AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳವಳ್ಳಿ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಇಂದು ಬಾಲಕಿ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ

ಇಂದು ಸಂಸದೆ ಸುಮಲತಾ ಹಾಗೂ ಸಚಿವ ಕೆ.ಗೋಪಾಲಯ್ಯ ನೇತೃತ್ವದಲ್ಲಿ ಚೆಕ್ ಹಸ್ತಾಂತರಿಸಲಾಗುತ್ತೆ. ಬಾಲಕಿ ಮನೆಗೆ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಭೇಟಿ ನೀಡಲಿದ್ದಾರೆ.

ಮಳವಳ್ಳಿ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಇಂದು ಬಾಲಕಿ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ
ಬಾಲಕಿ ಅಂತ್ಯಸಂಸ್ಕಾರದಲ್ಲಿ ಭಾಗಿಯಾದ ಗ್ರಾಮಸ್ಥರು
TV9 Web
| Edited By: ಆಯೇಷಾ ಬಾನು|

Updated on:Oct 19, 2022 | 12:06 PM

Share

ಮಂಡ್ಯ: ಮಳವಳ್ಳಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ. ಸಂಸದೆ ಸುಮಲತಾ(Sumalatha Ambareesh), ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ(Gopalaiah) ನೇತೃತ್ವದಲ್ಲಿ ಇಂದು ಬಾಲಕಿ ಕುಟುಂಬಕ್ಕೆ ₹10 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಲಾಗುತ್ತೆ. ಬಾಲಕಿ ಮನೆಗೆ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಭೇಟಿ ನೀಡಲಿದ್ದಾರೆ.

ಅ.11 ರಂದು ಟ್ಯೂಷನ್ ಗೆ ಹೋಗಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈಯಲಾಗಿತ್ತು. ಈ ಸಂಬಂಧ ಕುಂಭಮೇಳದಲ್ಲಿ ಸಿಎಂ ಬೊಮ್ಮಾಯಿ ಮೃತ ಬಾಲಕಿ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದ್ದರು. ತಕ್ಷಣವೇ ಜಿಲ್ಲಾಡಳಿತ ಖಾತೆಗೆ ಪರಿಹಾರ ನಿಧಿ ವರ್ಗಾವಣೆ ಮಾಡಲಾಗಿತ್ತು. ಇಂದು ಸಂಸದೆ ಸುಮಲತಾ ಹಾಗೂ ಸಚಿವ ಕೆ.ಗೋಪಾಲಯ್ಯ ನೇತೃತ್ವದಲ್ಲಿ ಚೆಕ್ ಹಸ್ತಾಂತರಿಸಲಾಗುತ್ತೆ.

5 ಲಕ್ಷ ರೂ. ನೆರವು ನೀಡಿದ ಶಾಸಕ ಜಮೀರ್ ಅಹ್ಮದ್​

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿರುವ ಮೃತ ಬಾಲಕಿ ನಿವಾಸಕ್ಕೆ ಶಾಸಕ ಜಮೀರ್ ಭೇಟಿ ನೀಡಿ ಮೃತ ಬಾಲಕಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಹಾಗೂ 5 ಲಕ್ಷ ರೂ. ನೆರವು ನೀಡಿದ್ದಾರೆ. ಕೃತ್ಯವೆಸಗಿದ ಪಾಪಿಯನ್ನ ತುಂಡು ತುಂಡಾಗಿ ಕತ್ತರಿಸಬೇಕು. ಮನುಷ್ಯರು ಯಾರೂ ಈ ಕೃತ್ಯ ಮಾಡಲ್ಲ. ಇಂತಹ ಪ್ರಕರಣಗಳಿಗೆ ಪ್ರತ್ಯೇಕ ಕಾನೂನು ಜಾರಿಗೆ ತರಬೇಕು ಎಂದು ಜಮೀರ್ ಆಕ್ರೋಶ ಹೊರ ಹಾಕಿದರು.

ಘಟನೆ ಹಿನ್ನೆಲೆ

ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್​ನಲ್ಲಿ ಬಾಲಕಿ ಶವಪತ್ತೆಯಾಗಿತ್ತು. ಈ ಸಂಬಂಧ ಕೇಸ್ ದಾಖಲಿಸಿಕೊಂಡು ತನಿಖೆಗೆ ಇಳಿದಾಗ ಇದು ರೇಪ್ ಅಂಡ್ ಮರ್ಡರ್​ ಕೇಸ್ ಎಂಬುವುದು ಬಯಾಲಾಯಿತು. ಮಧ್ಯಾಹ್ನ ಟ್ಯೂಷನ್​ಗೆ ತೆರಳಿದ್ದ ಬಾಲಕಿ ಎಷ್ಟು ಸಮಯ ಕಳೆದರೂ ಮನೆಗೆ ಬಾರದ ಹಿನ್ನೆಲೆ ಕುಟುಂಬಸ್ಥರು ಹುಡುಕಾಡಿದ್ದಾರೆ. ಈ ವೇಳೆ ಟ್ಯೂಷನ್ ಹಿಂಭಾಗದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್​​ನಲ್ಲಿ ಬಾಲಕಿ ಶವ ಪತ್ತೆಯಾಗಿತ್ತು. ಸ್ಥಳಕ್ಕೆ ಮಳವಳ್ಳಿ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಮಿಮ್ಸ್ ಶವಾಗಾರಕ್ಕೆ ರವಾನಿಸಿದ್ದರು. ಇದರ ನಡುವೆ ಬಾಲಕಿಯನ್ನ ಅತ್ಯಾಚಾರವೆಸಗಿ ಕೊಲೆಗೈದಿರುವ ಬಗ್ಗೆ ಪೋಷಕರು ಆರೋಪ ಮಾಡಿದ್ದರು. ಸದ್ಯ ಈಗ ಪೊಲೀಸರ ವಿಚಾರಣೆ ವೇಳೆ ಸತ್ಯ ಬಯಲಾಗಿದೆ. ಬಾಲಕಿಯನ್ನು ಕರೆಸಿಕೊಂಡು ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಟ್ಯೂಷನ್ ನಡೆಸುತ್ತಿದ್ದವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:15 am, Wed, 19 October 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು