ಶ್ರೀರಂಗಪಟ್ಟಣ: ಜಾಮಿಯಾ ಮಸೀದಿ ಜಾಗದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಮತ್ತೆ ಮಂದಿರ ನಿರ್ಮಾಣದ ಸಂಕಲ್ಪ

ಹನುಮ ಸಂಕೀರ್ತನಾ ಯಾತ್ರೆಗೆ ವಿರೋಧ ವ್ಯಕ್ತಪಡಿಸಿರುವ ಎಸ್‌ಡಿಪಿಐ, ಇದು ಶಾಂತಿ ಸೌಹಾರ್ದತೆ ಕದಡುವ ಯತ್ನವೆಂದು ಆರೋಪಿಸಿದೆ. ಹೀಗಾಗಿ ಸಂಕೀರ್ತನಾ ಯಾತ್ರೆಗೆ ಅನುಮತಿ ನೀಡದಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿದೆ.

ಶ್ರೀರಂಗಪಟ್ಟಣ: ಜಾಮಿಯಾ ಮಸೀದಿ ಜಾಗದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಮತ್ತೆ ಮಂದಿರ ನಿರ್ಮಾಣದ ಸಂಕಲ್ಪ
ಹನುಮಂತ (ಸಾಂದರ್ಭಿಕ ಚಿತ್ರ)
Follow us
ಪ್ರಶಾಂತ್​ ಬಿ.
| Updated By: Ganapathi Sharma

Updated on: Dec 22, 2023 | 7:12 AM

ಮಂಡ್ಯ, ಡಿಸೆಂಬರ್ 22: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಮೂಡಲಬಾಗಿಲು ಬಳಿ ಜಾಮಿಯಾ ಮಸೀದಿ (Jamia Masjid) ಜಾಗದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ (Hindu Jagarana Vedike) ಮತ್ತೆ ಮಂದಿರ ನಿರ್ಮಾಣದ ಸಂಕಲ್ಪ ಮಾಡಲಾಗಿದೆ. ಈ ಮಧ್ಯೆ, ಶ್ರೀರಂಗಪಟ್ಟಣದಲ್ಲಿ ಡಿಸೆಂಬರ್ 24ರಂದು ಹನುಮ ಜಯಂತಿ ಹಿನ್ನೆಲೆಯಲ್ಲಿ ಸಂಕೀರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಇದಕ್ಕೆ ಎಸ್​​​ಡಿಪಿಐ ಆಕ್ಷೇಪ ವ್ಯಕ್ತಪಡಿಸಿದೆ.

ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಸಂಕೀರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಜಾಮಿಯಾ ಮಸೀದಿ ಜಾಗದಲ್ಲಿ ಮತ್ತೆ ಮಂದಿರ ನಿರ್ಮಾಣದ ಸಂಕಲ್ಪ ತೊಡಲಾಗಿದೆ. ಮೂಡಲಬಾಗಿಲು ಆಂಜನೇಯಸ್ವಾಮಿ ದೇವಾಲಯ ಪುನರ್ ಪ್ರತಿಷ್ಠಾಪನೆ ಸಂಕಲ್ಪದೊಂದಿಗೆ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಯಾತ್ರೆಯಲ್ಲಿ ಸಾವಿರಾರು ಹನುಮ ಮಾಲಾಧಾರಿಗಳು ಭಾಗಿಯಾಗಲಿದ್ದಾರೆ.

ಹನುಮ ಸಂಕೀರ್ತನಾ ಯಾತ್ರೆಗೆ ವಿರೋಧ ವ್ಯಕ್ತಪಡಿಸಿರುವ ಎಸ್‌ಡಿಪಿಐ, ಇದು ಶಾಂತಿ ಸೌಹಾರ್ದತೆ ಕದಡುವ ಯತ್ನವೆಂದು ಆರೋಪಿಸಿದೆ. ಹೀಗಾಗಿ ಸಂಕೀರ್ತನಾ ಯಾತ್ರೆಗೆ ಅನುಮತಿ ನೀಡದಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿದೆ. ಯಾತ್ರೆಗೆ ಅನುಮತಿ ನೀಡಿದರೆ ಕೋಮು ಗಲಭೆ ನಡೆಯುವ ಸಾಧ್ಯತೆ ಇದೆ ಎಂದು ಎಸ್‌ಡಿಪಿಐ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಕೋಮುಸೂಕ್ಷ್ಮ ಗಂಗಾವತಿ ಪಟ್ಟಣದಲ್ಲಿ ಸಂಕೀರ್ತನಾ ಯಾತ್ರೆ: ಸಿಸಿಟಿವಿ ಕಣ್ಗಾವಲು, ಬಿಗಿ ಪೊಲೀಸ್ ಬಂದೋಬಸ್ತ್

ಕಳೆದ ವರ್ಷ ಯಾತ್ರೆ ವೇಳೆ ಮುಸ್ಲಿಮರ ಮನೆಗಳ ಮೇಲೆ ದಾಳಿ ನಡೆದಿತ್ತು. ಮುಸ್ಲಿಮರ ಮನೆ, ಅಂಗಡಿಗಳ ಮೇಲೆ ದಾಳಿಗೆ ಪ್ರಚೋದನೆ ನೀಡಲಾಗುತ್ತಿದೆ. ಜಾಮಿಯಾ ಮಸೀದಿ ಧ್ವಂಸಕ್ಕೆ ಹುನ್ನಾರ ನಡೆಯುತ್ತಿದೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನೆ ನಡೆಸಲಾಗುತ್ತಿದೆ. ಮುನ್ನೆಚ್ಚರಿಕೆಯಿಂದ ಯಾತ್ರೆಗೆ ಅವಕಾಶ ನೀಡಬಾರದು ಎಂದು ಎಸ್​ಡಿಪಿಐ ಒತ್ತಾಯಿಸಿದೆ.

ಒಂದು ವೇಳೆ ಯಾತ್ರೆಗೆ ಅನುಮತಿ ನೀಡಿ, ಅದರಿಂದಾಗು ಅನಾಹುತವಾದರೆ ಸರ್ಕಾರವೇ ಹೊಣೆ ಎಂದು ಎಸ್​ಡಿಪಿಐ ಎಚ್ಚರಿಕೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ