ಮಂಡ್ಯ: 40 ಸಾವಿರ ಲಂಚ ಪಡೆಯುವ ವೇಳೆ ತಹಶಿಲ್ದಾರ್ ಲೋಕಯುಕ್ತ (Lokayukta) ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ಪಾಂಡವಪುರದಲ್ಲಿ ನಡೆದಿದೆ. ಸದ್ಯ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್ ಸೌಮ್ಯಾರನ್ನು ಬಂಧಿಸಲಾಗಿದೆ. ಗ್ರಾಮಲೆಕ್ಕಿಗ ಮರಿಸ್ವಾಮಿ ಎನ್ನುವವರನ್ನು ಗುಮ್ಮನಹಳ್ಳಿಯಿಂದ ದೊಡ್ಡಮೊಮ್ಮನಹಳ್ಳಿಗೆ ವರ್ಗಾವಣೆ ಕಚೇರಿಯಲ್ಲಿ 40 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದಲ್ಲಿ ದಾಳಿ ಮಾಡಿ ಬಂಧಿಸಲಾಗಿದೆ.
ಬೆಂಗಳೂರು: ನಗರದಲ್ಲಿ ಅಕ್ರಮ ಗೋ ಸಾಗಾಟ ಆರೋಪ ಕೇಳಿಬಂದಿದ್ದು, ಜೆಜೆ ನಗರ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ಹಸುಗಳ ರಕ್ಷಣೆ ಮಾಡಲಾಗಿದೆ. ಜೆಜೆ ನಗರದ ಚರ್ಚ್ ರಸ್ತೆ ಬದಿಯಲ್ಲೇ ಹಸುಗಳನ್ನ ಕಟ್ಟಿ ಹಾಕಲಾಗಿತ್ತು. ಈ ಕುರಿತು ಎನ್ಜಿಓ ಕಾರ್ಯಕರ್ತರೊಬ್ಬರು ವಿಡಿಯೋ ಸಮೇತ ಜೆಜೆ ನಗರ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನಲೆ ಪ್ರಕರಣ ದಾಖಲಿಸಿ ನಾಲ್ಕು ಹಸುಗಳ ರಕ್ಷಣೆ ಮಾಡಲಾಗಿದೆ. ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: Tumakuru: ಲಂಚ ಪಡೆದಿದ್ದ ಮಹಿಳಾಧಿಕಾರಿಗೆ ಕಡ್ಡಾಯ ನಿವೃತ್ತಿಗೊಳಿಸಿ ಆದೇಶ
ಚಿತ್ರದುರ್ಗ: ಲಂಚ ಸ್ವೀಕಾರ ವೇಳೆ ಡಿ. ದೇವರಾಜ ಅರಸು ನಿಗಮದ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ಕಾರ್ಯಾಚರಣೆ ದಾಳಿ ಮಾಡಿದ್ದು,
ದೇವರಾಜ ಅರಸು ನಿಗಮದ ಕೇಸ್ ವರ್ಕರ್ ಆಗಿರುವ ಮಲ್ಲೇಶ್ನನ್ನು ಬಂಧಿಸಿದ್ದರು.
50 ಸಾವಿರ ರೂ. ಸಾಲದ ಮೊತ್ತ ಬಿಡುಗಡೆ ಮಾಡಲು ಬುರುಜನಹಟ್ಟಿಯ ರಾಕೇಶ್ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 9 ಸಾವಿರ ರೂಪಾಯಿ ಲಂಚ ಸ್ವೀಕಾರ ವೇಳೆ ಲೋಕಾಯುಕ್ತ ಬಲೆಗೆ ಬಿದಿದ್ದು, ಅರೆಸ್ಟ್ ಮಾಡಲಾಗಿತ್ತು.
ಇದನ್ನೂ ಓದಿ: ಧಾರವಾಡ: ವರ್ಗಾವಣೆ ನೀತಿಗೆ ಬೇಸತ್ತು ಸ್ವಯಂ ನಿವೃತ್ತಿಗೆ ಹೆಡ್ ಕಾನ್ಸ್ಟೇಬಲ್ ಮನವಿ, ರಾಜೀನಾಮೆ ಪತ್ರ ವೈರಲ್
ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚ ಸ್ವೀಕರಿಸುತ್ತಿದ್ದ ಪಶು ವೈದ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದಿದ್ದರು. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ನಡೆದಿತ್ತು. ಡಾ. ತಿಪ್ಪೇಸ್ವಾಮಿ ಬಲೆಗೆ ಬಿದ್ದ ಪಶು ವೈದ್ಯಾಧಿಕಾರಿ. ಮೃತ ಹಸುವಿನ ಪೋಸ್ಟ್ ಮಾರ್ಟ್ಂ ರಿಪೋರ್ಟ್ ನೀಡಲು ಕಾಗಳಗೆರೆ ಗ್ರಾಮದ ರೈತ ಎಸ್.ಸ್ವಾಮಿಯಿಂದ 7,000 ರೂ. ಲಂಚ ಸ್ವೀಕರಿಸುತ್ತಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.