AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡ, ಕುಮಾರಸ್ವಾಮಿ ಬಗ್ಗೆ ನಾಲಿಗೆ ಹರಿಬಿಟ್ರೆ ಕತ್ತರಿಸುತ್ತೇವೆ: ಚಲುವರಾಯಸ್ವಾಮಿಗೆ ಸುರೇಶ್ ಗೌಡ ಎಚ್ಚರಿಕೆ

ಡಿಕೆ ಶಿವಕುಮಾರ್​ ಸಿಎಂ ಆಗುತ್ತಿರುವುದರಿಂದ ದೇವೇಗೌಡರ ಕುಟುಂಬಕ್ಕೆ ಸೂತಕ ಎಂದಿರುವ ಸಚಿವ ಚಲುವರಾಯಸ್ವಾಮಿ ಹೇಳಿಕೆ ಸದ್ಯ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಜೆಡಿಎಸ್​ ನಾಯಕರು ಕೆಂಡಾಮಂಡಲರಾಗಿದ್ದಾರೆ. ಅದರಲ್ಲೂ ಜೆಡಿಎಸ್​ನ ಮಾಜಿ ಶಾಸಕ ಸುರೇಶ್ ಗೌಡ ಸಚಿವ ಚಲುವರಾಯಸ್ವಾಮಿ ವಿರುದ್ಧ ನೇರ ವಾಗ್ದಾಳಿ ಮಾಡಿದ್ದಾರೆ.

ದೇವೇಗೌಡ, ಕುಮಾರಸ್ವಾಮಿ ಬಗ್ಗೆ ನಾಲಿಗೆ ಹರಿಬಿಟ್ರೆ ಕತ್ತರಿಸುತ್ತೇವೆ: ಚಲುವರಾಯಸ್ವಾಮಿಗೆ ಸುರೇಶ್ ಗೌಡ ಎಚ್ಚರಿಕೆ
ಹೆಚ್​ಡಿ ದೇವೇಗೌಡರ, ಎನ್.ಚಲುವರಾಯಸ್ವಾಮಿ, ಸುರೇಶ್ ಗೌಡ
ದಿಲೀಪ್​, ಚೌಡಹಳ್ಳಿ
| Edited By: |

Updated on: Jun 01, 2026 | 4:24 PM

Share

ಮಂಡ್ಯ, ಜೂನ್​ 01: ಸಚಿವ ಚಲುವರಾಯಸ್ವಾಮಿ (Chaluvaraya Swamy) ಅಧಿಕಾರ, ಹಣ, ಮದದಿಂದ ತಪ್ಪು ಮಾಡುತ್ತಿದ್ದಾರೆ. ಅವರು ಯಾರ ಸಾವನ್ನು ಬಯಸುತ್ತಿದ್ದಾರೆ? ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರು (HD Deve Gowda) ಮತ್ತು ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಬಗ್ಗೆ ನಾಲಿಗೆ ಹರಿಬಿಟ್ಟರೆ ಕತ್ತರಿಸುತ್ತೇವೆ ಎಂದು ಸಚಿವ ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್​​ನ ಮಾಜಿ ಶಾಸಕ ಸುರೇಶ್ ಗೌಡ ತೀವ್ರ ವಾಗ್ದಾಳಿ ಮಾಡಿದ್ದಾರೆ.

ಮುಖ್ಯಾಂಶಗಳು

  • ಡಿಕೆ ಶಿವಕುಮಾರ್​ ಸಿಎಂ ಆಗುತ್ತಿರುವುದರಿಂದ ಹೆಚ್​ಡಿಡಿ ಮನೆಯಲ್ಲಿ ಸೂತಕದ ಛಾಯೆ ಹೇಳಿಕೆ ವಿವಾದ
  • ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್​ ನಾಯಕರು ಕೆಂಡಾಮಂಡಲ
  • ಜೆಡಿಎಸ್​ನ ಮಾಜಿ ಶಾಸಕ ಸುರೇಶ್ ಗೌಡ ನೇರ ವಾಗ್ದಾಳಿ

ಮಾಜಿ ಶಾಸಕ ಸುರೇಶ್ ಗೌಡ ಹೇಳಿದ್ದಿಷ್ಟು

ಡಿಕೆ ಶಿವಕುಮಾರ್​​ ಸಿಎಂ ಆಗುತ್ತಿರುವುದರಿಂದ ದೇವೇಗೌಡರ ಮನೆಯಲ್ಲಿ ಸೂತಕ ಎಂಬ‌ ಸಚಿವ ಚಲುವರಾಯಸ್ವಾಮಿ ಹೇಳಿಕೆ‌ ವಿಚಾರ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್​ ನಾಯಕರು ಕೆಂಡಾಮಂಡಲರಾಗಿದ್ದಾರೆ. ಈ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದವರು ಮಾಜಿ ಶಾಸಕ ಸುರೇಶ್ ಗೌಡ ತಿರುಗೇಟು ನೀಡಿದ್ದಾರೆ.

ಚಲುವರಾಯಸ್ವಾಮಿ ಯಾರ ಸಾವು ಬಯಸುತ್ತಿದ್ದಾರೆ?

ಕಾಂಗ್ರೆಸ್ ಪಕ್ಷವನ್ನು ರಾಜ್ಯದ ಜನ ಆಯ್ಕೆ ಮಾಡಿದ್ದಾರೆ. 5 ವರ್ಷ ಪೂರ್ಣಗೊಳಿಸಬೇಕು. ಅಭಿವೃದ್ಧಿ ಕುಂಠಿತದ ಬಗ್ಗೆ ರಾಜ್ಯದ ಜನತೆಗೆ ಗೊತ್ತಿದೆ. ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಡಿಕೆ ಶಿವಕುಮಾರ್​ ಸಿಎಂ ಆಗಿದ್ದಾರೆ. ಕೆಲವು ಕಿಡಿಗೇಡಿಗಳು ಯಾರನ್ನೋ ಮೆಚ್ಚಿಸಲು ನಮ್ಮ ನಾಯಕರ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ. ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ ಬಂದಿದೆ ಅಂತ ಹೇಳುತ್ತಾರೆ. ಸಾವಿನ ಸಂದರ್ಭದಲ್ಲಿ ಮಾತ್ರ ಸೂತಕ ಬರುವುದು. ಚಲುವರಾಯಸ್ವಾಮಿ ಯಾರ ಸಾವನ್ನು ಬಯಸುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದೇವೇಗೌಡರ ಭೇಟಿ ಬಳಿಕ ಜಿಟಿಡಿ ಸ್ಫೋಟಕ ಹೇಳಿಕೆ: ಎಲ್ಲಾ ಅಂತೆ-ಕಂತೆಗಳಿಗೆ ತೆರೆ!

ಚಲುವರಾಯಸ್ವಾಮಿಗೆ ಯಾವ ರೀತಿ ಬುದ್ಧಿ ಹೇಳಬೇಕು. ದೇವೇಗೌಡರ ಇತಿಹಾಸ ನಿಮಗೆ ಏನು ಗೊತ್ತು. ಕನ್ನಡನಾಡಿನಲ್ಲಿ ಪ್ರಧಾನಿಯಾದ ಒಬ್ಬ ಕನ್ನಡಿಗ ಅಂದರೆ ದೇವೇಗೌಡರು. ಎಸ್ ಎಂ ಕೃಷ್ಣ ಅವರನ್ನು ಸಿಎಂ ಮಾಡಿದ್ದು ಯಾರು? ಇವಾಗ ಡಿಕೆ ಶಿವಕುಮಾರ್​ ಮುಖ್ಯಮಂತ್ರಿ ಆದರೆ ದೇವೇಗೌಡರಿಗೆ ಹೊಟ್ಟೆ ಉರಿನಾ? ಬಿಜೆಪಿ ಜೊತೆ ಎನ್​​ಡಿಎ ಸರ್ಕಾರ ಇದೆ. ಕಾಂಗ್ರೆಸ್ ಪಕ್ಷದಿಂದ ಯಾರೇ ಸಿಎಂ ಆದರೂ ನಮ್ಮ ವಿರೋಧವೆ. ವಿರೋಧ ಪಕ್ಷದ ಕೆಲಸ ವಿರೋಧ ಮಾಡುವುದೆ ಎಂದಿದ್ದಾರೆ.

ಮಾಟ- ಮಂತ್ರ ಮಾಡಿಸುವುದರಲ್ಲಿ ಎತ್ತಿದ ಕೈ

ಅಧಿಕಾರ ಶಾಶ್ವತ ಅಲ್ಲ, ಚುನಾವಣೆ ಬುರುತ್ತೆ ಬುದ್ದಿ ಕಲಿಸುತ್ತಾರೆ. ದೇವೇಗೌಡರ ಬಗ್ಗೆ ಮಾತನಾಡಿ ಲೀಡರ್ ಆಗುತ್ತೇನೆ ಎನ್ನುವ ಭ್ರಮೆಯಲ್ಲಿದ್ದಾರೆ. ನಿನ್ನ ಬಳಿ ಅಧಿಕಾರ ಇರಬಹುದು ಜನರ ಶಕ್ತಿ ನಮ್ಮ ಬಳಿ ಇದೆ. ಚಲುವರಾಯಸ್ವಾಮಿಗೆ ಯಾರ ಮನೆಯಲ್ಲಿ ಸಾಯುತ್ತಾರೆ ಎನ್ನುವುದು ಮುನ್ಸೂಚನೆ ಗೊತ್ತಾಗುತ್ತೆ. ಮಾಟ- ಮಂತ್ರ ಮಾಡಿಸುವುದರಲ್ಲಿ ಎತ್ತಿದ ಕೈ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಪತ್ನಿಗೆ ರಾಜ್ಯಸಭಾ ಆಫರ್ ನೀಡಿದ್ದ ರಾಹುಲ್ ಗಾಂಧಿ: ಬೇಡವೆಂದಿದ್ದ ಮಾಜಿ ಸಿಎಂ ಇಟ್ಟಿದ್ದು ಬೇರೆಯೇ ಬೇಡಿಕೆ!

ಸುರೇಶ್ ಗೌಡ ಜೀವನದಲ್ಲಿ ಅಡ್ಜಸ್ಟ್ಮೆಂಟ್ ರಾಜಕೀಯ ಇಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದ ಲೂಟಿ ಮಾಡುತ್ತಿದೆ. ದೇವೇಗೌಡರ ಮನೆಗೆ ಏನೋ ಮಾಡಿಸಿದ್ದಾರೆ, ನನಗೂ ಮಾಟ-ಮಂತ್ರ ಮಾಡಿಸಿದ್ದಾರೆ ಎಂಬುವುದು ನಾನು ನಂಬಲ್ಲ. ನಾವು ನಮ್ಮ ಶತ್ರುಗಳಿಗೂ ಕೆಟ್ಟದ್ದು ಬಯಸಲ್ಲ ಎಂದು ಮಾಜಿ ಶಾಸಕ ಸುರೇಶ್ ಗೌಡ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ