ಮಂಡ್ಯದ ದಂಡಿನ ಮಾರಮ್ಮ ದೇವಸ್ಥಾನದಲ್ಲಿ ಮತ್ತೆ ಕಳ್ಳತನ, ಗುಂಡಿಯನ್ನೇ ಹೊತ್ತೊಯ್ದ ಖದೀಮರು

ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಶಕ್ತಿದೇವತೆ ದಂಡಿನ ಮಾರಮ್ಮ ದೇವಸ್ಥಾನದಲ್ಲಿ ತಡರಾತ್ರಿ ಕಳ್ಳತನ ನಡೆದಿದ್ದು ಹುಂಡಿಯಲ್ಲಿದ್ದ ಹಣ ದೋಚಿ ಹುಂಡಿ ಬಿಸಾಕಿ ಕಳ್ಳರು ಪರಾರಿಯಾಗಿದ್ದಾರೆ. ಈ ದೇವಸ್ಥಾನ ಮಳವಳ್ಳಿಯ- ಬೆಂಗಳೂರು ರಸ್ತೆಯಲ್ಲಿ ಬರುತ್ತದೆ. ತಡರಾತ್ರಿ ದೇವಸ್ಥಾನದ ಬೀಗ ಹೊಡೆದು ಒಳನುಗ್ಗಿ ಹುಂಡಿ ತೆಗೆದುಕೊಂಡು ಪರಾರಿಯಾಗಿದ್ದಾರೆ.

ಮಂಡ್ಯದ ದಂಡಿನ ಮಾರಮ್ಮ ದೇವಸ್ಥಾನದಲ್ಲಿ ಮತ್ತೆ ಕಳ್ಳತನ, ಗುಂಡಿಯನ್ನೇ ಹೊತ್ತೊಯ್ದ ಖದೀಮರು
ದೇವಸ್ಥಾನದಲ್ಲಿ ಹುಂಡಿ ಕಳ್ಳತನ
Follow us
TV9 Web
| Updated By: ಆಯೇಷಾ ಬಾನು

Updated on: Nov 27, 2023 | 11:49 AM

ಮಂಡ್ಯ, ನ.27: ಜಿಲ್ಲೆಯ ದೇವಸ್ಥಾನದಲ್ಲಿ (Temple Theft) ಮತ್ತೆ ಕಳ್ಳತನ ನಡೆದಿದೆ. ದೇವಸ್ಥಾನದ ಬೀಗ ಹೊಡೆದು ಕಳ್ಳರು ಹುಂಡಿ ಹೊತ್ತೊಯ್ದಿದ್ದಾರೆ. ಒಂದೇ ತಿಂಗಳಲ್ಲಿ ಒಂದೇ ದೇವಸ್ಥಾನದಲ್ಲಿ ಎರಡು ಬಾರಿ ಕಳ್ಳತನ ನಡೆದಿದೆ. ಮಂಡ್ಯ (Mandya) ಜಿಲ್ಲೆ ಮಳವಳ್ಳಿ ಪಟ್ಟಣದ ಶಕ್ತಿದೇವತೆ ದಂಡಿನ ಮಾರಮ್ಮ ದೇವಸ್ಥಾನದಲ್ಲಿ ತಡರಾತ್ರಿ ಕಳ್ಳತನ ನಡೆದಿದ್ದು ಹುಂಡಿಯಲ್ಲಿದ್ದ ಹಣ ದೋಚಿ ಹುಂಡಿ ಬಿಸಾಕಿ ಕಳ್ಳರು ಪರಾರಿಯಾಗಿದ್ದಾರೆ. ಈ ದೇವಸ್ಥಾನ ಮಳವಳ್ಳಿಯ- ಬೆಂಗಳೂರು ರಸ್ತೆಯಲ್ಲಿ ಬರುತ್ತದೆ.

ತಡರಾತ್ರಿ ದೇವಸ್ಥಾನದ ಬೀಗ ಹೊಡೆದು ಒಳನುಗ್ಗಿ ಹುಂಡಿ ತೆಗೆದುಕೊಂಡು ಪರಾರಿಯಾಗಿದ್ದಾರೆ. ಮೊದಲಿಗೆ ಬೀಗ ಹೊಡೆದು ದೇವಸ್ಥಾನಕ್ಕೆ ನುಗ್ಗಿದ ಖದೀಮರು ದೇವಸ್ಥಾನದ ಫ್ಯೂಸ್ ಕಿತ್ತು, ದೊಣ್ಣೆಯಲ್ಲಿ ಬಲ್ಪ್ ಗಳನ್ನ ಹೊಡೆದು ಕಳ್ಳತನ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆರ್​ಟಿ ನಗರ ಪೊಲೀಸರಿಂದ ನಾಲ್ವರು ಅರೆಸ್ಟ್

ಆರ್ ಟಿ ನಗರ ಡಿಜೆ ಹಳ್ಳಿಯಲ್ಲಿ ರೌಡಿಗಳ ಪುಂಡಾಟ ಪ್ರಕರಣ ಸಂಬಂಧ ಆರ್ ಟಿ ನಗರ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ಟೀ ಸ್ಟಾಲ್, ಅಂಗಡಿಗಳು, ಪಾನ್ ಶಾಪ್​ನಲ್ಲಿ ತಿಂಗಳಿಗೆ ಇಂತಿಷ್ಟು ಎಂದು ಹಫ್ತಾ ವಸೂಲಿಗೆ ಮುಂದಾಗಿದ್ದ ರೌಡಿಗಳನ್ನು ಅರೆಸ್ಟ್ ಮಾಡಲಾಗಿದೆ.ಬೋಡ್ಕಾ ಇಮ್ರಾನ್ ಅಂಡ್ ಗ್ಯಾಂಗ್ ಹಫ್ತಾ ವಸೂಲಿ ಮಾಡುತ್ತಿತ್ತು.

ಬೋಡ್ಕಾ ಇಮ್ರಾನ್ ಅಂಡ್ ಗ್ಯಾಂಗ್ ರಸ್ತೆಯಲ್ಲಿ ನಿಂತಿದ್ದ ಕಾರುಗಳ ಮೇಲೆ ಲಾಂಗ್ ಬೀಸಿತ್ತು. ಬಳಿಕ ಅಂಗಡಿ ಮಾಲಿಕರಿಗೆ ಹಣ ನೀಡುವಂತೆ ಬೆದರಿಕೆ ಹಾಕಿದ್ರು. ಅಂಗಡಿ ಮುಂಗಟ್ಟುಗಳ ಮುಂದೆ ಲಾಂಗು ಹಿಡಿದು ಗಲಾಟೆ ಮಾಡಿದ್ದರು. ಘಟನೆ ಬಳಿಕ ಆರ್ ಟಿ ನಗರ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ಇಮ್ರಾನ್, ಮಾಜ್, ಮೋಹನ್ ಸೇರಿ ನಾಲ್ವರನ್ನು ಅರೆಸ್ಟ್ ಮಾಡಲಾಗಿದೆ. ಈ ಹಿಂದೆ ಹಲವಾರು ಕೇಸ್ ನಲ್ಲಿ ಈ ಆರೋಪಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ: ರಾಜ್ಯದಲ್ಲಿ ಭ್ರೂಣ ಹತ್ಯೆ ಪತ್ತೆ: ಮೈಸೂರಿನಲ್ಲಿ ಆರೋಗ್ಯ ಇಲಾಖೆ ಅಲರ್ಟ್, ಟಾಸ್ಕ್ ಪೋರ್ಸ್ ರಚನೆ

ಬಾಮೈದನಿಗೆ ಚಾಕು ಇರಿದ ಭಾವ

ಬಾಮೈದನಿಗೆ ವ್ಯಕ್ತಿಯೊಬ್ಬ ಚಾಕು ಇರಿದಿದ್ದಾನೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲ್ಲೂಕಿನ ಸಿಡಿಹೊಸಕೋಟೆ ಯಲ್ಲಿ ಘಟನೆ ನಡೆದಿದೆ. ಪುನೀತ್ ರಾಜ್​​​​​​ನಿಗೆ ಮಣಿಕಂಠ ಎಂಬುವವನು ಚಾಕು ಇರಿದಿದ್ದಾನೆ. ಆಂಧ್ರಪ್ರದೇಶದ ಪನ್ನೂರು ಮೂಲದ ಮಣಿಕಂಠ, ಕಳೆದ ಫೆಬ್ರವರಿಯಲ್ಲಿ ಶೇತಾಳನ್ನ ಮದ್ವೆ ಆಗಿದ್ದ. ಮದ್ವೆಯಾದ 20 ದಿನಗಳಲ್ಲಿ ಶ್ವೇತಾ ತವರು ಮನೆ ಸೇರಿದ್ಲು. ಗಂಡನ ವರ್ತನೆ ಸರಿ ಇಲ್ಲ ಡೈವೊರ್ಸ್ ನೋಟಿಸ್ ಕಳುಹಿಸಿದ್ಲು. ಇದ್ರಿಂದ ರೊಚ್ಚಿಗೆದ್ದ ಮಣಿಕಂಠನೂ ಪತ್ನಿಯ ತಮ್ಮ ಪುನೀತ್ ರಾಜ್ ಮೇಲೆ ದಾಳಿ ಮಾಡಿ, ಚಾಕು ಇರಿದಿದ್ದಾನೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ