ಬಿಜೆಪಿ ಟಿಕೆಟ್ ಕೈ ತಪ್ಪಿದಕ್ಕೆ ಸುಮಲತಾ ಮುನಿಸು, ಬಿ.ವೈ. ವಿಜಯೇಂದ್ರ ಮಾತುಕತೆ ಸಾಧ್ಯತೆ

ಸಂಸದೆ ಸುಮಲತಾ ಅಂಬರೀಶ್ ರನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿಯಾಗುವ ಸಾಧ್ಯತೆ ಇದೆ. ಎರಡು ಮೂರು ದಿನಗಳಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ವಿಜಯೇಂದ್ರ ಭೇಟಿ ವೇಳೆ ಮಂಡ್ಯ ಲೋಕಸಭೆ ಕ್ಷೇತ್ರ ಟಿಕೆಟ್ ನೀಡುವಂತೆ ಸುಮಲತಾ ಅವರು ಡಿಮ್ಯಾಂಡ್ ಮಾಡುವ ಸಾಧ್ಯತೆ ಇದೆ.

ಬಿಜೆಪಿ ಟಿಕೆಟ್ ಕೈ ತಪ್ಪಿದಕ್ಕೆ ಸುಮಲತಾ ಮುನಿಸು, ಬಿ.ವೈ. ವಿಜಯೇಂದ್ರ ಮಾತುಕತೆ ಸಾಧ್ಯತೆ
ಸಂಸದೆ ಸುಮಲತಾ ಅಂಬರೀಶ್​
Follow us
ಪ್ರಶಾಂತ್​ ಬಿ.
| Updated By: ಆಯೇಷಾ ಬಾನು

Updated on: Jan 13, 2024 | 9:26 AM

ಮಂಡ್ಯ, ಜ.13: ಲೋಕಸಭಾ ಚುನಾವಣೆಗೆ (Lok Sabha Election) ಕೆಲವು ತಿಂಗಳು ಮಾತ್ರ ಬಾಕಿ ಇದೆ. ಸದ್ಯ ಮಂಡ್ಯ ಲೋಕಸಭಾ ಕ್ಷೇತ್ರ ತೀವ್ರ ಕುತೂಹಲ ಕೆರಳಿಸಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಮಂಡ್ಯ ಟಿಕೆಟ್ ಜೆಡಿಎಸ್​ಗೆ ಹೋಗಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರಿಗೆ ಬಿಜೆಪಿಯಿಂದ ಟಿಕೆಟ್ ಸಿಗುವುದು ಡೌಟ್ ಆಗಿದೆ. ಹೀಗಾಗಿ ಅವರು ಪತ್ತೆ ಪಕ್ಷೇತರವಾಗಿ ಸ್ವರ್ಧೆ ಮಾಡಲು ಮುಂದಾಗಿದ್ದಾರೆ. ಸಂಸದೆಯಾದ ನಂತರ ಸುಮಲತಾ ಅವರು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಆದರೆ ಈಗ ಟಿಕೆಟ್ ಸಿಗದಿರೋ ಹಿನ್ನೆಲೆ ಬಿಜೆಪಿ ಮೇಲೆ ಅಸಮಾಧಾನಗೊಂಡಿದ್ದಾರೆ.

ಸಂಸದೆ ಸುಮಲತಾ ಅಂಬರೀಶ್ ರನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿಯಾಗುವ ಸಾಧ್ಯತೆ ಇದೆ. ಎರಡು ಮೂರು ದಿನಗಳಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ವಿಜಯೇಂದ್ರ ಭೇಟಿ ವೇಳೆ ಮಂಡ್ಯ ಲೋಕಸಭೆ ಕ್ಷೇತ್ರ ಟಿಕೆಟ್ ನೀಡುವಂತೆ ಸುಮಲತಾ ಅವರು ಡಿಮ್ಯಾಂಡ್ ಮಾಡುವ ಸಾಧ್ಯತೆ ಇದೆ. ಈಗಾಗಲೇ ಬಿಜೆಪಿ ಜೆಡಿಎಸ್ ಮೈತ್ರಿಯಾಗಿದ್ದು ಬಹುತೇಕ ಜೆಡಿಎಸ್ ಗೆ ಮಂಡ್ಯ ಕ್ಷೇತ್ರ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಸುಮಲತಾ ಜೊತೆ ಚರ್ಚೆ ನಡೆಸಿ ಬಿಜೆಪಿ ಜೊತೆಗೆ ಇರುವಂತೆ ಮಾತುಕತೆ ನಡೆಸಲಿದ್ದಾರೆ.

ಕುತೂಹಲ ಮೂಡಿಸಿದ ಸುಮಲತಾ ನಡೆ

ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷೇತರವಾಗಿ ಸ್ವರ್ಧೆ ಮಾಡಲು ಸುಮಲತಾ ಅವರು ಚಿಂತನೆ ನಡೆಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಗೆ ಸೆಳೆಯಲು ಕಾಂಗ್ರೆಸ್ ಹೈಕಮಾಂಡ್ ಮಾಸ್ಟರ್ ಪ್ಲ್ಯಾನ್ ಮಾಡಿದೆ. ಮಂಡ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಸೂಕ್ತ ಅಭ್ಯರ್ಥಿ ಸಿಗದ ಹಿನ್ನೆಲೆ ಸುಮಲತಾರನ್ನೆ ಕಾಂಗ್ರೆಸ್ ನಿಂದ ಕಣಕ್ಕೆ ಇಳಿಸಲು ಪ್ಲ್ಯಾನ್ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಸುಮಲತಾರ ಮೇಲೆ ಒಲವು ತೋರಿಸಿದ್ದಾರೆ. ಪಕ್ಷೇತರಗಿಂತ ಕಾಂಗ್ರೆಸ್ ನಿಂದ ಸ್ವರ್ಧೆ ಮಾಡಿದ್ರೆ ಗೆಲುವು ಸುಲಭ ಎನ್ನುವ ಲೆಕ್ಕಾಚಾರ ನಡೆಯುತ್ತಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ: ಬಿಜೆಪಿಯ ಕ್ಲಸ್ಟರ್‌ ಮಟ್ಟದ ಸಭೆ ಪೂರ್ಣ, ಈಗ ವಿಜಯೇಂದ್ರ ಚಿತ್ತ ದೆಹಲಿಯತ್ತ

ಮಂಡ್ಯ ಕ್ಷೇತ್ರ ಗೆಲ್ಲಲೇಬೇಕೆಂದು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕಾಂಗ್ರೆಸ್ ಮಂಡ್ಯ ವಶಪಡಿಸಿಕೊಳ್ಳಲು ಸುಮಲತಾರನ್ನು ಅಭ್ಯರ್ಥಿ ಮಾಡಲು ಸಿಎಂ ಸಿದ್ದರಾಮಯ್ಯ ಆ್ಯಂಡ್ ಟೀಂ ಒಲವು ತೋರಿಸಿದೆ. ಆ ಮೂಲಕ ಒಂದೇ ಕಲ್ಲಲ್ಲಿ ಎರಡು ಹಕ್ಕಿ ಹೊಡೆಯಲು ಸಿಎಂ ಪ್ಲಾನ್ ಮಾಡಿದ್ದಾರೆ. ಸುಮಲತಾ ಕರೆತಂದರೆ ದಳಪತಿಗಳು‌ ಹಾಗೂ ಬಿಜೆಪಿಗೆ ಕೌಂಟರ್ ಹಾಗೂ ಕಾಂಗ್ರೆಸ್ ಶಕ್ತಿ ಪ್ರದರ್ಶಿಸುವ ಅವಕಾಶ ಸಿಗಲಿದೆ. ಆದರೆ ಸುಮಲತಾರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲು ಸ್ಥಳೀಯವಾಗಿ ವಿರೋಧ ವ್ಯಕ್ತವಾಗಿದೆ. ಮತ್ತೊಂದೆಡೆ ಕೈ ಪಡೆ ಸೇರಲು ಸೂಕ್ತ ಸಮಯಕ್ಕೆ ಮಂಡ್ಯ ಸಂಸದೆ ಸುಮಲತಾ ಕಾಯುತ್ತಿದ್ದಾರೆ.

ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ರೆ ಗೆಲುವು ಕಷ್ಟ. ಕಾಂಗ್ರೆಸ್ ನಿಂದಲೇ ಸ್ಪರ್ಧೆ ಮಾಡುವುದು ಸೂಕ್ತ ಎಂಬ ಸಲಹೆಯನ್ನು ಸುಮಲತಾ ಆಪ್ತ ಪಡೆ ನೀಡಿದೆ. ಸದ್ಯ ಕಾಂಗ್ರೆಸ್​ಗೆ ಸುಮಲತಾ ಅನಿವಾರ್ಯ, ಸುಮಲತಾಗೆ ಕಾಂಗ್ರೆಸ್ ಅನಿವಾರ್ಯ ಎಂಬ ಪರಿಸ್ಥಿತಿ ಎದುರಾಗಿದೆ. ಸ್ಥಳೀಯ ನಾಯಕರನ್ನ ವಿಶ್ವಾಸ ತೆಗೆದುಕೊಂಡು ಸೂಕ್ತ ನಿರ್ಧಾರಕ್ಕೆ ಚಿಂತನೆ ನಡೆದಿದ್ದು ಸುಮಲತಾ ಜೊತೆ ಮಾತುಕತೆ ನಡೆಸಲು ಸಿಎಂ ಮುಂದಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್