AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರಗೋಡು ಹನುಮ ಧ್ವಜ ವಿವಾದ: ಪಂಚಾಯ್ತಿ ಪಿಡಿಓ ತಲೆದಂಡ, ಇಲ್ಲಿವೆ 5 ಕಾರಣಗಳು

Mandya saffron flag Row: ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದ ಧ್ವಜ ವಿವಾದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಗ್ರಾಮದಲ್ಲಿ ಬೂದಿಮುಚ್ಚಿದ ಕೆಂಡದಂತಿದೆ. ಇನ್ನು ಘಟನೆ ಸಂಬಂಧ ಕೆರಗೋಡು ಗ್ರಾಮ ಪಂಚಾಯಿತಿ ಪಿಡಿಓ ತಲೆದಂಡವಾಗಿದೆ. ಪಿಡಿಓ ಅಮಾನತಿಗೆ ಐದು ಕಾರಣಗಳನ್ನು ಸಹ ನೀಡಲಾಗಿದೆ.

ಕೆರಗೋಡು ಹನುಮ ಧ್ವಜ ವಿವಾದ: ಪಂಚಾಯ್ತಿ ಪಿಡಿಓ ತಲೆದಂಡ, ಇಲ್ಲಿವೆ 5 ಕಾರಣಗಳು
TV9 Web
| Edited By: |

Updated on: Jan 29, 2024 | 9:24 PM

Share

ಮಂಡ್ಯ, (ಜನವರಿ 29): ಮಂಡ್ಯದ ಕೆರಗೋಡು (Keragodu) ಗ್ರಾಮದ ಧ್ವಜ ವಿವಾದ ಪ್ರಕರಣ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಇದರ ಮಧ್ಯೆ ಇದೀಗ ಸರ್ಕಾರದ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕೆರಗೋಡು ಗ್ರಾಮ ಪಂಚಾಯಿತಿ ಪಿಡಿಓ ಜೀವನ್‌.ಬಿ.ಎಂ ಅವರನ್ನು ಅಮಾನತು ಮಾಡಲಾಗಿದೆ. ಐದು ಕಾರಣಗಳನ್ನು ನೀಡಿ ಪಿಡಿಓ‌ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪಂಚಾಯತ್ ಸಿಇಓ ತನ್ವೀರ್ ಆಶೀಫ್ ಸೇಠ್ ಆದೇಶ ಹೊರಡಿಸಿದ್ದಾರೆ.

ಗ್ರಾಮ ಪಂಚಾಯಿತಿ ಸ್ವತ್ತನ್ನು ಖಾಸಗಿಯವರಿಗೆ ನೀಡುವುದಕ್ಕೆ ಸರ್ಕಾರದ ಅನುಮತಿ ಕಡ್ಡಾಯ. ಆದ್ರೆ, ಸದರಿ ನಿಯಮ ಉಲ್ಲಂಘಿಸಿ ಖಾಸಗಿಯವರಿಗೆ ನೀಡಿ ಕೆರಗೋಡು ಗ್ರಾಮದಲ್ಲಿ ನಡೆದ ಸಂಘರ್ಷಕ್ಕೆ ಪಿಡಿಓ ನೇರ ಕಾರಣ ಎಂದು ಅಮಾನತು ಮಾಡಲಾಗಿದೆ.

ಇದನ್ನೂ ಒದಿ: ಕೆರಗೋಡು ಹನುಮ ಧ್ವಜ ಗಲಭೆ ಪ್ರಕರಣ: ನಮ್ಮ ಇಂಟಲಿಜೆನ್ಸಿ ಫೇಲಾಗಿದೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್

ಅಮಾನತ್ತಿಗೆ ಐದು ಕಾರಣಗಳು

  • ಗ್ರಾಮ ಪಂಚಾಯಿತಿ ಸ್ವತ್ತನ್ನು ಖಾಸಗಿಯವರಿಗೆ ನೀಡುವುದಕ್ಕೆ ಸರ್ಕಾರದ ಅನುಮತಿ ಕಡ್ಡಾಯ. ಆದ್ರೆ, ಸದರಿ ನಿಯಮ ಉಲ್ಲಂಘಿಸಿ ಖಾಸಗಿಯವರಿಗೆ ನೀಡಿರುವುದು.
  • ಧ್ವಜ ಸ್ತಂಭ ನಿರ್ಮಾಣಕ್ಕೆ ಅನುಮತಿ ನೀಡಿ ಕರ್ತವ್ಯ ಲೋಪ.
  • ಧ್ವಜ ಸ್ತಂಭದಲ್ಲಿ ರಾಷ್ಟ್ರೀಯ ಧ್ವಜ ಹಾರಿಸಲು ಅನುಮತಿ ನೀಡಿ, ಷರತ್ತು ಉಲ್ಲಂಘಿಸಿದ್ರು ಕ್ರಮಕೈಗೊಳ್ಳದೆ ನಿರ್ಲಕ್ಷ.
  • ರಾಷ್ಟ್ರ ಧ್ವಜದ ಬದಲು ಹನುಮ ಧ್ವಜ‌ ಹಾರಿಸಲು ಅವಕಾಶ ನೀಡಿರುವುದು.
  • ಹನುಮ‌ ಧ್ವಜ‌ಹಾರಿಸಿದ್ದರು ಯಾವುದೇ ಕ್ರಮ ಕೈಗೊಳ್ಳದಿರುವುದು.

ಈ ಮೇಲೆ ಐದು ಕಾರಣಗಳನ್ನು ನೀಡಿ ಕೆರಗೋಡು ಗ್ರಾಮ ಪಂಚಾಯಿತಿ ಪಿಡಿಓ ಜೀವನ್‌.ಬಿ.ಎಂ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪಂಚಾಯತ್ ಸಿಇಓ ತನ್ವೀರ್ ಆಶೀಫ್ ಸೇಠ್ ಆದೇಶ ಹೊರಡಿಸಿದ್ದಾರೆ.