ಮಂಡ್ಯ, ಜುಲೈ 28: ಮುಖ್ಯಮಂತ್ರಿ ಆದ ನಂತರ ಮೊದಲ ಬಾರಿಗೆ ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಸಿಎಂ ಸಿದ್ಧರಾಮಯ್ಯ (Siddaramaiah) ನಾಳೆ ನೂತನ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ವೀಕ್ಷಣೆ ಮಾಡಲಿದ್ದಾರೆ. ಅಪಘಾತಗಳು ಹೆಚ್ಚಾದ ಹಿನ್ನೆಲೆ ಮಂಡ್ಯ ತಾಲೂಕಿನ ಉಮ್ಮಡಹಳ್ಳಿ ಗೇಟ್ ಬಳಿ ಅಳವಡಿಸಿರುವ 360 ಡಿಗ್ರಿ ಕ್ಯಾಮರಾ ವೀಕ್ಷಿಸಲಿದ್ದಾರೆ.
ನಾಳೆ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ಧರಾಮಯ್ಯ ಪಾಲ್ಗೊಳ್ಳಲ್ಲಿದ್ದಾರೆ. ನಾಳೆ ಬೆಳಗ್ಗೆ 10:30ಕ್ಕೆ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ತೆರಳಿ, ಮಂಡ್ಯದ ಅಮರಾವತಿ ಹೋಟೆಲ್ ಸಮೀಪ (ಬೆಂಗಳೂರಿನಿಂದ 93 km ಅಂತರ) ಹಾಗೂ ಗಣಂಗೂರು ಟೋಲ್ ಸಮೀಪ ಪರಿಶೀಲನೆ ನಡೆಸಲಿದ್ದಾರೆ. ಜೊತೆಗೆ ಅಪಘಾತ ತಡೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜತೆ ಸಿಎಂ ಚರ್ಚೆ ಮಾಡಲಿದ್ದಾರೆ. ಹಾಗಾಗಿ ಇಂದು ಅಧಿಕಾರಿಗಳ ಜೊತೆ ಮಂಡ್ಯ ಶಾಸಕ ರವಿಕುಮಾರ್ ಸ್ಥಳ ಪರಿಶೀಲನೆ ಮಾಡಿದ್ದಾರೆ.
ಎಕ್ಸ್‌ಪ್ರೆಸ್ ಹೈವೇಯಲ್ಲಿ ಅತಿವೇಗವಾಗಿ ವಾಹನ ಚಾಲನೆಗೆ ಬ್ರೇಕ್ ಬೀಳಲಿದ್ದು, ವಾಹನಗಳ ವೇಗದ ಮೇಲೆ ಟ್ರಾಫಿಕ್ ಪೊಲೀಸರು ಕಣ್ಣಿಟ್ಟಿದ್ದಾರೆ. ಅಂದರೆ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಬೇಸ್ಡ್ ಕ್ಯಾಮರಾ (ANPR) ಅಳವಡಿಕೆ ಮಾಡಲಾಗಿದೆ.
ಹೈವೇಯಲ್ಲಿ ಅಪಘಾತ ತಡೆಗೆ ಎಎನ್ಪಿಆರ್ ಕ್ಯಾಮರಾ ಅಳವಡಿಕೆ ಮಾಡಿದ್ದು, ANPR ಕ್ಯಾಮರಾ ಬಳಸಿ ಸಂಚಾರ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ರಾಜ್ಯ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಸೂಚನೆ ಮೇರೆಗೆ ಕ್ಯಾಮರಾ ಅಳವಡಿಕೆ ಮಾಡಲಾಗಿದ್ದು, ಈ ಕುರಿತಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
Trial run of Artificial Intelligence based Cameras on Bengaluru-Mysore Highway
Hope these initiatives help in reducing the no. of accidents and fatalities
“ Over speeding is the main killer on Indian roads” pic.twitter.com/lZSIqzfeOQ
— alok kumar (@alokkumar6994) July 28, 2023
ಇದನ್ನೂ ಓದಿ: Driverless Car: ಬೆಂಗಳೂರಿನಲ್ಲಿ ರಸ್ತೆಗಿಳಿದ ಸ್ವಯಂಚಾಲಿತ ಕಾರು: ಸಾರ್ವಜನಿಕರ ಅಚ್ಚರಿಗೆ ಕಾರಣವಾಯ್ತು ಝಡ್ ಪಾಡ್
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾಗಳ ಪ್ರಾಯೋಗಿಕ ಚಾಲನೆ ನೀಡಲಾಗಿದೆ. ಅಪಘಾತ ಮತ್ತು ಸಾವುನೋವುಗಳ ಸಂಖ್ಯೆಯನ್ನು ಕಡಿಮೆ ಮಾಡಲು ಈ ಯೋಜನೆ ಸಹಾಯವಾಗಲಿದೆ ಎಂದು ಭಾವಿಸುತ್ತೇವೆ. ಅತಿಯಾದ ಅವರಸವೇ ಅಪಘಾತಕ್ಕೆ ಮುಖ್ಯ ಕಾರಣ ಎಂದು ಅವರು ಟ್ವೀಟ್ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.