ಕೆ ಶುರುವಾದ ಕಿರಿಕ್, ಕೊಲೆಯಲ್ಲಿ ಅಂತ್ಯಗೊಂಡಿದೆ (Death). ಶಿವಕುಮಾರ್ ಕೊಲೆಯಾದ ವ್ಯಕ್ತಿ. ಶಿವಕುಮಾರ್ ಹಾಗೂ ಅಶೋಕ್ ಎಂಬಿಬ್ಬರ ನಡುವೆ ರಸ್ತೆ ವಿಚಾರಕ್ಕೆ ಜಗಳ ಶುರುವಾಗಿತ್ತು. ಮಾತಿಗೆ ಮಾತು ಬೆಳೆದು ಹೊಡೆದಾಟವೂ ನಡೆದಿತ್ತು. ಗಲಾಟೆಯ ವೇಳೆ ಶಿವಕುಮಾರನನ್ನ ಅಶೋಕ್ ರಸ್ತೆ ಮೇಲೆ ನೂಕಿದ್ದ. ಈ ವೇಳೆ ಕೆಳಗೆ ಬಿದ್ದ ಶಿವಕುಮಾರ್ ತಲೆಗೆ ಗಂಭೀರವಾದ ಗಾಯವಾಗಿತ್ತು. ತೀವ್ರ ರಕ್ತಸ್ರಾವವಾದ ಕಾರಣ ಕುಟುಂಬಸ್ಥರು ತಕ್ಷಣ ಶಿವಕುಮಾರನನ್ನ ಮೈಸೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೆ ಶಿವಕುಮಾರ್ ಕೊನೆಯುಸಿರೆಳೆದಿದ್ದಾರೆ. ಸದ್ಯ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಕ್ಕಳ ಕಲ್ಲೇಟಿಗೆ ಆಯತಪ್ಪಿ ಬಾವಿಗೆ ಬಿದ್ದ ಬೀದಿ ನಾಯಿ ರಕ್ಷಣೆ: ಬೆಳಗಾವಿ : ಮಕ್ಕಳ ಕಲ್ಲೇಟಿಗೆ ಆಯತಪ್ಪಿ ಬಾವಿಗೆ ಬಿದ್ದ ಬೀದಿ ನಾಯಿಯನ್ನು ರಕ್ಷಿಸಲಾಗಿದೆ. ಬೆಳಗಾವಿಯ ಕಚೇರಿ ಗಲ್ಲಿಯಲ್ಲಿ ಎಸ್‌ಡಿಆರ್‌ಎಫ್ (SDRF) ಸಿಬ್ಬಂದಿ ಸತತ ಮೂರು ಗಂಟೆಗಳ ಕಾಲ ಆಪರೇಷನ್ ಡಾಗ್ ಕಾರ್ಯಾಚರಣೆ ನಡೆಸಿ, ಬೀದಿ ನಾಯಿಯನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ವೇಳೆ ನಾಯಿ ಕಚ್ಚಿದರೂ ಛಲಬಿಡದೇ SDRF ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. SDRF ಸಿಬ್ಬಂದಿ ವಿಠ್ಠಲ್ ಜೇಟ್ಲಿ ಎಂಬುವವರು ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಬಾವಿಗಿಳಿದು ಬೀದಿನಾಯಿ ರಕ್ಷಿಸಿದ್ದಾರೆ. ಬೀದಿನಾಯಿ ರಕ್ಷಣಾ ಕಾರ್ಯಾಚರಣೆ ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ವೈರಲ್ ಆಗಿದೆ. ಎಸ್‌ಡಿಆರ್‌ಎಫ್ ಸಿಬ್ಬಂದಿ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಬೆಂಗಳೂರು ಸಿಸಿಬಿ ಪೊಲೀಸರಿಂದ ಡ್ರಗ್ ಪೆಡ್ಲರ್ ಗಳ ಬಂಧನ: ಬೆಂಗಳೂರು ಸಿಸಿಬಿ ಪೊಲೀಸರು ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ಇಬ್ಬರು ಖತರ್ನಾಕ್ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಆಕೀಬ್ ಮತ್ತು ಪ್ರದೀಪ್ ಬಂಧಿತ ಆರೋಪಿಗಳು. ಆರೋಪಿಗಳು ನೈಜಿರೀಯಾ ಮೂಲದ ವ್ಯಕ್ತಿಯಿಂದ ಡ್ರಗ್ ಖರೀದಿಸಿ ನಗರದ ಸೋಲದೇವನಹಳ್ಳಿಯ ಖಾಸಗಿ ಕಾಲೇಜು ಸುತ್ತಮುತ್ತ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದರು. ಬಂಧಿತರಿಂದ 15 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಮಾದರಿ ಕ್ರಿಸ್ಟಲ್ ಡ್ರಗ್ ಅನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ. ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಯ ಕಾಂಪೌಂಡ್‌ನಲ್ಲಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ: ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ಮನೆಯ ಕಾಂಪೌಂಡ್‌ನಲ್ಲಿದ್ದ ನಾಯಿಯನ್ನು ಚಿರತೆಯೊಂದು ಹೊತ್ತೊಯ್ದಿದೆ. ಗ್ರಾಮದ ದೇವೇಗೌಡ ಎಂಬುವವರ ಮನೆಯ ಕಾಂಪೌಂಡ್ ಮೇಲೆ ಕುಳಿತು ಹೊಂಚು ಹಾಕಿ, ನಾಯಿ ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಗಲು ವೇಳೆಯೇ ಚಿರತೆ ಗ್ರಾಮದ ಸುತ್ತ ಕಾಣಿಸಿಕೊಳ್ಳುತ್ತಿದೆ. ಕುರಿ, ಮೇಕೆ, ನಾಯಿಗಳನ್ನು ಹೊತ್ತೊಯುತ್ತಿರುವ ಬಗ್ಗೆ ಗ್ರಾಮಸ್ಥರು ಆತಂಕ, ಅಳಲು ವ್ಯಕ್ತಪಡಿಸಿದ್ದಾರೆ. ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.

ಶಾಲೆಯಲ್ಲಿ ಕಾಣಿಸಿಕೊಂಡ ನಾಗರಹಾವು ಸಂರಕ್ಷಣೆ ಮೈಸೂರು: ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿಯ ಹಿಂಭಾಗವಿರುವ ಬೇಡನ್ ಪೊವೆಲ್ ಶಾಲೆಯ ಬಳಿ ಕಾಣಿಸಿಕೊಂಡ ನಾಗರಹಾವು ಸಂರಕ್ಷಣೆ ಮಾಡಲಾಗಿದ್ದು, ಶಾಲಾ ಮಕ್ಕಳು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಹಿಂದಿನ ಬಾಲ ಸಿಕ್ಕಿಹಾಕಿಕೊಂಡು ನಾಗರಹಾವು ನರಳುತ್ತಿತ್ತು. ಈ ವೇಳೆ ಮೈಸೂರಿನ ಉರಗ ತಜ್ಞ ರಮೇಶ್ ರಿಂದ ನಾಗರಹಾವು ರಕ್ಷಣೆ ಮಾಡಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:38 pm, Thu, 12 May 22

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ