ಹನಿಟ್ರ್ಯಾಪ್ ಸುಳಿಯಲ್ಲಿ ಸಿಲುಕಿದ ಆರ್ಎಸ್ಎಸ್, ಬಿಜೆಪಿ ಮುಖಂಡ; ಚಿನ್ನದ ವ್ಯಾಪಾರಿಯಿಂದ 50 ಲಕ್ಷ ಹಣವನ್ನು ಸುಲಿಗೆ ಮಾಡಿದ ಆರೋಪಿಗಳು
ಆರ್ಎಸ್ಎಸ್ ಬಿಜೆಪಿ ಮುಖಂಡ ಹನಿಟ್ರ್ಯಾಪ್ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದ್ದು, 50 ಲಕ್ಷ ಹಣವನ್ನು ಸುಲಿಗೆ ಮಾಡಲಾಗಿದೆ.
ಮಂಡ್ಯ: ಆರ್ಎಸ್ಎಸ್ (RSS) ಬಿಜೆಪಿ (BJP) ಮುಖಂಡ ಹನಿಟ್ರ್ಯಾಪ್ (Honeytrap) ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದ್ದು, 50 ಲಕ್ಷ ಹಣವನ್ನು ಸುಲಿಗೆ ಮಾಡಲಾಗಿದೆ. ಈ ಸಂಬಂಧ ಮಂಡ್ಯದ (Mandya) ಪಶ್ಚಿಮ ಪೊಲೀಸ್ ಠಾಣೆಗೆ ಪ್ರತಿಷ್ಠಿತ ಚಿನ್ನದ ವ್ಯಾಪಾರಿ ಜಗನ್ನಾಥ ಶೆಟ್ಟಿ ದೂರು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ ಶೆಟ್ಟಿ, ಮಂಡ್ಯದ ಶ್ರೀನಿಧಿ ಗೋಲ್ಡ್ ಮಾಲೀಕರಾಗಿದ್ದಾರೆ.
ಜಗನ್ನಾಥ ಶೆಟ್ಟಿ ಮಂಗಳೂರಿಗೆ ತೆರಳಲು ಮಂಡ್ಯದಲ್ಲಿ ಬಸ್ಗಾಗಿ ಕಾಯುತ್ತಿದ್ದರು. ಈ ವೇಳೆ ನಾಲ್ವರು ಮೈಸೂರಿಗೆ ಡ್ರಾಪ್ ಕೊಡುವುದಾಗಿ ಕಾರಿನಲ್ಲಿ ಕರೆದೊಯ್ದಿದ್ದರು. ನಂತರ ಚಿನ್ನದ ಪರೀಕ್ಷೆಗೆಂದು ಅಪಹರಿಸಿದ್ದಾರೆ. ಜಗನ್ನಾಥ ಶೆಟ್ಟಿ ಅವರನ್ನು ಅಪಹರಿಸಿ ಲಾಡ್ಜ್ ರೂಮ್ಗೆ ಕರೆದೊಯ್ಯುತ್ತಿದ್ದಾರೆ. ರೂಮ್ನಲ್ಲಿ ಯುವತಿ ಜೊತೆ ವಿಡಿಯೋ ಚಿತ್ರೀಕರಿಸಿಕೊಂಡು 4 ಕೋಟಿಗೆ ಬೇಡಿಕೆ ಇಟ್ಟಿದ್ದಾರೆ.
ಅಂತಿಮವಾಗಿ ಜಗನ್ನಾಥ ಶೆಟ್ಟಿ 50 ಲಕ್ಷ ರೂಪಾಯಿ ನೀಡಿ ತೆರಳಿದ್ದಾರೆ. ಇಷ್ಟಕ್ಕೆ ಸುಮ್ಮನಾದ ಗ್ಯಾಂಗ್ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಇದರಿಂದ ಜಗನ್ನಾಥ ಶೆಟ್ಟಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇರೆಗೆ ಸಮಾಜ ಸೇವೆ, ಮಾನವ ಹಕ್ಕು ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಸಲ್ಮಾಬಾನು ಎಂಬುವರನ್ನು ಪಶ್ಚಿಮ ಠಾಣೆ ಪೊಲೀಸರು ಬಂಧಸಿದ್ದಾರೆ.
ಅಸಭ್ಯ ವರ್ತನೆ ತೋರಿದ ವ್ಯಕ್ತಿ ಬಗ್ಗೆ ಪೋಷಕರಿಗೆ ತಿಳಿಸಿದ್ದಕ್ಕೆ ಬಾಲಕಿಗೆ ಚಾಕು ಇರಿದು ಕೊಲೆ; ಆರೋಪಿ ಆತ್ಮಹತ್ಯೆಗೆ ಯತ್ನ
ನೆಲಮಂಗಲ: ಅಸಭ್ಯ ವರ್ತನೆ ಬಗ್ಗೆ ಪೋಷಕರಿಗೆ ತಿಳಿಸಿದ್ದಕ್ಕೆ ಬಾಲಕಿಗೆ ಚಾಕುವಿನಿಂದ ಇರಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕು ಜಿಂದಾಲ್ ಕ್ವಾರ್ಟರ್ಸ್‌ನಲ್ಲಿ ನಡೆದಿದೆ. ಉತ್ತರಾಖಂಡ್ ಮೂಲದ 11 ವರ್ಷದ ಖುಷಿ ಕೊಲೆಯಾದ ಬಾಲಕಿ.ಹರಿಯಾಣ ಮೂಲದ ನಂದಕಿಶೋರ್ (50) ಕೊಲೆ ಮಾಡಿರುವ ಆರೋಪಿ. ಬಾಲಕಿ ತಂದೆ ಹಾಗೂ ಆರೋಪಿ ನಂದಕಿಶೋರ್ ಜಿಂದಾಲ್ ಕಂಪನಿ ನೌಕರಿ ಮಾಡುತ್ತಿದ್ದಾರೆ.
ನಂದಕಿಶೋರ್ ಬಾಲಕಿ ಖುಷಿ ಜೊತೆ ಅಸಭ್ಯವಾಗಿ ವರ್ತಿಸಿದ್ದನು. ಈ ಬಗ್ಗೆ ಬಾಲಕಿ ತಮ್ಮ ಪೋಷಕರಿಗೆ ತಿಳಿಸಿದ್ದಳು. ಬಾಲಕಿ ಆರೋಪ ಹಿನ್ನೆಲೆ ಜಿಂದಾಲ್ ಕಂಪನಿ ನಂದಕಿಶೋರ್ಗೆ ಕ್ವಾರ್ಟರ್ಸ್ ಖಾಲಿ ಮಾಡುವಂತೆ ನೋಟಿಸ್ ನೀಡಿತ್ತು.
ಈ ಸಂಬಂಧ ಬಾಲಕಿಯನ್ನು ಕೊಂದು, ಬಳಿಕ ತಾನೂ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪ್ರಸ್ತುತ ಆರೋಪಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಪಿಯ ಸ್ಥಿತಿ ಗಂಭೀರವಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 6:36 pm, Sun, 21 August 22