AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವಂತೆ ಆಗ್ರಹ: ಸಿಎಂ ಬೊಮ್ಮಾಯಿ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭಟನೆ

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಮಂಡ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಣಕು ಶವಯಾತ್ರೆ ಮಾಡಿದರು.

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವಂತೆ ಆಗ್ರಹ: ಸಿಎಂ ಬೊಮ್ಮಾಯಿ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭಟನೆ
ಮಂಡ್ಯದಲ್ಲಿ ಸಿಎಂ ಬೊಮ್ಮಾಯಿಯವರ ಅಣುಕು ಶವಯಾತ್ರೆ ಮಾಡಿದ ರೈತರು
TV9 Web
| Edited By: |

Updated on:Nov 16, 2022 | 4:29 PM

Share

ಮಂಡ್ಯ: ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಮಂಡ್ಯದಲ್ಲಿ (Mandya) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಅಣಕು ಶವಯಾತ್ರೆ ಮಾಡಿದರು. ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ ಸಂಜಯ ವೃತ್ತದವರೆಗೆ ಶವಯಾತ್ರೆ ನಡೆಸಿದರು. ಸಂಜಯ ವೃತ್ತದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಧರಣಿ ಕೂತರು. ಹೆದ್ದಾರಿಯಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್​ ನಿಲ್ಲಿಸಿ ರೈತರು ಸಿಎಂ, ಸಚಿವರು, ಸರ್ಕಾರದ ವಿರುದ್ಧ “ಸತ್ತರಪ್ಪ ಸತ್ತರು ಸರ್ಕಾರದವರು ಸತ್ತರು” ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂತರ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಕೈಗೊಂಡರು.

ಈ ವೇಳೆ ಸಿಎಂ ಬೊಮ್ಮಾಯಿ ಅವರ ಅಣಕು ಶವಯಾತ್ರೆಗೆ ಪೊಲೀಸರು ಅಡ್ಡಿಪಡಿಸಿದರು. ತಡೆಯಲು ಬಂದ ಪೊಲೀಸರನ್ನು ಪಕ್ಕಕ್ಕೆ ದೂಡಿ ರೈತರು ಸಿಎಂ ಬೊಮ್ಮಾಯಿ ಪ್ರತಿಕೃತಿಗೆ ಬೆಂಕಿ ಹಚ್ಚಿದರು. ಕಬ್ಬು ಬೆಳೆಗಾರರ ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಬಂದೋಬಸ್ತ್​ ಮಾಡಿದ್ದಾರೆ.

ಕಬ್ಬಿಗೆ ಸೂಕ್ತ ಬೆಲೆ ಘೋಷಣೆಗಾಗಿ ಮುಧೋಳ ಬಂದ್….!

ಬಾಗಲಕೋಟೆ: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡುವಂತೆ ಕಳೆದ ಒಂದು ತಿಂಗಳಿನಿಂದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಸಂಬಂಧ ನಿನ್ನೆ (ನ.15) ಸಚಿವತ್ರಯರ ನೇತೃತ್ವದಲ್ಲಿ ನಡೆದ ಖಾರ್ಕಾನೆ ಮಾಲಿಕರ ಮತ್ತು ಕಬ್ಬು ಬೆಳೆಗಾರರ ಸಭೆ ವಿಫಲವಾಗಿದೆ. ಹೀಗಾಗಿ ಇಂದು ಕರ್ನಾಟಕ ರಾಜ್ಯ ರೈತ ಸಂಘ ಮುಧೋಳ ಬಂದ್​​ಗೆ ಕರೆ ಕೊಟ್ಟಿದೆ. ಸದ್ಯ ಮುಧೋಳ ನಗರ ಸಂಪೂರ್ಣ ಸ್ಥಬ್ದವಾಗಿದ್ದು, ರೈತರು ಬೀದಿಗೆ ಇಳಿದು ಪ್ರತಿಭಟನೆ ಮಾಡುತ್ತಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘದದಿಂದ ಸಿಎಂ ಬೊಮ್ಮಾಯಿಗೆ ಎಚ್ಚರಿಕೆ

ಇಂದು ಸಂಜೆಯೊಳಗೆ 2900 ಬೆಲೆ ಘೋಷಣೆ ಮಾಡಬೇಕು, ಇಲ್ಲದಿದ್ದರೆ ಪ್ರತಿಭಟನೆ ಉಗ್ರಸ್ವರೂಪಕ್ಕೆ ತಿರುಗುತ್ತದೆ. ನಾವು ಯಾವುದೇ 144 ಸೆಕ್ಷನ್​ಗೂ ಅಂಜೋದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಬಸವಂತಪ್ಪ ಕಾಂಬಳೆ ಎಚ್ಚರಿಕೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಕಬ್ಬಿನ ಬಾಕಿ ಉಳಿಸಿಕೊಂಡ ಸಚಿವ ಮುರಗೇಶ್​ ನಿರಾಣಿಯನ್ನು ಕೂರಿಸಿಕೊಂಡಿರಿ. ಮುರುಗೇಶ್​​ ನಿರಾಣಿ, ಸಿಎಂ ಬೊಮ್ಮಾಯಿ ಚೇಲಾ ಇದ್ದಂತೆ. ಅವರಿಂದ ಏನು ನಿರೀಕ್ಷಿಸಬೇಕು. ಜನಪ್ರತಿನಿಧಿಗಳ ಒಡೆತನದಲ್ಲಿ ಕಾರ್ಖಾನೆಗಳಿವೆ. ಅಂತವರ ಲಾಭಿಗೆ ಸರಕಾರ ಒಳಗಾಗಿದೆ. ಕೂಡಲೇ 2900 ರೂ ಬೆಲೆ ಘೋಷಣೆಯಾಗುವವರೆಗೂ ಹೋರಾಟ ಕೈ ಬಿಡೋದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Wed, 16 November 22

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ