AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಠ್ಯಕ್ರಮದ ಬಗ್ಗೆ ಲೇಖನ ಬರೆದಿದ್ದ ಶಿಕ್ಷಣ ತಜ್ಞ ಡಾ.ಸುಧಾಕರ್ ಹೊಸಳ್ಳಿಗೆ ಜೀವ ಬೆದರಿಕೆ

ಶಿಕ್ಷಣ ತಜ್ಞ ಡಾ.ಸುಧಾಕರ್ ಹೊಸಳ್ಳಿಗೆ ಜೀವ ಬೆದರಿಕೆ ಹಾಕಿದ್ದಾರೆ. ರಾಜ್ಯ ಒಕ್ಕಲಿಗ ಸಂಘದ ಪರಾಜಿತ ಅಭ್ಯರ್ಥಿ ಸತೀಶ್​ ಗೌಡ ಬೀಡನಹಳ್ಳಿ ಎಂಬುವವರು ಕೊಲೆ ಬೆದರಿಕೆ ಹಾಕಿದ್ದಾರೆ.

ಪಠ್ಯಕ್ರಮದ ಬಗ್ಗೆ ಲೇಖನ ಬರೆದಿದ್ದ ಶಿಕ್ಷಣ ತಜ್ಞ ಡಾ.ಸುಧಾಕರ್ ಹೊಸಳ್ಳಿಗೆ ಜೀವ ಬೆದರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 01, 2022 | 4:09 PM

Share

ಮಂಡ್ಯ: ನೂತನ ಪಠ್ಯಕ್ರಮದ ಕುರಿತು ಲೇಖನ ಬರೆದಿದ್ದ ಶಿಕ್ಷಣ ತಜ್ಞ ಡಾ.ಸುಧಾಕರ್ ಹೊಸಳ್ಳಿಗೆ ಜೀವ ಬೆದರಿಕೆ ಹಾಕಿದ್ದಾರೆ. ರಾಜ್ಯ ಒಕ್ಕಲಿಗ ಸಂಘದ ಪರಾಜಿತ ಅಭ್ಯರ್ಥಿ ಸತೀಶ್​ ಗೌಡ ಬೀಡನಹಳ್ಳಿ ಎಂಬುವವರು ಕೊಲೆ ಬೆದರಿಕೆ ಹಾಕಿ, ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥರನ್ನ (Rohith Chakrathirtha) ಸಮರ್ಥಿಸಿಕೊಳ್ತಿದ್ದೀರಾ ಎಂದು ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಮಂಡ್ಯ (Mandya) ನಗರದಲ್ಲಿ ಸುಧಾಕರ್ ಹೊಸಳ್ಳಿ ಪತ್ರಿಕಾಗೋಷ್ಠಿ ನಡೆಸಿದರು. ಬಳಿಕ ಎಸ್​ಪಿಗೆ ದೂರು ನೀಡಿದದ್ದಾರೆ. ನನ್ನ ಜೀವಕ್ಕೆ ಏನಾದರೂ ಕುತ್ತು ಬಂದರೆ ಸತೀಶ್ ಗೌಡ ಕಾರಣವೆಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲು: ಬೆಂಗಳೂರಿನಲ್ಲಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲಾಗಿದೆ. ರೋಹಿತ್ ಚಕ್ರತೀರ್ಥ ನಾಡಗೀತೆಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಬಿ.ಟಿ.ನಾಗಣ್ಣ ಎಂಬುವವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರೋಹಿತ್ ಚಕ್ರತೀರ್ಥ ನಾಡಗೀತೆಗೆ ಅವಮಾನ ಮಾಡಿದಂತಹ ವ್ಯಕ್ತಿ. ರಾಜ್ಯವನ್ನ ಕಾಂಗ್ರೆಸ್ಗೆ, ದೇಶವನ್ನ ಅರಬ್ಬಿಗೆ ಹೋಲಿಸಿದಂತಹ ವ್ಯಕ್ತಿ. ಅಂಥವರ ಕೈಗೆ ಪಠ್ಯ ಪುಸ್ತಕ ಪರಿಷ್ಕರಣಾ ಅಧಿಕಾರ ಇರುವುದು ಸರಿಯಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಬಿ.ಟಿ.ನಾಗಣ್ಣ ದೂರು ನೀಡಿದ್ದಾರೆ.

ಇದನ್ನೂ ಓದಿ
Image
May GST Collection: ಮೇ  ತಿಂಗಳಲ್ಲಿ ₹1.40 ಲಕ್ಷ ಕೋಟಿ ಜಿಎಸ್‌ಟಿ ಆದಾಯ ಸಂಗ್ರಹ; ಅಂಕಿ ಅಂಶ ಪ್ರಕಟಿಸಿದ ಕೇಂದ್ರ ಸರಕಾರ
Image
Karnataka Ranji Team: ರಣಜಿ ಟ್ರೋಫಿಗೆ ಕರ್ನಾಟಕ ತಂಡ ಪ್ರಕಟ
Image
ಸಿಧು ಮೂಸೆ ವಾಲಾ ಮೇಲೆ ದುಷ್ಕರ್ಮಿಗಳು 30 ಬಾರಿ ಗುಂಡು ಹಾರಿಸಿದ್ದರು; ಹತ್ಯೆಯ ಭೀಕರ ದೃಶ್ಯವನ್ನು ವಿವರಿಸಿದ ಸ್ನೇಹಿತ
Image
‘ವೀಲ್​ ಚೇರ್​ ರೋಮಿಯೋ’ ಚಿತ್ರ ನೋಡಿದ ಜಮೀರ್​ ಅಹ್ಮದ್​; ಹೊಸ ಹೀರೋಗೆ ಸನ್ಮಾನ

ಇದನ್ನೂ ಓದಿ: ಕಣ್ಣೀರು ತರಿಸಿತ್ತು ಸುಂದರ್​ ರಾಜ್ ಬದುಕಿನ ನೈಜ ಲವ್​ ಸ್ಟೋರಿ​; ಹಲವು ವರ್ಷಗಳ ಬಳಿಕ ಆ ಹುಡುಗಿ ಸಿಕ್ಕಾಗ..

ಚಪ್ಪಲಿಯಿಂದ ಹೊಡೆದು ಪ್ರತಿಭಟನೆ: ದಾವಣಗೆರೆ ನಗರದ ಪ್ರಮುಖ ಬೀದಿಗಳಲ್ಲಿ‌ ಕರವೇ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಚಕ್ರತೀರ್ಥ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾಷಾ ಪಠ್ಯ ಹಾಗೂ ಸಮಾಜ ವಿಜ್ಞಾನ ಪಠ್ಯದಲ್ಲಿ ಗಮನಾರ್ಹ ಬದಲಾವಣೆ ಮಾಡಿದ್ದು, ಮಕ್ಕಳಲ್ಲಿ ದ್ವೇಷ ಹುಟ್ಟಿಸುವ ಹಾಗೂ ಮಹಾತ್ಮರ ಬಗ್ಗೆ ತಪ್ಪು ಸಂದೇಶ ನೀಡಲಾಗುತ್ತಿದೆ. ತಕ್ಷಣ ರೋಹಿತ್ ಚಕ್ರತೀರ್ಥ ಅವರನ್ನ ವಜಾ ಮಾಡಬೇಕೆಂದು ಕರವೇ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆಯನ್ನೂ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:01 pm, Wed, 1 June 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ