ಮಂಡ್ಯ, (ಜನವರಿ 29): ಮಂಡ್ಯದ ಕೆರಗೋಡು (Keragodu) ಗ್ರಾಮದ ಧ್ವಜ ವಿವಾದ ಪ್ರಕರಣ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಇದರ ಮಧ್ಯೆ ಇದೀಗ ಸರ್ಕಾರದ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕೆರಗೋಡು ಗ್ರಾಮ ಪಂಚಾಯಿತಿ ಪಿಡಿಓ ಜೀವನ್.ಬಿ.ಎಂ ಅವರನ್ನು ಅಮಾನತು ಮಾಡಲಾಗಿದೆ. ಐದು ಕಾರಣಗಳನ್ನು ನೀಡಿ ಪಿಡಿಓ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪಂಚಾಯತ್ ಸಿಇಓ ತನ್ವೀರ್ ಆಶೀಫ್ ಸೇಠ್ ಆದೇಶ ಹೊರಡಿಸಿದ್ದಾರೆ.
ಗ್ರಾಮ ಪಂಚಾಯಿತಿ ಸ್ವತ್ತನ್ನು ಖಾಸಗಿಯವರಿಗೆ ನೀಡುವುದಕ್ಕೆ ಸರ್ಕಾರದ ಅನುಮತಿ ಕಡ್ಡಾಯ. ಆದ್ರೆ, ಸದರಿ ನಿಯಮ ಉಲ್ಲಂಘಿಸಿ ಖಾಸಗಿಯವರಿಗೆ ನೀಡಿ ಕೆರಗೋಡು ಗ್ರಾಮದಲ್ಲಿ ನಡೆದ ಸಂಘರ್ಷಕ್ಕೆ ಪಿಡಿಓ ನೇರ ಕಾರಣ ಎಂದು ಅಮಾನತು ಮಾಡಲಾಗಿದೆ.
ಈ ಮೇಲೆ ಐದು ಕಾರಣಗಳನ್ನು ನೀಡಿ ಕೆರಗೋಡು ಗ್ರಾಮ ಪಂಚಾಯಿತಿ ಪಿಡಿಓ ಜೀವನ್.ಬಿ.ಎಂ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪಂಚಾಯತ್ ಸಿಇಓ ತನ್ವೀರ್ ಆಶೀಫ್ ಸೇಠ್ ಆದೇಶ ಹೊರಡಿಸಿದ್ದಾರೆ.