‘ಆಕ್ಸಿಜನ್ ಸಿಲಿಂಡರ್ ವಿಷಯದಲ್ಲಿ ರಾಜಕೀಯ ಮಾಡ್ತಿರೋದು ಹೇಸಿಗೆ ಅನಿಸಿದೆ; ನಿಮ್ಮ ಕೈಲಾದರೆ ಖಾಲಿ‌ ಸಿಲಿಂಡರ್‌ ಆದ್ರೂ ತನ್ನಿ’

ಇಂತಹ ಸಮಯದಲ್ಲಿ ಆಕ್ಸಿಜನ್ ಸಿಗುವುದೇ ದೊಡ್ಡ ವಿಷಯ. ಅದನ್ನು ಜಿಲ್ಲೆಗೆ ದೊರಕಿಸಿಕೊಡುವುದೇ ನನ್ನ ಉದ್ದೇಶವಾಗಿತ್ತು. ಹೆಚ್ಚುವರಿ ಆಕ್ಸಿಜನ್‌ ಖರ್ಚನ್ನು ನಾನೇ ಭರಿಸುತ್ತಿರುವೆ. ಈ ಸಂಬಂಧ ಇ ಮೇಲ್, ರಸೀದಿಗಳೇ ಸಾಕ್ಷಿ.

‘ಆಕ್ಸಿಜನ್ ಸಿಲಿಂಡರ್ ವಿಷಯದಲ್ಲಿ ರಾಜಕೀಯ ಮಾಡ್ತಿರೋದು ಹೇಸಿಗೆ ಅನಿಸಿದೆ; ನಿಮ್ಮ ಕೈಲಾದರೆ ಖಾಲಿ‌ ಸಿಲಿಂಡರ್‌ ಆದ್ರೂ ತನ್ನಿ’
ಸುಮಲತಾ ಅಂಬರೀಶ್ (ಸಂಗ್ರಹ ಚಿತ್ರ)

ಮಂಡ್ಯ: ಜಿಲ್ಲೆಗೆ ಆಕ್ಸಿಜನ್ ಸಿಲಿಂಡರ್ ಪೂರೈಕೆ ವಿಚಾರವಾಗಿ ಸುಮಲತಾ ಅಂಬರೀಷ್ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾನ್ಯ ಜನರು ಜೀವನ್ಮರಣದ ಹೋರಾಟ ಮಾಡ್ತಿದ್ದಾರೆ. ಈ ಸಂಕಷ್ಟದಲ್ಲೂ ಸಿಲಿಂಡರ್ ವಿಷಯದಲ್ಲಿ ಕೆಲವರು ರಾಜಕೀಯ ಮಾಡ್ತಿರೋದು ಹೇಸಿಗೆ ಅನಿಸಿದೆ. ಈ ಮಾತನ್ನು ಅನಿವಾರ್ಯವಾಗಿ ಹೇಳುತ್ತಿದ್ದೇನೆ ಎಂದು ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್‌ ಆಕ್ರೋಶ ಹೊರಹಾಕಿದ್ದಾರೆ.

ಇಂತಹ ಸಮಯದಲ್ಲಿ ಆಕ್ಸಿಜನ್ ಸಿಗುವುದೇ ದೊಡ್ಡ ವಿಷಯ. ಅದನ್ನು ಜಿಲ್ಲೆಗೆ ದೊರಕಿಸಿಕೊಡುವುದೇ ನನ್ನ ಉದ್ದೇಶವಾಗಿತ್ತು. ಹೆಚ್ಚುವರಿ ಆಕ್ಸಿಜನ್‌ ಖರ್ಚನ್ನು ನಾನೇ ಭರಿಸುತ್ತಿರುವೆ. ಈ ಸಂಬಂಧ ಇ ಮೇಲ್, ರಸೀದಿಗಳೇ ಸಾಕ್ಷಿ. ನೀವು ಯಾವ ರೀತಿ ತಿರುಚಿದರೂ ಇರೋ ಸತ್ಯ ಹಾಗೇ ಉಳಿಯುತ್ತದೆ ಎಂದು ಸುಮಲತಾ ಮಾತನಾಡಿದ್ದಾರೆ.

ಮಂಡ್ಯದ ಜನ ಕೇವಲ ಒಬ್ಬ ಸಂಸದರನ್ನ ಗೆಲ್ಲಿಸಿ ಕಳುಹಿಸಿಲ್ಲ. ಹಲವಾರು ಬಾರಿ ನಿಮ್ಮನ್ನೂ ಗೆಲ್ಲಿಸಿದ್ದಾರೆ. ರಾಜಕೀಯ ಮಾಡುವುದನ್ನು ಬಿಟ್ಟು ಈ ಸಂದರ್ಭದಲ್ಲಿ ನನ್ನ ಜೊತೆ ಕೈ ಜೋಡಿಸಿ. ಸಾಂಕ್ರಾಮಿಕ ರೋಗಕ್ಕೆ ನಾಚಿಕೆಯಾಗುವಂತೆ ಮಾತನಾಡಬೇಡಿ. ನಿಮ್ಮ ಕೈಲಾದರೆ ಖಾಲಿ‌ ಸಿಲಿಂಡರ್‌ಗಳನ್ನಾದ್ರೂ ತನ್ನಿ. ನಿಮಗೂ ನನ್ನ ಸ್ವಂತ ಖರ್ಚಿನಲ್ಲೇ ಆಕ್ಸಿಜನ್ ಕೊಡಿಸುವೆ ಎಂದು ಸುಮಲತಾ ಟೀಕಾಕಾರರಿಗೆ ಪ್ರತ್ಯುತ್ತರ ನೀಡಿದ್ದಾರೆ.

ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಗೆ ಸಂಸದೆ ಸುಮಲತಾ ಅಂಬರೀಷ್​ ಸ್ವಂತ ಹಣ ಖರ್ಚು ಮಾಡಿ 2 ಸಾವಿರ ಲೀಟರ್​ ಸಾಮರ್ಥ್ಯದ 20 ಜಂಬೋ ಸಿಲಿಂಡರ್​ಗಳನ್ನು ಕೊಡಿಸಿದ್ದಾರೆ ಎಂಬುದು ಸತ್ಯ ಎಂದು ರುಜುವಾತಾಗಿದೆ. ಸಂಸದೆ ಆಕ್ಸಿಜನ್ ಸಿಲಿಂಡರ್ ಕೊಡಿಸಿದ್ದಾರೆ ಎಂದು ಸುದ್ದಿಯಾದ ಬೆನ್ನಲ್ಲೇ ಶಾಸಕರಾದ ರವೀಂದ್ರ ಶ್ರೀಕಂಠಯ್ಯ ಹಾಗೂ ಸುರೇಶ್​ ಗೌಡ ಆ ಸುದ್ದಿ ಸುಳ್ಳು ಎಂದಿದ್ದರು. ಸರ್ಕಾರದಿಂದ ಮಂಜೂರಾದ ಆಕ್ಸಿಜನ್​ ಸಿಲಿಂಡರ್​ಗಳನ್ನೇ ಖರೀದಿಸಿ, ಅದನ್ನು ತಾವೇ ಸ್ವಂತ ಹಣದಲ್ಲಿ ನೀಡಿರುವುದಾಗಿ ಸುಮಲತಾ ಪ್ರಚಾರ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಇದೀಗ ಸುಮಲತಾ ಸ್ವತಃ ತಾವು ವೈದ್ಯಕೀಯ ಆಮ್ಲಜನಕ ಪೂರೈಸಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡಲಾಗಿದೆ.

ಮಂಡ್ಯ ಉಪವಿಭಾಗಾಧಿಕಾರಿಗಳ ಕಾರ್ಯಾಲಯ ಸುಮಲತಾ ಅಂಬರೀಷ್ ಆಕ್ಸಿಜನ್ ಸಿಲಿಂಡರ್ ರಿಫಿಲ್ ಮಾಡಿಸಿಕೊಟ್ಟಿರುವ ಬಗ್ಗೆ ಪತ್ರದ ಮುಖೇನ ಸ್ಪಷ್ಟೀಕರಣ ಹಾಗೂ ದೃಢೀಕರಣ ನೀಡಿದೆ. ಕೊವಿಡ್-19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಉಪವಿಭಾಗದ ಮದ್ದೂರು ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿರುವ ಕೊವಿಡಗ ಸೋಂಕಿತರಿಗೆ ಚಿಕಿತ್ಸೆ ನೀಡಲು ಮಾನ್ಯ ಸಂಸದರು ಮಂಡ್ಯ ಲೋಕಸಭಾ ಕ್ಷೇತ್ರ ಇವರು ದಿನಾಂಕ 05.05.2021 ರಿಂದ 06.05.2021ರವರೆಗೆ 18 ಆಕ್ಸಿಜನ್ ಸಿಲಿಂಡರ್​ಗಳನ್ನು ಮತ್ತು 06.05.2021 ರಿಂದ 07.05.2021 ವರೆಗೆ 20 ಆಕ್ಸಿಜನ್ ಸಿಲಿಂಡರ್​ಗಳಿಗೆ ಅಂದರೆ ಒಟ್ಟು 38 ಆಕ್ಸಿಜನ್ ಸಿಲಿಂಡರ್​ಗಳಿಗೆ ರಿಫಿಲಿಂಗ್ ಮಾಡಿಸಿಕೊಟ್ಟಿರುತ್ತಾರೆ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಸುಮಲತಾ ಅಂಬರೀಶ್ ಸ್ವಂತ ಹಣದಿಂದ ಆಕ್ಸಿಜನ್ ಸಿಲಿಂಡರ್ ಪೂರೈಕೆ ಮಾಡಿದ್ದಾರೆ; ಮಂಡ್ಯ ಉಪ ವಿಭಾಗಾಧಿಕಾರಿ ಸ್ಪಷ್ಟನೆ

Covid-19 Karnataka Update: ಕರ್ನಾಟಕದಲ್ಲಿ 47,563 ಜನರಲ್ಲಿ ಕೊರೊನಾ ಸೋಂಕು ಪತ್ತೆ, 482 ಜನರು ನಿಧನ