ಮಂಡ್ಯ: ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು; ಅಂಗಾಂಗ ದಾನಕ್ಕೆ ಪೋಷಕರ ನಿರ್ಧಾರ
ಮೂವರು ವಿದ್ಯಾರ್ಥಿಗಳ ಪೈಕಿ ಚಿಕಿತ್ಸೆ ಫಲಿಸದೇ ಶರತ್ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿ ಶರತ್ ಅಂಗಾಂಗವನ್ನು ವಿದ್ಯಾರ್ಥಿ ಪೋಷಕರು ದಾನ ಮಾಡಿದ್ದಾರೆ. ಶರತ್ ಹೃದಯ ಆ್ಯಂಬುಲೆನ್ಸ್ನಲ್ಲಿ ಬೆಂಗಳೂರಿಗೆ ರವಾನೆ ಮಾಡಲಾಗಿದೆ.
ಮಂಡ್ಯ: ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ವಿದ್ಯಾರ್ಥಿ ಶರತ್ (19) ಸಾವನ್ನಪ್ಪಿದ್ದಾರೆ. ಡಿಸೆಂಬರ್ 23 ರಂದು ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆದಿದ್ದ ಅಪಘಾತದಲ್ಲಿ ಶರತ್ಗೆ ಗಾಯವಾಗಿತ್ತು. ನಡೆದುಕೊಂಡು ಹೋಗುತ್ತಿದ್ದಾಗ ಶರತ್ಗೆ ಕಾರು ಡಿಕ್ಕಿಯಾಗಿತ್ತು. ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯವಾಗಿತ್ತು. ಮೂವರು ವಿದ್ಯಾರ್ಥಿಗಳ ಪೈಕಿ ಚಿಕಿತ್ಸೆ ಫಲಿಸದೇ ಶರತ್ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿ ಶರತ್ ಅಂಗಾಂಗವನ್ನು ವಿದ್ಯಾರ್ಥಿ ಪೋಷಕರು ದಾನ ಮಾಡಿದ್ದಾರೆ. ಶರತ್ ಹೃದಯ ಆ್ಯಂಬುಲೆನ್ಸ್ನಲ್ಲಿ ಬೆಂಗಳೂರಿಗೆ ರವಾನೆ ಮಾಡಲಾಗಿದೆ.
ಬಾಗಲಕೋಟೆ: ಕ್ರೂಸರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು ಕ್ರೂಸರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಬಾಗಲಕೋಟೆ ತಾಲೂಕಿನ ಬೆನಕಟ್ಟಿ ನಿವಾಸಿ ರಾಜೆಸಾಬ್ ನದಾಫ್ (38) ಎಂಬವರು ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಸವಾರನಿಗೆ ಗಾಯ ಆಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಮೀನಗಢ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ತುಮಕೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿ ಹತ್ಯೆ ತುಮಕೂರಿನಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿ ಹತ್ಯೆ ಮಾಡಿದ ಘಟನೆ ನಡೆದಿದೆ. ನಗರದ ಅಮಾನಿಕೆರೆ ಏರಿ ಮೇಲೆ ಬರ್ಬರ ಕೊಲೆ ನಡೆದಿದೆ. ಎನ್.ಆರ್. ಕಾಲೋನಿಯ ನಿವಾಸಿ ಮಂಜುನಾಥ್ (25) ಎಂಬವರನ್ನು ಕೊಲೆ ಮಾಡಲಾಗಿದೆ. ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ: Nagesh Karale: ಪುಣೆಯಲ್ಲಿ ಕುಸ್ತಿಪಟುವಿನ ಬರ್ಬರ ಹತ್ಯೆ; ವಿಡಿಯೋದಲ್ಲಿ ಸೆರೆಯಾಯ್ತು ಕೊಲೆಯ ದೃಶ್ಯ
Published On - 8:24 pm, Sun, 26 December 21