ಪಾಂಡವಪುರ: ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಬಾಲಕರು ಜಲ ಸಮಾಧಿ

ಕೃಷಿ ಹೊಂಡದಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ನಡೆದಿದೆ. ಚಂದನ್(11), ಕಾರ್ತಿಕ್(10), ರಿತೇಶ್(8) ಮೃತ ವಿದ್ಯಾರ್ಥಿಗಳು. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • TV9 Web Team
  • Published On - 14:56 PM, 8 Apr 2021
ಪಾಂಡವಪುರ: ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಬಾಲಕರು ಜಲ ಸಮಾಧಿ
ಕೃಷಿ ಹೊಂಡ

ಮಂಡ್ಯ: ರಾಜ್ಯದಲ್ಲಿ ಬೇಸಿಗೆಯ ತಾಪ ಹೆಚ್ಚಾಗುತ್ತಿದೆ. ಬಿಸಿಲು ಹೆಚ್ಚಾದ ಕಾರಣ ಮನಸ್ಸು ತಂಪು ಬಯಸುತ್ತಿರುತ್ತೆ. ಅಲ್ಲದೆ ಕೊರೊನಾ ಹಿನ್ನೆಲೆಯಲ್ಲಿ ಮಕ್ಕಳು ಶಾಲೆಗೆ ಸಹ ಹೋಗುತ್ತಿಲ್ಲ. ಹೀಗಾಗಿ ಬೇಸಿಗೆ ಬೇಗೆ ಕಳೆಯಲು ಸುತ್ತಾಡಿಕೊಂಡು ಬರುವ ಎಂದು ಕೃಷಿ ಹೊಂಡದತ್ತ ಮುಖ ಮಾಡಿದ್ದ ಮೂವರು ಬಾಲಕರು ನೀರು ಪಾಲಾಗಿದ್ದಾರೆ.

ಕೃಷಿ ಹೊಂಡದಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ನಡೆದಿದೆ. ಚಂದನ್(11), ಕಾರ್ತಿಕ್(10), ರಿತೇಶ್(8) ಮೃತ ವಿದ್ಯಾರ್ಥಿಗಳು. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಾಲಕರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳದಲ್ಲಿ ನೂರಾರು ಮಂದಿ ಜಮಾಯಿಸಿದ್ದು ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. ಆದರೆ ಆಡಿ ಬೆಳೆಯಬೇಕಿದ್ದ ಬಾಲಕರು ಈ ರೀತಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿರುವುದೇ ದುರಂತ.

ಇನ್ನು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇದೇ ಮೊದಲೇನಲ್ಲ. ಈ ಹಿಂದೆಯೂ ಇಂತಹ ಅನೇಕ ಘಟನೆಗಳು ನಡೆದಿವೆ. ಆದರೆ ಇದಕ್ಕೆ ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳನ್ನು ಮಾತ್ರ ಯಾರು ತೆಗೆದುಕೊಳ್ಳುತ್ತಿಲ್ಲ.

farm pond death
ಇದನ್ನೂ ಓದಿ: ಕೃಷಿ ಹೊಂಡದಲ್ಲಿ ಕಡಲೆಕಾಯಿ ತೊಳೆಯಲು ಹೋದ ಬಾಲಕ ವಾಪಸ್​ ಬರಲೇ ಇಲ್ಲ..

(Three boys drown in farm pond in mandya)