AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರು, ಸರ್ಕಾರದ ಆಸ್ತಿ ಮೇಲೆ ವಕ್ಫ್ ಕಣ್ಣು: ನಾಳೆ ಶ್ರೀರಂಗಪಟ್ಟಣ ಬಂದ್‌ಗೆ ಕರೆ

ಶ್ರೀರಂಗಪಟ್ಟಣದಲ್ಲಿ ನಾಳೆ ಬಂದ್ ಆಚರಿಸಲು ವಿವಿಧ ಸಂಘಟನೆಗಳು ಕರೆ ನೀಡಿವೆ. 50ಕ್ಕೂ ಹೆಚ್ಚು ರೈತರ ಭೂಮಿ ಮತ್ತು ಸರ್ಕಾರಿ ಆಸ್ತಿಯನ್ನು ವಕ್ಫ್ ಬೋರ್ಡ್ ತಮ್ಮದೆಂದು ಹೇಳಿಕೊಳ್ಳುತ್ತಿರುವುದಕ್ಕೆ ವಿರೋಧಿಸಿ ಈ ಬಂದ್​ಗೆ ಕರೆ ನೀಡಲಾಗಿದೆ. ಭೂ ದಾಖಲೆಗಳಿಂದ ವಕ್ಫ್ ಹೆಸರನ್ನು ತೆಗೆದುಹಾಕುವಂತೆ ರೈತರು ಆಗ್ರಹಿಸಿದ್ದಾರೆ.

ರೈತರು, ಸರ್ಕಾರದ ಆಸ್ತಿ ಮೇಲೆ ವಕ್ಫ್ ಕಣ್ಣು: ನಾಳೆ ಶ್ರೀರಂಗಪಟ್ಟಣ ಬಂದ್‌ಗೆ ಕರೆ
ರೈತರು, ಸರ್ಕಾರದ ಆಸ್ತಿ ಮೇಲೆ ವಕ್ಫ್ ಕಣ್ಣು: ನಾಳೆ ಶ್ರೀರಂಗಪಟ್ಟಣ ಬಂದ್‌ಗೆ ಕರೆ
ಪ್ರಶಾಂತ್​ ಬಿ.
| Edited By: |

Updated on: Jan 19, 2025 | 6:45 PM

Share

ಮಂಡ್ಯ, ಜನವರಿ 19: ವಕ್ಫ್ (waqf) ವಿವಾದ ಸಕ್ಕರಿ ನಗರಿ ‌ಮಂಡ್ಯ ಜಿಲ್ಲೆಯ ಜನರನ್ನ ಬಿಟ್ಟುಬಿಡದೇ ಕಾಡುತ್ತಿದೆ. ರೈತರ ಜಮೀನನ ಆರ್​ಟಿಸಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಆಗುತ್ತಿದೆ. ಇದು ಜಿಲ್ಲೆಯ ರೈತರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ನಾಳೆ ಶ್ರೀರಂಗಪಟ್ಟಣ ಬಂದ್‌ಗೆ ವಿವಿಧ ಸಂಘಟನೆಗಳಿಂದ ಕರೆ ನೀಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆವರೆಗೆ ಬಂದ್‌ ಆಚರಣೆ ಮಾಡಲಾಗುತ್ತಿದ್ದು, ಸಹಕರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

ವಿಶ್ವ ಹಿಂದೂ ಪರಿಷತ್, ಭಜರಂಗದಳ, ದಲಿತ ಸಂಘಟನೆಗಳು, ಕನ್ನಡಪರ, ರೈತ ಸಂಘಟನೆಗಳು ಸೇರಿ ಹಲವು ಸಂಘಟನೆಗಳಿಂದ ಕರೆ ನೀಡಲಾಗಿದೆ. 50ಕ್ಕೂ ಹೆಚ್ಚು ರೈತರ ಆರ್‌ಟಿಸಿಗಳಲ್ಲಿ ವಕ್ಫ್‌ ಹೆಸರು ಉಲ್ಲೇಖಿಸಲಾಗಿದೆ. ರೈತರ ಭೂಮಿ, ಪುರಾತತ್ವ ಇಲಾಖೆಯ ಕಟ್ಟಡಗಳು, ಕೋಟೆ, ಸಾರ್ವಜನಿಕ ಪಾರ್ಕ್‌ಗಳು ಸಾಲದ ಕಾಲಂನಲ್ಲಿ ವಕ್ಫ್ ಮಂಡಳಿ ಆಸ್ತಿ ಎಂದು ಉಲ್ಲೇಖಿಸಲಾಗಿದೆ. ಹಾಗಾಗಿ ಭೂ ದಾಖಲೆಗಳಲ್ಲಿ ವಕ್ಫ್ ಹೆಸರು ತೆಗೆಯುವಂತೆ ಆಗ್ರಹಿಸಿ ಬಂದ್​ಗೆ ಕರೆ ನೀಡಲಾಗಿದೆ.

ಇದನ್ನೂ ಓದಿ: ಶ್ರೀರಂಗಪಟ್ಟಣ: 50ಕ್ಕೂ ಹೆಚ್ಚು ರೈತರ ಜಮೀನಿನ ಪಹಣಿಯಲ್ಲಿ ವಕ್ಫ್​ ಹೆಸರು, ಅನ್ನದಾತರ ಅರೆಬೆತ್ತಲೆ ಧರಣಿ

ಸದ್ಯ ವಕ್ಫ್ ವಿವಾದ ಜಿಲ್ಲೆಯ ರೈತರನ್ನ ಬಿಟ್ಟುಬಿಡದೇ ಕಾಡುತ್ತಿದೆ. ಅದರಲ್ಲೂ ಕೋಟೆನಗರಿ ಶ್ರೀರಂಗಪಟ್ಟಣ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಆತಂಕವನ್ನೇ ಸೃಷ್ಠಿ ಮಾಡಿದೆ. ಆರ್​ಟಿಸಿಯಲ್ಲಿ ಸ್ವಾಧೀನದಾರರ ಕಲಂ ನಲ್ಲಿ ರೈತರ ಹೆಸರಿದ್ದರೂ ಋಣ ಕಲಂನಲ್ಲಿ ವಕ್ಫ್ ಹೆಸರು ನಮೂದಿಸಲಾಗಿದೆ. 2014-15 ರಲ್ಲಿ ಈ ರೀತಿ ಉಲ್ಲೇಖವಾಗಿದೆ.

ಕೇವಲ ರೈತರ ಜಮೀನು ಮಾತ್ರವಲ್ಲದೆ ಸರ್ಕಾರಿ ಶಾಲೆ, ಪಾರಂಪರಿಕ ಕಟ್ಟದ, ಪುರಾತತ್ವ ಇಲಾಖೆ ಆಸ್ತಿಯ ಮೇಲೆ ವಕ್ಫ್ ಕಣ್ಣು ಬಿದ್ದಿದೆ. ಇನ್ನು ರೈತರು ಜಮೀನು ಮಾರಾಟ, ಜಮೀನು ಹಂಚಿಕೆ ಮಾಡಿಕೊಳ್ಳುವ ಸಲುವಾಗಿ ಆರ್​ಟಿಸಿ ಪರಿಶೀಲನೆ ಮಾಡಿದಾಗ ವಕ್ಫ್ ಭೂತ ಎಂಟ್ರಿಕೊಟ್ಟಿರುವುದು ಬೆಳಕಿಗೆ ಬಂದಿದೆ. ಇದು ಅನ್ನದಾತರ ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಬಾಗಲಕೋಟೆಗೆ ಕಾಲಿಟ್ಟ ವಕ್ಫ್​​: ಮನೆ, ಸರ್ಕಾರಿ ಕಟ್ಟಡಗಳಿಗೆ ನೋಟಿಸ್, ಕಾನೂನು ಹೋರಾಟಕ್ಕೆ ಗ್ರಾಮಸ್ಥರು ಸಿದ್ಧ

ಇನ್ನು ಈ ವಿಚಾರವಾಗಿ ಇತ್ತೀಚೆಗೆ ಶ್ರೀರಂಗಪಟ್ಟಣದಲ್ಲಿ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ಮಾಡಿದ್ದರು. ಶ್ರೀರಂಗಪಟ್ಟಣದ ಕುವೆಂಪು ವೃತ್ತದಿಂದ ತಾಲೂಕು ಕಚೇರಿವರೆಗೂ ಬೈಕ್ ಜಾಥಾ ನಡೆಸಿ, ವಕ್ಫ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ರಾಜ್ಯದಲ್ಲಿ ವಕ್ಫ್ ಕಾಯ್ದೆಯನ್ನ ರದ್ದುಪಡಿಸುವಂತೆ ಆಗ್ರಹಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ