KRS​ ಡ್ಯಾಂಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್​: ಮಹದೇವಪ್ಪ ವಿವಾದಾತ್ಮಕ ಹೇಳಿಕೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಚಿವ ಹೆಚ್​ ಸಿ ಮಹದೇವಪ್ಪ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಸಚಿವ ಹೆಚ್​ ಸಿ ಮಹದೇವಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಚಿವ ಹೇಳಿಕೆ ಚರ್ಚೆ ಹುಟ್ಟು ಹಾಕಿದೆ.

KRS​ ಡ್ಯಾಂಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್​: ಮಹದೇವಪ್ಪ ವಿವಾದಾತ್ಮಕ ಹೇಳಿಕೆ
ಸಚಿವ ಹೆಚ್​ಸಿ ಮಹದೇವಪ್ಪ
Edited By:

Updated on: Aug 04, 2025 | 9:56 AM

ಮಂಡ್ಯ, ಆಗಸ್ಟ್​ 03: ಕೃಷ್ಣರಾಜ ಸಾಗರ (KRS) ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ (Tipu Sultan) ಎಂದು ಸಚಿವ ಹೆಚ್.ಸಿ. ಮಹದೇವಪ್ಪ (HC Mahadevappa) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಮಹದೇವಪ್ಪ, ಕೆಆರ್​ಎಸ್​ ಅಣೆಕಟ್ಟಿಗೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದರು. ಆದರೆ, ಈಗ ಇದನ್ನು ಹೇಳಲು ಯಾರಿಗೂ ಧೈರ್ಯ ಇಲ್ಲ. ಕೆಆರ್​ಎಸ್​ ಗೇಟ್​ನ ಹೆಬ್ಬಾಗಿಲಿನಲ್ಲಿ ಈಗಲೂ ಅಡಿಗಲ್ಲು ಕಾಣಬಹುದು ಎಂದು ಹೇಳಿದರು.

ಟಿಪ್ಪು ದೇವದಾಸಿ ಪದ್ಧತಿ ರದ್ದು ಮಾಡಿದರು

ಚರಿತ್ರೆ ಗೊತ್ತಿಲ್ಲದವರು ಚರಿತ್ರೆ ನಿರ್ಮಾಣ ಮಾಡಲು ಸಾದ್ಯವಿಲ್ಲ ಎಂದು ಡಾ. ಬಿಆರ್​ ಅಂಬೇಡ್ಕರ್​ ಹೇಳಿದ್ದಾರೆ. ಟಿಪ್ಪು ಸುಲ್ತಾನ ಮಸೀದಿ ಪಕ್ಕದಲ್ಲಿ ಶ್ರೀರಂಗಪಟ್ಟಣದ ದೇವಸ್ಥಾನ ಇದೆ. ಈಕಡೆ ಅಲ್ಲವೋ ಅಕ್ಬರ್ ಅಂತಾರೆ, ಆಕಡೆ ಗಂಟೆ ಟನ್, ಟನ್ ಎನ್ನುತ್ತದೆ. ಟಿಪ್ಪು ಸುಲ್ತಾನ್​ ಎರಡೂ ಕೇಳಿಕೊಂಡು ಇದ್ದರು. ಟಿಪ್ಪು ಸುಲ್ತಾನ್ ಸಮಚಿತ್ತರಾಗಿದ್ದವರು ಎಂದರು.

ಟಿಪ್ಪು ಸುಲ್ತಾನ್ ದೇವದಾಸಿ ಪದ್ಧತಿ ರದ್ದು ಮಾಡಿದರು. ಟಿಪ್ಪು ಸುಲ್ತಾನ್​ ಅವರ ಕಾಲದಲ್ಲಿ ಒಂದೇ ಒಂದು ಇಂಚು ಭೂಮಿಯನ್ನು ಉಳ್ಳವರಿಗೆ ಕೊಟ್ಟಿರಲಿಲ್ಲ. ಟಿಪ್ಪು ಸುಲ್ತಾನ್ ಭಾರತ ದೇಶಕ್ಕೆ ರೇಷ್ಮೆ ಕೃಷಿ ತಂದರು. ಮೈಸೂರಿನ ಅರಮನೆ ಇದ್ದಿದ್ದು ಶ್ರೀರಂಗಪಟ್ಟಣದಲ್ಲಿ. ಟಿಪ್ಪು ಸುಲ್ತಾನ್​ ರಣರಂಗದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದೊಡ್ಡ ಸ್ವತಂತ್ರ ಸೇನಾನಿ ಎಂದು ಹಾಡಿ ಹೊಗಳಿದರು.

ಇದನ್ನೂ ಓದಿ: ಕಾಂಗ್ರೆಸ್​​ನಲ್ಲಿ ಮತ್ತೆ ದಲಿತ ಸಿಎಂ ಕೂಗು? ಕಿಚ್ಚು ಹಚ್ಚಿದ ಸಚಿವ ಡಾ ಮಹದೇವಪ್ಪ ಹೇಳಿಕೆ

ಕೃಷ್ಣರಾಜಸಾಗರ ಅಣೆಕಟ್ಟು

ಕೆಆರ್​ಎಸ್​ ಅಣೆಕಟ್ಟೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿದೆ. ಕೆಆರ್​ಎಸ್​ ಅಣೆಕಟ್ಟು ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಒಂದು ಪ್ರಮುಖ ಡ್ಯಾಂ ಆಗಿದೆ. ಇದು ಮೈಸೂರು ಜಿಲ್ಲೆಯ ಕೃಷ್ಣರಾಜಸಾಗರ ಪ್ರದೇಶದಲ್ಲಿದೆ. ಕೆಆರ್​ಎಸ್ ಅಣೆಕಟ್ಟನ್ನು 1932 ರಲ್ಲಿ ಪೂರ್ಣಗೊಳಿಸಲಾಯಿತು ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಅವರ ಮಾರ್ಗದರ್ಶನದಲ್ಲಿ ನಿರ್ಮಿಸಲಾಗಿದೆ. ಈ ಅಣೆಕಟ್ಟು ಮೈಸೂರು, ಮಂಡ್ಯ ಮತ್ತು ಬೆಂಗಳೂರು ನಗರಗಳಿಗೆ ಕುಡಿಯುವ ನೀರು ಮತ್ತು ನೀರಾವರಿ ಸೌಲಭ್ಯಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅಣೆಕಟ್ಟಿನ ಜೊತೆಗೆ ನಿರ್ಮಿಸಲಾದ ಬೃಂದಾವನ ಉದ್ಯಾನ ಉತ್ತಮವಾದ ಪ್ರವಾಸಿ ಆಕರ್ಷಣೆ ತಾಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:37 pm, Sun, 3 August 25

Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
Follow Us