ಸಿಎಂ ಆದ ಬಳಿಕ ಮೊದಲ ಬಾರಿಗೆ ಮಂಡ್ಯ ಜಿಲ್ಲೆಗೆ ಸಿದ್ಧರಾಮಯ್ಯ ಭೇಟಿ: ಎಕ್ಸ್‌ಪ್ರೆಸ್‌ ಹೈವೇ ಪರಿಶೀಲನೆ

ನಾಳೆ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲ್ಲಿರುವ ಸಿಎಂ ಸಿದ್ಧರಾಮಯ್ಯ, ಜೊತೆಗೆ ಅಪಘಾತಗಳು ಹೆಚ್ಚಾದ ಹಿನ್ನೆಲೆ ನೂತನ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ‌ ವೀಕ್ಷಣೆ ಮಾಡಲಿದ್ದಾರೆ.

ಸಿಎಂ ಆದ ಬಳಿಕ ಮೊದಲ ಬಾರಿಗೆ ಮಂಡ್ಯ ಜಿಲ್ಲೆಗೆ ಸಿದ್ಧರಾಮಯ್ಯ ಭೇಟಿ: ಎಕ್ಸ್‌ಪ್ರೆಸ್‌ ಹೈವೇ ಪರಿಶೀಲನೆ
ಸಿಎಂ ಸಿದ್ದರಾಮಯ್ಯ
Follow us
ಪ್ರಶಾಂತ್​ ಬಿ.
| Updated By: ಗಂಗಾಧರ​ ಬ. ಸಾಬೋಜಿ

Updated on: Jul 28, 2023 | 9:30 PM

ಮಂಡ್ಯ, ಜುಲೈ 28: ಮುಖ್ಯಮಂತ್ರಿ ಆದ ನಂತರ ಮೊದಲ ಬಾರಿಗೆ ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಸಿಎಂ ಸಿದ್ಧರಾಮಯ್ಯ (Siddaramaiah) ನಾಳೆ ನೂತನ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ‌ ವೀಕ್ಷಣೆ ಮಾಡಲಿದ್ದಾರೆ. ಅಪಘಾತಗಳು ಹೆಚ್ಚಾದ ಹಿನ್ನೆಲೆ ಮಂಡ್ಯ ತಾಲೂಕಿನ ಉಮ್ಮಡಹಳ್ಳಿ ಗೇಟ್ ಬಳಿ ಅಳವಡಿಸಿರುವ 360 ಡಿಗ್ರಿ ಕ್ಯಾಮರಾ ವೀಕ್ಷಿಸಲಿದ್ದಾರೆ.

ನಾಳೆ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ಧರಾಮಯ್ಯ ಪಾಲ್ಗೊಳ್ಳಲ್ಲಿದ್ದಾರೆ. ನಾಳೆ ಬೆಳಗ್ಗೆ 10:30ಕ್ಕೆ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ತೆರಳಿ, ಮಂಡ್ಯದ ಅಮರಾವತಿ ಹೋಟೆಲ್​ ಸಮೀಪ (ಬೆಂಗಳೂರಿನಿಂದ 93 km ಅಂತರ) ಹಾಗೂ ಗಣಂಗೂರು ಟೋಲ್​ ಸಮೀಪ ಪರಿಶೀಲನೆ ನಡೆಸಲಿದ್ದಾರೆ. ಜೊತೆಗೆ ಅಪಘಾತ ತಡೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜತೆ ಸಿಎಂ ಚರ್ಚೆ ಮಾಡಲಿದ್ದಾರೆ. ಹಾಗಾಗಿ ಇಂದು ಅಧಿಕಾರಿಗಳ ಜೊತೆ ಮಂಡ್ಯ ಶಾಸಕ ರವಿಕುಮಾರ್​ ಸ್ಥಳ ಪರಿಶೀಲನೆ ಮಾಡಿದ್ದಾರೆ.

ಎಕ್ಸ್​ಪ್ರೆಸ್​​ ಹೈವೇಯಲ್ಲಿ ಅತಿವೇಗವಾಗಿ ವಾಹನ ಚಾಲನೆಗೆ ಬ್ರೇಕ್​​: ANPR ಕ್ಯಾಮರಾ ಅಳವಡಿಕೆ

ಎಕ್ಸ್​ಪ್ರೆಸ್​​ ಹೈವೇಯಲ್ಲಿ ಅತಿವೇಗವಾಗಿ ವಾಹನ ಚಾಲನೆಗೆ ಬ್ರೇಕ್​ ಬೀಳಲಿದ್ದು, ವಾಹನಗಳ ವೇಗದ ಮೇಲೆ ಟ್ರಾಫಿಕ್ ಪೊಲೀಸರು ಕಣ್ಣಿಟ್ಟಿದ್ದಾರೆ. ಅಂದರೆ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಬೇಸ್ಡ್ ಕ್ಯಾಮರಾ (ANPR) ಅಳವಡಿಕೆ ಮಾಡಲಾಗಿದೆ.

ಇದನ್ನೂ ಓದಿ: Bangalore Chennai Expressway: ಶೀಘ್ರ ಸಿದ್ಧವಾಗಲಿದೆ ಬೆಂಗಳೂರು ಚೆನ್ನೈ ಎಕ್ಸ್​ಪ್ರೆಸ್​​ವೇ; ದೂರ, ಸಮಯ, ಇತರ ಮಾಹಿತಿ ಇಲ್ಲಿದೆ

ಹೈವೇಯಲ್ಲಿ ಅಪಘಾತ ತಡೆಗೆ ಎಎನ್​ಪಿಆರ್​​ ಕ್ಯಾಮರಾ ಅಳವಡಿಕೆ ಮಾಡಿದ್ದು, ANPR ಕ್ಯಾಮರಾ ಬಳಸಿ ಸಂಚಾರ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ರಾಜ್ಯ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಸೂಚನೆ ಮೇರೆಗೆ ಕ್ಯಾಮರಾ ಅಳವಡಿಕೆ ಮಾಡಲಾಗಿದ್ದು, ಈ ಕುರಿತಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ.​

ಇದನ್ನೂ ಓದಿ: Driverless Car: ಬೆಂಗಳೂರಿನಲ್ಲಿ ರಸ್ತೆಗಿಳಿದ ಸ್ವಯಂಚಾಲಿತ ಕಾರು: ಸಾರ್ವಜನಿಕರ ಅಚ್ಚರಿಗೆ ಕಾರಣವಾಯ್ತು ಝಡ್ ಪಾಡ್

ಅತಿಯಾದ ಅವರಸವೇ ಅಪಘಾತಕ್ಕೆ ಮುಖ್ಯ ಕಾರಣ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾಗಳ ಪ್ರಾಯೋಗಿಕ ಚಾಲನೆ ನೀಡಲಾಗಿದೆ. ಅಪಘಾತ ಮತ್ತು ಸಾವುನೋವುಗಳ ಸಂಖ್ಯೆಯನ್ನು ಕಡಿಮೆ ಮಾಡಲು ಈ ಯೋಜನೆ ಸಹಾಯವಾಗಲಿದೆ ಎಂದು ಭಾವಿಸುತ್ತೇವೆ. ಅತಿಯಾದ ಅವರಸವೇ ಅಪಘಾತಕ್ಕೆ ಮುಖ್ಯ ಕಾರಣ ಎಂದು ಅವರು ಟ್ವೀಟ್ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್