ಜೂನ್ 4ರಂದು ಶ್ರೀರಂಗಪಟ್ಟಣ ಚಲೋಗೆ ಹಿಂದೂ ಸಂಘಟನೆಗಳಿಂದ ಕರೆ; ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿ ನಾಡಿದ್ದು ಆಂಜನೇಯಸ್ವಾಮಿ ಮೂಲ ಮಂದಿರ ಚಲೋ ಹಿನ್ನೆಲೆ ಶ್ರೀರಂಗಪಟ್ಟಣದಲ್ಲಿ ತಹಶೀಲ್ದಾರ್ ಶ್ವೇತಾ ರವೀಂದ್ರ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಜೂನ್ 4ರಂದು ಶ್ರೀರಂಗಪಟ್ಟಣ ಚಲೋಗೆ ಹಿಂದೂ ಸಂಘಟನೆಗಳಿಂದ ಕರೆ; ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶ
ಜಾಮಿಯ ಮಸೀದಿ
Follow us
TV9 Web
| Updated By: ಆಯೇಷಾ ಬಾನು

Updated on:Jun 02, 2022 | 2:54 PM

ಹುಬ್ಬಳ್ಳಿ: ಜೂನ್ ನಾಲ್ಕರ ಶ್ರೀರಂಗಪಟ್ಟಣ ಚಲೋಗೆ ನಮ್ಮ ಬೆಂಬಲವಿದೆ ಎಂದು ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ. ಈಗಾಗಲೇ ಹಿಂದೂ ಸಂಘಟನೆಗಳು ಕರೆ ನೀಡಿರೋ ಹೋರಾಟಕ್ಕೆ ಬೆಂಬಲ ನೀಡಿದ್ದೇನೆ. ನೂರು ಜನ ನಮ್ಮ ಹಿಂದೂ ಕಾರ್ಯಕರ್ತರು ಸಹಿ ಮಾಡಿ ಕೋಟ್೯ಗೆ ಹೋಗಿದ್ದಾರೆ. ಜ್ಞಾನವಾಪಿ ಮಸೀದಿ ತರ ಸರ್ವೆ ಆಗಬೇಕು ಎನ್ನೊ ಆಗ್ರಹ ನಮ್ಮದು ಎಂದು ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.

ಕೋಟ್೯ ಏನು ಹೇಳುತ್ತೆ ನೋಡೋಣ. ಮೂಲ ಆಂಜನೇಯ ದೇವಸ್ಥಾನ ಚಲೋ‌ ಕಾರ್ಯಕ್ರಮ ಮಾಡೇ ಮಾಡ್ತೀವಿ. ಇನ್ನು ಅಜಾನ್ ವಿಚಾರವಾಗಿ ಎರಡನೇ ಹಂತದ ಹೋರಾಟ ಮಾಡ್ತಿವಿ. ಸರ್ಕಾರಕ್ಕೆ ಧಮ್ ಇದ್ರೆ ಲೌಡ್ ಸ್ಪೀಕರ್ ಕೆಳಗಿಳಿಸಲಿ. ಇಲ್ಲದೇ ಹೋದ್ರೆ ಜೂನ್ 8 ರಂದು ಬಿಜೆಪಿ ಶಾಸಕರ ಕಚೇರಿ ಎದುರು ಧರಣಿ ಕೂರುತ್ತೇವೆ. ಹತ್ತಕ್ಕೂ ಹೆಚ್ಚು ಸಂಘಟನೆಗಳು ನಮಗೆ ಬೆಂಬಲ ನೀಡಿವೆ. ನಿಮ್ಮ ಕೈಯಲ್ಲಿ ಆಗದಿದ್ದರೇ ಅಧಿಕಾರದಿಂದ ಕೆಳಗಿಳಿಯಿರಿ‌. ನಾನು ಗುಂಡು ಹೊಡೆದು 24 ಗಂಟೆಯಲ್ಲಿ ಆದೇಶ ಪಾಲನೆ ಮಾಡ್ತೀನಿ ಎಂದು ಬೊಮ್ಮಾಯಿ ಸರ್ಕಾರ ವಿರುದ್ದ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ನಂತರ ಮೊದಲ ಬಾರಿ ಕಾಬೂಲ್‌ಗೆ ಅಧಿಕೃತ ಭೇಟಿ ನೀಡಿದ ಭಾರತ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿ ನಾಡಿದ್ದು ಆಂಜನೇಯಸ್ವಾಮಿ ಮೂಲ ಮಂದಿರ ಚಲೋ ಹಿನ್ನೆಲೆ ಶ್ರೀರಂಗಪಟ್ಟಣದಲ್ಲಿ ತಹಶೀಲ್ದಾರ್ ಶ್ವೇತಾ ರವೀಂದ್ರ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಜೂ.3ರ ಸಂಜೆ 6ರಿಂದ ಜೂನ್ 5ರ ಬೆಳಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮೆರವಣಿಗೆ, ಪ್ರತಿಭಟನೆ, ರಥಯಾತ್ರೆ ನಡೆಸದಂತೆ ನಿರ್ಬಂಧ ಹೇರಲಾಗಿದೆ. ವಿಶ್ವ ಹಿಂದೂ ಪರಿಷತ್, ಬಜರಂಗದಳ ಪ್ರತಿಭಟನೆಗೆ ಕರೆ ನೀಡಿದೆ. ಮಸೀದಿಯೊಳಗೆ ನಡೆಸುತ್ತಿರುವ ಮದರಸಾ ಖಾಲಿ ಮಾಡಿಸಬೇಕು. ಅಕ್ರಮವಾಗಿ ವಾಸ ಮಾಡುತ್ತಿರುವವರ ವಿರುದ್ಧ ಕೇಸ್ ಹಾಕಬೇಕು. ಮಸೀದಿಯಲ್ಲಿ ಹನುಮ ಭಕ್ತರಿಗೆ ಪೂಜೆ ಸಲ್ಲಿಕೆಗೆ ಅವಕಾಶ ನೀಡಬೇಕು. ಸರ್ವೆಗೂ ಒತ್ತಾಯಿಸಿ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಇದನ್ನೂ ಓದಿ:  ಹರ್ಷನ ಮದುವೆ ಆಗಲು ವರುಧಿನಿ ಹೊಸ ಪ್ಲ್ಯಾನ್​; ಕೊನೇ ಕ್ಷಣದಲ್ಲಿ ವಧು ಬದಲು?

Published On - 2:54 pm, Thu, 2 June 22

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ