ಶಾಲೆಯಲ್ಲಿ ಬಿಸಿಯೂಟ ಸೇವಿಸುವಾಗಲೇ ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬಳೇಗಾರು ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟೈಲ್ಸ್ ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, 20 ವರ್ಷದ ರಾಕೇಶ್ ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ವಾಹನದಲ್ಲಿದ್ದ ಟೈಲ್ಸ್ ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಶಾಲೆಯಲ್ಲಿ ಬಿಸಿಯೂಟ ಸೇವಿಸುವಾಗಲೇ ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು
ಬಾಲಕನಿಗೆ ಹೃದಯಾಘಾತ
Image Credit source: Tv9 kannada
Edited By:

Updated on: Sep 02, 2026 | 8:42 PM

ಮಂಡ್ಯ, ಸೆ.2 : ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅತ್ಯಂತ ದುರಂತಕರ ಘಟನೆಯೊಂದು ಸಂಭವಿಸಿದ್ದು, ೯ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ೧೪ ವರ್ಷದ ಬಾಲಕ ಶಾಲೆಯಲ್ಲಿದ್ದಾಗಲೇ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾನೆ. ಸೋಮನಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದ ವೀರಮಣಿ (೧೪) ಮೃತಪಟ್ಟ ದುರ್ದೈವಿ ವಿದ್ಯಾರ್ಥಿ. ಬುಧವಾರ ಮಧ್ಯಾಹ್ನ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ವೇಳೆ ವೀರಮಣಿ ದಿಢೀರನೆ ಮೂರ್ಛೆ ಬಿದ್ದು ನೆಲಕ್ಕೆ ಕುಸಿದಿದ್ದಾನೆ. ತಕ್ಷಣವೇ ಜಾಗರೂಕರಾದ ಶಾಲಾ ಶಿಕ್ಷಕರು ಬಾಲಕನನ್ನು ಮದ್ದೂರು ತಾಲೂಕು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪ್ರಥಮ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (MIMS) ಶಿಫ್ಟ್ ಮಾಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ವೀರಮಣಿ ಪ್ರಾಣ ಬಿಟ್ಟಿದ್ದಾನೆ.

ಟಾಟಾ ಏಸ್ ವಾಹನ ಪಲ್ಟಿ

ಸಾಗರ ತಾಲೂಕಿನ ಬಳೇಗಾರು ಗ್ರಾಮದ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟೈಲ್ಸ್ ತುಂಬಿಕೊಂಡು ಹೋಗುತ್ತಿದ್ದ ಟಾಟಾ ಏಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ. ಬಳಗಸೋಡು ಗ್ರಾಮದ ಹರೀಶ್ ಎಂಬುವವರ ಪುತ್ರ ರಾಕೇಶ್ (20) ಮೃತಪಟ್ಟ ದುರ್ದೈವಿ. ಸಾಗರದಿಂದ ತಾಳಗುಪ್ಪ ಕಡೆಗೆ ಹೊರಟಿದ್ದ ಟಾಟಾ ಏಸ್ ವಾಹನ ಬಳೇಗಾರು ಸಮೀಪ ಚಾಲಕನ ಹತೋಟಿ ತಪ್ಪಿ ಪಲ್ಟಿಯಾಗಿದೆ. ವಾಹನದ ಹಿಂಬದಿಯಲ್ಲಿ ಕುಳಿತಿದ್ದ ರಾಕೇಶ್ ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಅಸುವ ನೀಗಿದ್ದಾನೆ. ಘಟನೆಯ ರಭಸಕ್ಕೆ ವಾಹನದಲ್ಲಿದ್ದ ಟೈಲ್ಸ್ ಸಾಮಗ್ರಿಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಸ್ಥಳೀಯರು ತಕ್ಷಣ ಧಾವಿಸಿ ಮೃತದೇಹವನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ರವಾನಿಸಲು ನೆರವಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ

ಜಿಲ್ಲೆಯ ಸಾಗರ ತಾಲೂಕಿನ ಬಳೇಗಾರು ಗ್ರಾಮದ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟೈಲ್ಸ್ ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ. ಸಾಗರ ತಾಲೂಕಿನ ಬಳಸಗೋಡು ಗ್ರಾಮದ ನಿವಾಸಿ ಹರೀಶ್ ಎಂಬುವವರ ಪುತ್ರ ರಾಕೇಶ್ (20) ಮೃತಪಟ್ಟ ದುರ್ದೈವಿ ಯುವಕ. ಟೈಲ್ಸ್ ಲೋಡ್ ಮಾಡಿಕೊಂಡು ಸಾಗರದಿಂದ ತಾಳಗುಪ್ಪ ಕಡೆಗೆ ಹೊರಟಿದ್ದ ಟಾಟಾ ಏಸ್ ವಾಹನವು ಬಳೇಗಾರು ಗ್ರಾಮದ ಸಮೀಪ ಚಾಲಕನ ಹತೋಟಿ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ವಾಹನದ ಹಿಂಬದಿಯಲ್ಲಿ ಕುಳಿತಿದ್ದ ರಾಕೇಶ್ ಸ್ಥಳದಲ್ಲೇ ಅಸುವ ನೀಗಿದ್ದಾನೆ. ವಾಹನ ಪಲ್ಟಿಯಾದ ರಭಸಕ್ಕೆ ಅದರಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಟೈಲ್ಸ್ ಸಾಮಗ್ರಿಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

ಇದನ್ನೂ ಓದಿ: ಜ್ಞಾನದ ದೀಪ ಹಚ್ಚುವವರ ಬದುಕಿನಲ್ಲಿ 17 ತಿಂಗಳಿಂದ ಕತ್ತಲೆ: ಉತ್ತರ ಕನ್ನಡದ 219 ಗ್ರಂಥಾಲಯ ಮೇಲ್ವಿಚಾರಕರ ಕಣ್ಣೀರು

ಬೆಸ್ಕಾಂ ನಿರ್ಲಕ್ಷ್ಯಕ್ಕೆ ಲೈನ್ ದುರಸ್ತಿ ವೇಳೆ ಕರೆಂಟ್ ಶಾಕ್ ಹೊಡೆದು ವ್ಯಕ್ತಿ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಬೆಸ್ಕಾಂ ಸಿಬ್ಬಂದಿಯ ಭಾರಿ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಲೈನ್ ದುರಸ್ತಿಗಾಗಿ ವಿದ್ಯುತ್ ಕಂಬ ಏರಿದ್ದ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ದುರ್ಮರಣಕ್ಕೀಡಾದ ಘಟನೆ ಮುನಿಶಾಮಪ್ಪ ಬಡಾವಣೆಯಲ್ಲಿ ನಡೆದಿದೆ. ಚಿತ್ರದುರ್ಗ ಮೂಲದ ಪಾಲಯ್ಯ (40) ಮೃತಪಟ್ಟ ದುರ್ದೈವಿ. ಇವರು ಲೈನ್ ಮ್ಯಾನ್ ಒಬ್ಬರ ಬಳಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದರು. ಬುಧವಾರ ಸಂಜೆ ಮುನಿಶಾಮಪ್ಪ ಬಡಾವಣೆ ಬಳಿ ವಿದ್ಯುತ್ ಲೈನ್ ದುರಸ್ತಿಗಾಗಿ ಯಾವುದೇ ಮುಂಜಾಗ್ರತಾ ಕ್ರಮಗಳಿಲ್ಲದೆ ಪಾಲಯ್ಯ ಕಂಬ ಏರಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ವಿದ್ಯುತ್ ಪ್ರವಹಿಸಿದ ಪರಿಣಾಮ ಕಂಬದ ಮೇಲೆಯೇ ವಿದ್ಯುತ್ ಆಘಾತಕ್ಕೊಳಗಾಗಿ ಪ್ರಾಣ ಬಿಟ್ಟಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:41 pm, Wed, 2 September 26

Loading...
Unable to load recommendations.
Follow Us