ಮಂಡ್ಯದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲಾಗುವುದು, ಆದರೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ: ಸಂಸದೆ ಸುಮಲತಾ ಅಳಲು

Sumalatha Ambareesh: ಮಿಮ್ಸ್ ಆಸ್ಪತ್ರೆ ಹೆರಿಗೆ ವಿಭಾಗದಲ್ಲಿ ಜನ ಜಂಗುಳಿಯಾಗಿದೆ. ಸ್ಥಳಾವಕಾಶದ ಕೊರತೆಯಿಂದ ಮಂಡ್ಯದ ತಮಿಳು ಕಾಲನಿಯನ್ನು ಬೇರೆ ಕಡೆಗೆ ವರ್ಗಾಹಿಸಿ, ಆ ಜಾಗದಲ್ಲಿ ಸುಸಜ್ಜಿತವಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲಾಗುವುದು. ಆದರೆ ಜಿಲ್ಲೆಯಲ್ಲಿ ಕೆಲವು ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಸಮರ್ಪಕವಾಗಿ ಅವರುಗಳು ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ಸಂಸದೆ ಸುಮಲತಾ ಅಳಲು ತೋಡಿಕೊಂಡಿದ್ದಾರೆ.

ಮಂಡ್ಯದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲಾಗುವುದು,  ಆದರೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ: ಸಂಸದೆ ಸುಮಲತಾ ಅಳಲು
ಮಂಡ್ಯದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲಾಗುವುದು, ಆದರೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ: ಸಂಸದೆ ಸುಮಲತಾ ಅಳಲು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Mar 14, 2022 | 5:16 PM

ಮಂಡ್ಯ: ನಕಲಿ ರಸಗೊಬ್ಬರ ಮಾರಾಟ ವಿಚಾರ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಅವರು ಸೂಕ್ತ ಮಾಹಿತಿ ನೀಡುತ್ತಿಲ್ಲ. ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರುತ್ತೇನೆ. ನಕಲಿ ರಸಗೊಬ್ಬರ ದಂಧೆಗೆ ಕಡಿವಾಣ ಹಾಕಲಾಗುವುದು ಎಂದು ಮಂಡ್ಯದ ಮದ್ದೂರಿನಲ್ಲಿ ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ. ಇನ್ನು ಮುಂದಿನ ಚುನಾವಣೆಯಲ್ಲಿ ತಮ್ಮ ಪುತ್ರ ಅಭಿಷೇಕ್ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಸುಮಲತಾ ಅಭಿಷೇಕ್‌ಗೆ ಎಲ್ಲಾ ಪಕ್ಷದವರು ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡ ಹಾಕುತ್ತಿದ್ದಾರೆ. ಅವನು ಚಿತ್ರರಂಗದಲ್ಲಿ ಇರುವುದರಿಂದ ಚುನಾವಣೆ ಬೇಡ ಅಂತಿದೆ. ಆದರೂ ರಾಜಕೀಯ ಪ್ರವೇಶ ಮಾಡುವ ಸಂಬಂಧ ಅಂತಿಮ ನಿರ್ಧಾರ ಅವನಿಗೇ ಬಿಟ್ಟಿದ್ದೇನೆ ಎಂದರು. ನಾನು ರಾಜ್ಯ ರಾಜಕಾರಣಕ್ಕೆ ಬರುವ ಕುರಿತು ಯಾವುದೇ ತೀರ್ಮಾನ ಮಾಡಿಲ್ಲ ಎಂದೂ ಇದೇ ವೇಳೆ ಅವರು (Mandya MP Sumalatha Ambareesh) ಹೇಳಿದರು.

ಮಿಮ್ಸ್ ಆಸ್ಪತ್ರೆ ಹೆರಿಗೆ ವಿಭಾಗದಲ್ಲಿ ಜನ ಜಂಗುಳಿಯಾಗಿದೆ. ಸ್ಥಳಾವಕಾಶದ ಕೊರತೆಯಿಂದ ಮಂಡ್ಯದ ತಮಿಳು ಕಾಲನಿಯನ್ನು ಬೇರೆ ಕಡೆಗೆ ವರ್ಗಾಹಿಸಿ, ಆ ಜಾಗದಲ್ಲಿ ಸುಸಜ್ಜಿತವಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲಾಗುವುದು. ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್‌ರವರ ಜೊತೆ ಮಾತನಾಡಿದ್ದೇನೆ. ಆದರೆ ಜಿಲ್ಲೆಯಲ್ಲಿ ಕೆಲವು ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಸಮರ್ಪಕವಾಗಿ ಅವರುಗಳು ಕರ್ತವ್ಯ ನಿರ್ವಹಿಸುತ್ತಿಲ್ಲ. ಈ ಸಂಬಂಧ ಉಸ್ತುವಾರಿ ಸಚಿವರು ಹಾಗೂ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ ಎಂದೂ ಸಂಸದೆ ಸುಮಲತಾ ಹೇಳಿದರು.

ಚಾಮರಾಜನಗರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕೆಎಸ್ಆರ್ಟಿಸಿ ಬಸ್: ಇಬ್ಬರ ಸಾವು, ಐವರಿಗೆ ಗಾಯ ಚಾಮರಾಜನಗರ: ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಕೆಳಕ್ಕೆ ಬಿದ್ದಿದ್ದು ಇಬ್ಬರು ಮೃತಪಟ್ಟಿದ್ದಾರೆ. ಹಾಗೂ ಐದು ಮಂದಿ ಸ್ಥಿತಿ ಗಂಭೀರವಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕುಡುವಾಳೆ ಬಳಿ ನಡೆದಿದೆ. ಕೊಳ್ಳೇಗಾಲದಿಂದ ಪಿ.ಜಿ.ಪಾಳ್ಯಕ್ಕೆ ಹೋಗುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ.

ಸೇತುವೆ ಕೆಳಗಿನ ಕಾಲುವೆಗೆ ಬಸ್ ಬಿದ್ದಿದೆ. ಕಾಲುವೆಯಲ್ಲಿನ ನೀರಿಗೆ ಬಸ್ ಬಿದ್ದ ಕಾರಣ ಸದ್ಯ ಸ್ಥಳೀಯರು ಪ್ರಯಾಣಿಕರ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಮಾಳಿಗನತ್ತ ಗ್ರಾಮದ ಶಿವಮ್ಮ(70), ಪಿ.ಜಿ.ಪಾಳ್ಯದ ರಮೇಶ್(28) ಮೃತಪಟ್ಟಿದ್ದಾರೆ. ಶಿವಮ್ಮ ಸ್ಥಳದಲ್ಲೇ ಮೃತಪಟ್ಟಿದ್ದು, ರಮೇಶ್ ಕಾಮಗೆರೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

Also Read: ಸರ್ಕಾರಿ ಬಂಗ್ಲೆ ಇರಲಿಲ್ಲ, ಅದಕ್ಕೇ ರೆಸ್ಟ್ ಮಾಡಲು ತಾಜ್ ಹೋಟೆಲ್​ಗೆ ಹೋಗ್ತಿದ್ದೆ, ನನ್ನದು ತೆರೆದ ಪುಸ್ತಕ -ಕುಮಾರಸ್ವಾಮಿ ತಿರುಗೇಟು

Also Read: ಶಾಸಕನಾಗಿ 20X30 ಅಳತೆಯ ಸೈಟ್‌ ಉಚಿತವಾಗಿ ಮೃತ ಅಶ್ವಿನ್​ ಕುಟುಂಬಸ್ಥರಿಗೆ ನೀಡುತ್ತೇನೆ: ಎಸ್​ಆರ್​ವಿಶ್ವನಾಥ್​

Published On - 5:10 pm, Mon, 14 March 22